Raipur; ಸಹೋದರಿಯರಿಬ್ಬರ ಮೇಲೆ ಗ್ಯಾಂಗ್ ರೇಪ್; ಹತ್ತು ಮಂದಿ ಬಂಧನ
ಬಂಧಿತರಲ್ಲಿ ಸ್ಥಳೀಯ ಬಿಜೆಪಿ ಮುಖಂಡರೊಬ್ಬರ ಪುತ್ರನೂ ಸೇರಿದ್ದಾನೆ...
Team Udayavani, Sep 1, 2023, 6:14 PM IST
ರಾಯ್ಪುರ: ಛತ್ತೀಸ್ಗಢದಲ್ಲಿ ಇಬ್ಬರು ಸಹೋದರಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಸ್ಥಳೀಯ ಬಿಜೆಪಿ ಮುಖಂಡರೊಬ್ಬರ ಪುತ್ರ ಸೇರಿದಂತೆ ಹತ್ತು ಮಂದಿಯನ್ನು ಶುಕ್ರವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಹೋದರಿಯರು ಒಬ್ಬ ವ್ಯಕ್ತಿಯೊಂದಿಗೆ ರಕ್ಷಾಬಂಧನ ಹಬ್ಬವನ್ನು ಆಚರಿಸಿ ಹಿಂದಿರುಗುತ್ತಿದ್ದಾಗ ಭನ್ಸೋಜ್ ಗ್ರಾಮದ ಬಳಿ ಗುರುವಾರ ತಡರಾತ್ರಿ ಈ ಘಟನೆ ನಡೆದಿದೆ ಎಂದು ರಾಯ್ಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಪ್ರಶಾಂತ್ ಅಗರವಾಲ್ ಹೇಳಿದ್ದಾರೆ.
ಸಹೋದರಿಯರು 19 ವರ್ಷ ಮತ್ತು 16 ವರ್ಷ ವಯಸ್ಸಿನ ಸಂತ್ರಸ್ತೆಯರು ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಮಂದಿರ ಹಸೌದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ, ನಂತರ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಬದುಕುಳಿದವರು ಮೋಟಾರ್ ಸೈಕಲ್ನಲ್ಲಿ ಸ್ನೇಹಿತನೊಂದಿಗೆ ತುಮಗಾಂವ್ ಗ್ರಾಮದಿಂದ ರಾಯ್ಪುರಕ್ಕೆ ಹಿಂತಿರುಗುತ್ತಿದ್ದಾಗ ಮೂವರು ಆರೋಪಿಗಳು ಭನ್ಸೋಜ್ ಬಳಿ ಅವರನ್ನು ಅಡ್ಡಗಟ್ಟಿ ಕೃತ್ಯ ಎಸಗಿದ್ದಾರೆ.
ದೂರಿನ ಪ್ರಕಾರ ಮೂವರೂ ನಗದು ಹಾಗೂ ಮೊಬೈಲ್ ದೋಚಿದ್ದು, ಇತರ ಏಳು ಆರೋಪಿಗಳು ಈ ಮಧ್ಯೆ ನಾಲ್ಕು ದ್ವಿಚಕ್ರವಾಹನಗಳಲ್ಲಿ ಸ್ಥಳಕ್ಕೆ ತಲುಪಿ ಕೃತ್ಯ ಎಸಗಿದ್ದಾರೆ. ಆರೋಪಿಗಳು ಇಬ್ಬರು ಸಹೋದರಿಯರನ್ನು ಮುಖ್ಯ ರಸ್ತೆಯಿಂದ ದೂರವಿರುವ ಪ್ರತ್ಯೇಕ ಸ್ಥಳಕ್ಕೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಜತೆಗಿದ್ದ ವ್ಯಕ್ತಿಯನ್ನು ಥಳಿಸಿದ್ದಾರೆ ಎಂದು ಎಸ್ಎಸ್ಪಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal ಕೋರ್ಟ್ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ
ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
Supreme court ಯೂಟ್ಯೂಬ್ ಲೈವ್ ಸ್ಟ್ರೀಮ್ ಚಾನೆಲ್ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!
Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.