![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 2, 2023, 3:58 PM IST
ನವದೆಹಲಿ: ಕೋಟಕ್ ಮಹೀಂದ್ರಾ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ಥಾನಕ್ಕೆ ಉದಯ್ ಕೋಟಕ್ ರಾಜೀನಾಮೆ ನೀಡಿದ್ದಾರೆ.
ನಿರ್ದೇಶಕರ ಮಂಡಳಿಯ ಅಧ್ಯಕ್ಷ ಪ್ರಕಾಶ್ ಆಪ್ಟೆ ಅವರಿಗೆ ಬರೆದ ಪತ್ರದಲ್ಲಿ, ತನ್ನ ಅಧಿಕಾರ ಅವಧಿಯು ಡಿಸೆಂಬರ್ 31, 2023 ರವರೆಗೆ ಇದ್ದು ಅದಕ್ಕೂ ಮೊದಲೇ ತಮ್ಮ ಹುದ್ದೆಗೆ ರಾಜೀನಾಮೆ ನೀಡುತ್ತಿರುವುದಾಗಿ ಬರೆದುಕೊಂಡಿದ್ದಾರೆ.
ಆದಾಗ್ಯೂ, ಕೋಟಕ್ ಅವರು ಬ್ಯಾಂಕ್‌ನ ಕಾರ್ಯನಿರ್ವಾಹಕೇತರ ನಿರ್ದೇಶಕರಾಗಿ ಮುಂದುವರಿಯುತ್ತಾರೆ ಎಂದು ಆಡಳಿತ ಮಂಡಳಿ ಹೇಳಿದೆ.
ರಾಜೀನಾಮೆ ಪತ್ರದಲ್ಲೂ ಕೋಟಕ್ ಅವರು ತಾನು ಸರಿಯಾದ ಸಮಯದಲ್ಲಿ ಹುದ್ದೆಗೆ ರಾಜಿನಾಮೆಯನ್ನು ನೀಡಿರುವುದಾಗಿ ಬರೆದುಕೊಂಡಿದ್ದಾರೆ.
ಮಧ್ಯಂತರ ಎಂಡಿ ಹಾಗೂ ಸಿಇಒ ಆಗಿ ಜಂಟಿ ವ್ಯವಸ್ಥಾಪಕ ನಿರ್ದೇಶಕರಾದ ದೀಪಕ್ ಗುಪ್ತಾ ಇರಲಿದ್ದಾರೆ. ಆರ್‌ಬಿಐ ಮತ್ತು ಬ್ಯಾಂಕ್ ಸದಸ್ಯರ ಅನುಮೋದನೆ ಬಳಿಕ ಡಿಸೆಂಬರ್ 31 ರವರೆಗೆ ದೀಪಕ್ ಗುಪ್ತಾ ಕೋಟಕ್ ಬ್ಯಾಂಕ್‌ನ ಎಂಡಿ ಮತ್ತು ಸಿಇಒ ಆಗಿ ಕರ್ತವ್ಯ ನಿರ್ವಹಿಸುತ್ತಾರೆ ಎಂದು ಹೇಳಿಕೆಯಲ್ಲಿ ಉಲ್ಲೇಖ ಮಾಡಲಾಗಿದೆ.
ಇದನ್ನೂ ಓದಿ: Holehonnur: ಜಮೀನು ವಿವಾದ; 300 ಅಡಿಕೆ ಗಿಡಗಳನ್ನು ಕಿತ್ತು ಹಾಕಿದ ಸಹೋದರರು
Succession at Kotak Mahindra Bank has been foremost on my mind, since our Chairman, myself and Joint MD are all required to step down by year end. I am keen to ensure smooth transition by sequencing these departures. I initiate this process now and step down voluntarily as CEO.…
— Uday Kotak (@udaykotak) September 2, 2023
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.