Mangaluru ಕರಾವಳಿಯ ಭದ್ರತೆಯಲ್ಲಿ ಕೋಸ್ಟ್‌ಗಾರ್ಡ್‌ ಮಹತ್ವದ ಪಾತ್ರ

ಮೈಟ್‌ನಲ್ಲಿ ನಡೆದ ವಿಚಾರಗೋಷ್ಠಿಯಲ್ಲಿ ಕಮಾಂಡೆಂಟ್‌ ಡಿಐಜಿ ಮಿಶ್ರ

Team Udayavani, Sep 2, 2023, 12:29 AM IST

Mangaluru ಕರಾವಳಿಯ ಭದ್ರತೆಯಲ್ಲಿ ಕೋಸ್ಟ್‌ಗಾರ್ಡ್‌ ಮಹತ್ವದ ಪಾತ್ರ

ಮಂಗಳೂರು: ಭಾರತೀಯ ಕೋಸ್ಟ್‌ ಗಾರ್ಡ್‌ ರಾಷ್ಟ್ರದ ಕರಾವಳಿ ಪ್ರದೇಶಗಳ ಭದ್ರತೆಯನ್ನು ಖಾತ್ರಿಪಡಿಸುವಲ್ಲಿ ಮತ್ತು ಕಡಲ್ಗಳ್ಳತನ, ಕಳ್ಳಸಾಗಣೆ, ಭಯೋತ್ಪಾದನೆ ಮತ್ತು ಕಾನೂನುಬಾಹಿರ ಚಟುವಟಿಕೆಗಳಂತಹ ವಿವಿಧ ಬೆದರಿಕೆಗಳಿಂದ ರಕ್ಷಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದು ಕರಾವಳಿ ಕಾವಲು ಪಡೆ ಕರ್ನಾಟಕದ ಕಮಾಂಡೆಂಟ್‌ ಡಿಐಜಿ ಪಿ. ಕೆ. ಮಿಶ್ರ ಹೇಳಿದರು.

ಮಂಗಳೂರು ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ ಮತ್ತು ಎಂಜಿನಿಯರಿಂಗ್‌-ಮೈಟ್‌ ಇದರ ಏರೋನಾಟಿಕಲ್‌ ಎಂಜಿನಿಯರಿಂಗ್‌ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಾದ “ಭಾರತೀಯ ಕರಾವಳಿ ಕಾವಲು ಪಡೆ ಸವಾಲುಗಳು ಮತ್ತು ಅವಕಾಶಗಳು’ ವಿಚಾರದ ಬಗ್ಗೆ ಒಂದು ದಿನದ ವೃತ್ತಿ ಮಾರ್ಗದರ್ಶನ ವಿಚಾರಗೋಷ್ಠಿಯಲ್ಲಿ ಅವರು ಮಾತನಾಡಿದರು.

ಕೋಸ್ಟ್‌ಗಾರ್ಡ್‌ ಭಾರತದ ಕಡಲ ಹಿತಾಸಕ್ತಿಗಳನ್ನು ಕಾಪಾಡುವ ಮತ್ತು ದೇಶದ ಪ್ರಾದೇಶಿಕ ಜಲ ಮತ್ತು ವಿಶೇಷ ಆರ್ಥಿಕ ವಲಯದೊಳಗೆ ಕಡಲ ಕಾನೂನುಗಳನ್ನು ಜಾರಿಗೊಳಿಸುವ ಜವಾಬ್ದಾರಿಯನ್ನು ಹೊಂದಿದೆ. ಸಮುದ್ರದಲ್ಲಿ ತೊಂದರೆಯಲ್ಲಿರುವ ಹಡಗುಗಳು ಮತ್ತು ವ್ಯಕ್ತಿಗಳಿಗೆ ಸಹಾಯ ಮಾಡಲು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುವ ಜವಾಬ್ದಾರಿಯನ್ನು ಹೊಂದಿದೆ. ಸಂಕಷ್ಟದ ನೆರವಿಗಾಗಿ ಕರೆಗಳಿಗೆ ಪ್ರತಿಕ್ರಿಯಿಸುವುದು, ರಕ್ಷಣಾ ಕಾರ್ಯಾಚರಣೆ ಕೈಗೊಳ್ಳುವುದು ನಮ್ಮ ಜವಾಬ್ದಾರಿಯಾಗಿದೆ ಎಂದರು.

ಅಲ್ಲದೆ ಸಮುದ್ರ ಪರಿಸರ ಮತ್ತು ಕರಾವಳಿ ಪ್ರದೇಶಗಳನ್ನು ರಕ್ಷಿಸಲು ಸಮುದ್ರ ಮಾಲಿನ್ಯದ ಘಟನೆಗಳು ಮತ್ತು ತೈಲ ಸೋರಿಕೆಗಳನ್ನು ತಡೆಗಟ್ಟುವಲ್ಲಿ ಮತ್ತು ಸ್ಪಂದಿಸುವಲ್ಲಿ ಕೋಸ್ಟ್‌ಗಾರ್ಡ್‌ ತೊಡಗಿಸಿಕೊಂಡಿದೆ. ಅಕ್ರಮ ಮೀನುಗಾರಿಕೆ, ಅನಧಿಕೃತ ಪ್ರವೇಶ, ಮತ್ತು ಸರಕು ಮತ್ತು ಜನರ ಕಳ್ಳಸಾಗಣೆಯನ್ನು ತಡೆಗಟ್ಟುವುದು ಸೇರಿದಂತೆ ವಿವಿಧ ಕಡಲ ಕಾನೂನುಗಳನ್ನು ಅನುಷ್ಠಾನ ಗೊಳಿಸುತ್ತದೆ. ಭಾರತದ ಕಡಲ ಗಡಿಗಳ ಮೇಲೆ ನಿರಂತರ ಕಣ್ಗಾವಲು ಇರಿಸುವ ಜತೆ ಚಂಡಮಾರುತಗಳು ಮತ್ತು ಸುನಾಮಿಯಂತಹ ನೈಸರ್ಗಿಕ ವಿಪತ್ತುಗಳ ಸಮಯದಲ್ಲಿ, ಮಾನವೀಯ ನೆರವು, ವಿಪತ್ತು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಸಂಘಟಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ ಎಂದು ವಿವರಿಸಿದರು.

ಕಮಾಂಡೆಂಟ್‌ ಮಸೂದಿ ವೆಂಕಯ್ಯ ಮತ್ತು ಸಹಾಯಕ ಕಮಾಂಡೆಂಟ್‌ ದೀಪಕ್‌ ಚೋಪ್ರಾ ಪಾಲ್ಗೊಂಡಿದ್ದರು.

ಭಾರತೀಯ ಕೋಸ್ಟ್‌ ಗಾರ್ಡ್‌ ಪರಿಣಾಮಕಾರಿ ಕಣ್ಗಾವಲು, ಸಂವಹನ ಮತ್ತು ಕಡಲ ಘಟನೆಗಳಿಗೆ ಸ್ಪಂದಿಸುವುದಕ್ಕಾಗಿ ಆಧುನಿಕ ತಂತ್ರಜ್ಞಾನವನ್ನು ಹೊಂದಿರುವ ಹಡಗುಗಳು, ವೇಗದ ದೋಣಿಗಳು, ವಿಮಾನಗಳು ಮತ್ತು ಹೆಲಿಕಾಪ್ಟರ್‌ಗಳನ್ನು ಹೊಂದಿದೆ ಎಂದವರು ವಿವರಿಸಿದರು.

ಕಾಲೇಜಿನ ವಿವಿಧ ಎಂಜಿನಿಯರಿಂಗ್‌ ವಿಭಾಗಗಳ 350ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಪ್ರಯೋಜನ ಪಡೆದರು.

ಟಾಪ್ ನ್ಯೂಸ್

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.