Maharashtra: ಹಿಂಸಾಚಾರ: 360ಕ್ಕೂ ಅಧಿಕ ಮಂದಿ ವಿರುದ್ಧ ಕೇಸು
Team Udayavani, Sep 2, 2023, 10:43 PM IST
ಮುಂಬೈ: ಮಹಾರಾಷ್ಟ್ರದ ಜಲ್ನಾದಲ್ಲಿ ಮರಾಠ ಕೋಟಾದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಈ ಪ್ರಕರಣ ಸಂಬಂಧಿಸಿದಂತೆ 360ಕ್ಕೂ ಅಧಿಕ ಮಂದಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅಲ್ಲದೇ, ಗಲಭೆಯನ್ನು ಶಮನಗೊಳಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂಬುದಾಗಿಯೂ ತಿಳಿಸಿದ್ದಾರೆ. ಸೊಲ್ಲಾಪುರ ಮಾರ್ಗದಲ್ಲಿ ಮನೋಜ್ ಜಾರಂಗೆ ಅವರ ನೇತೃತ್ವದಲ್ಲಿ ಮರಾಠ ಕೋಟಾಗೆ ಆಗ್ರಹಿಸಿ ಶುಕ್ರವಾರ ಪ್ರತಿಭಟನೆ ನಡೆಸಲಾಗುತ್ತಿತ್ತು.
ಪೊಲೀಸರಿಗೂ- ಪ್ರತಿಭಟನಾಕಾರರಿಗೂ ಮಾತಿನ ಚಕಮಕಿ ನಡೆದು, ಕಲ್ಲಿನ ತೂರಾಟ ನಡೆದಿದೆ. ನಂತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ಪೊಲೀಸರು ಸೇರಿದಂತೆ 25ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಹಲವಾರು ವಾಹನಗಳಿಗೂ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಬಳಿಕ ಪೊಲೀಸರು ಲಾಠಿ ಚಾರ್ಜ್ ನಡೆಸಿ, ಪ್ರತಿಭಟನಾ ಗುಂಪುಗಳನ್ನು ಚದುರಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದರು. ಹಿಂಸಾಚಾರದಲ್ಲಿ ಪಾಲ್ಗೊಂಡ ಹಿನ್ನೆಲೆಯಲ್ಲಿ 16 ಮಂದಿ ಪರಿಚಿತರು ಸೇರಿದಂತೆ 360ಕ್ಕೂ ಅಧಿಕ ಮಂದಿ ವಿರುದ್ಧ ಕೇಸು ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.