Mysore; ಅಲಕೃಂತ ಆನೆಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಗಜಪಯಣಕ್ಕೆ ಚಾಲನೆ
Team Udayavani, Sep 1, 2023, 11:30 AM IST
ಮೈಸೂರು: ವಿಶ್ವವಿಖ್ಯಾತ 413 ನೇ ಮೈಸೂರು ದಸರಾಗೆ ನಾಂದಿ ಹಾಡುವ ಗಜಪಯಣಕ್ಕೆ ನಾಗರಹೊಳೆ ಉದ್ಯಾನದ ಹೆಬ್ಬಾಗಿಲು ವೀರನಹೊಸಹಳ್ಳಿ ಬಳಿ ಇಂದು ಅಲಂಕೃತ ಗಜಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ಚಾಲನೆ ನೀಡಿದರು.
9.45 ರಿಂದ 10-15 ರ ನಡುವೆ ಸಲುವ ತುಲಾ ಶುಭ ಲಗ್ನದಲ್ಲಿ ಸಂಪ್ರದಾಯದಂತೆ ಮೈಸೂರು ಅರಮನೆ ಪುರೋಹಿತರಾದ ಪ್ರಹಲ್ಲಾದರಾವ್ ತಂಡ ವೀರನಹೊಸಹಳ್ಳಿ ಗೇಟ್ ಬಳಿಯ ಆಂಜನೇಯ ದೇವಾಲಯದಲ್ಲಿ ವಿಶೇಷ ಪೂಜೆ ನೆರೆವೇರಿಸಿದರು.
ಗಜಪಯಣದಲ್ಲಿ ಅಭಿಮನ್ಯು ನೇತೃತ್ವದಲ್ಲಿ ಅರ್ಜುನ, ಭೀಮಾ, ಗೋಪಿ, ಧನಂಜಯಾ, ವರಲಕ್ಷ್ಮಿ, ವಿಜಯಾ, ಮಹೇಂದ್ರ ಹಾಗೂ ಕಂಜನ್ ಆನೆಗಳು ಮೈಸೂರಿಗೆ ಆಗಮಿಸಲಿದೆ.
ಅರಣ್ಯ ಸಚಿವ ಈಶ್ವರ್ ಖಂಡ್ರೆ, ಹುಣಸೂರು ಶಾಸಕ ಹರೀಶ್ ಗೌಡ, ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ, ಅರಣ್ಯಧಿಕಾರಿ ಸೌರಭ್ ಕುಮಾರ್ ಹಾಗೂ ಇತರೆ ಗಣ್ಯರು ಉಪಸ್ಧಿತರಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.