Model: ಪ್ಲಾಸ್ಟಿಕ್ ಸರ್ಜರಿ ಒಳಗಾಗಿ ಅನಾರೋಗ್ಯ: 79 ದಿನಗಳ ನರಳಾಟದ ಬಳಿಕ ಖ್ಯಾತ ನಟಿ ಮೃತ್ಯು
Team Udayavani, Sep 2, 2023, 5:24 PM IST
ಬ್ಯೂನಸ್ ಐರಿಸ್: ಪ್ಲಾಸ್ಟಿಕ್ ಸರ್ಜರಿ ಒಳಗಾಗಿದ್ದ ಖ್ಯಾತ ನಟಿ, ರೂಪದರ್ಶಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಅರ್ಜೆಂಟೀನಾದ ನಟಿ, ರೂಪದರ್ಶಿ ಮತ್ತು ಟಿವಿ ನಿರೂಪಕಿ ಸಿಲ್ವಿನಾ ಲೂನಾ (43) ಪ್ಲ್ಯಾಸ್ಟಿಕ್ ಸರ್ಜರಿಯಿಂದ ಉಂಟಾದ ಅಡ್ಡ ಪರಿಣಾಮದಿಂದ ಇಹಲೋಕ ತ್ಯಜಿಸಿದ್ದಾರೆ.
ಘಟನೆ ಹಿನ್ನೆಲೆ: 2011 ರಲ್ಲಿ ಸಿಲ್ವಿನಾ ಬ್ಯಾಕ್ ಸರ್ಜರಿ (ಬಟ್ ಲಿಫ್ಟ್) ಸರ್ಜರಿಗೆ ಒಳಗಾಗಿದ್ದರು. ಇದಾದ ಬಳಿಕ ಅವರಿಗೆ ಕಿಡ್ನಿಯಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು.ಇದರಿಂದ ಅವರು ಅನಾರೋಗ್ಯಕ್ಕೆ ಒಳಗಾಗಿದ್ದರು. 2015 ರಿಂದ ಅವರಿಗೆ ವಾರಕ್ಕೊಮ್ಮೆ ಡಯಾಲಿಸಿಸ್ ಚಿಕಿತ್ಸೆ ನೀಡಲಾಗುತ್ತಿತ್ತು.
ಹೈಪರ್‌ಕಾಲ್ಸೆಮಿಯಾದಿಂದ ಬಳಲುತ್ತಿದ್ದ ಅವರು ಇದೇ ವರ್ಷದ ಜೂನ್ ನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಒಟ್ಟು 79 ದಿನಗಳು ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ವರದಿ ತಿಳಿಸಿದೆ.
ಆದರೆ ಇತ್ತೀಚೆಗೆ ಅವರ ಆರೋಗ್ಯ ಹದಗೆಟ್ಟಿದ್ದು, ವೆಂಟಿಲೇಟರ್ ಸಪೋರ್ಟ್ ನಲ್ಲಿ ಅವರನ್ನು ಇರಿಸಲಾಗಿತ್ತು. ಅವರ ಕುಟುಂಬದವರ ಸೂಚನೆಯಂತೆ ಅವರ ವೆಂಟಿಲೇಟರ್ ಬೆಂಬಲವನ್ನು ಆಗಸ್ಟ್ 31 ರಂದು ತೆಗೆಯಲಾಗಿದೆ.
ಅರ್ಜೆಂಟೀನಾದ ನ್ಯಾಷನಲ್ ಅಡ್ಮಿನಿಸ್ಟ್ರೇಷನ್ ಆಫ್ ಡ್ರಗ್ಸ್, ಫುಡ್ ಅಂಡ್ ಮೆಡಿಕಲ್ ಟೆಕ್ನಾಲಜಿಯಿಂದ ನಿಷೇಧಿಸಲ್ಪಟ್ಟಿರುವ ಪಾಲಿಮಿಥೈಲ್‌ಮೆಥಾಕ್ರಿಲೇಟ್ ಎಂಬ ಚುಚ್ಚು ಮದ್ದನ್ನು ಸರ್ಜರಿಉ ಸಮಯದಲ್ಲಿ ನಟಿಗೆ ನೀಡಲಾಗಿತ್ತು. ಈ ಕಾರಣದಿಂದ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿತ್ತು ಎಂದು ವರದಿ ತಿಳಿಸಿದೆ.
ಮಿಯಾಮಿಯ ಜಾಕಿ ಗ್ಲೀಸನ್ ಥಿಯೇಟರ್‌ನಲ್ಲಿ 2004 ರ ಎಂಟಿವಿ ವಿಡಿಯೋ ಮ್ಯೂಸಿಕ್ ಅವಾರ್ಡ್ಸ್ ಕಾಣಿಸಿಕೊಂಡಿದ್ದರು. ‘ಎಲ್ ವಗೊನೆಟಾ ಎನ್ ಎಲ್ ಮುಂಡೋ ಡೆಲ್ ಸಿನೆ’, ‘ಸಿನ್ಕ್ರೋನಿಯಾ’ ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.