![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 2, 2023, 11:27 PM IST
ಬೆಂಗಳೂರು: ಶಿಲಾ ಗಣಿಗಾರಿಕೆ ಸಂಬಂಧಿತ ಡ್ರೋನ್ ಸರ್ವೇ ಹಾಗೂ ಸರಕು ಸಾಗಣೆ ವಾಹನಗಳನ್ನು ಜಿಪಿಎಸ್ ವ್ಯವಸ್ಥೆಗೆ ಒಳಪಡಿಸುವ ಕ್ರಮವನ್ನು ಹಿಂಪಡೆಯುವುದಿಲ್ಲ ಎಂದು ಗ್ರಾಮೀಣಾ ಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದರು.
ವಿಕಾಸಸೌಧದಲ್ಲಿ ಶನಿವಾರ ತಮ್ಮನ್ನು ಭೇಟಿಯಾದ ಕಲಬುರಗಿ ಜಿಲ್ಲಾ ಗಣಿಗಾರಿಕೆ ಸಂಘವು ಈ ಎರಡು ಕ್ರಮಗಳನ್ನು ಹಿಂಪಡೆ ಯುವಂತೆ ಆಗ್ರಹಿಸಿದೆ. ಇದಕ್ಕೆ ಒಲ್ಲೆ ಎಂದ ಸಚಿವರು, ಗಣಿ ಗುತ್ತಿಗೆದಾರರು ಈ ಎರಡು ಕ್ರಮಗಳಿಗೆ ಬಾಧ್ಯಸ್ಥರಾಗಿರಬೇಕು ಎಂಬ ಗಣಿ ಮತ್ತು ಭೂವಿಜ್ಞಾನ ಇಲಾಖಾ ಅಧಿಕಾರಿಗಳ ಮಾತನ್ನು ಸಮರ್ಥಿಸಿ ದರು.ಆದರೆ ಗಣಿಗಾರಿಕೆಗೆ ಸಂಬಂಧಿಸಿ ಕಾನೂನಿನಲ್ಲಿರುವ ಇತರ ತೊಡಕುಗಳನ್ನು ನಿವಾರಿಸಿ, ನಿಯಮಗಳನ್ನು ಸರಳಗೊಳಿಸುವ ಬಗ್ಗೆ ಸಂಬಂಧಿಸಿದ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧಾರಕ್ಕೆ ಬರುವುದಾಗಿ ಭರವಸೆ ನೀಡಿದರು.
ಇದಕ್ಕೂ ಮುನ್ನ ಮಾತನಾಡಿದ ಸಂಘದ ಅಧ್ಯಕ್ಷ ಪ್ರಕಾಶ್ ಜೈನ್, ಗಣಿ ಉದ್ದಿಮೆಯಲ್ಲಿ ತೊಡಗಿರುವವರು ಎದುರಿಸುತ್ತಿರುವ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದರು.
ಗಣಿ ಹಾಗೂ ಭೂ ವಿಜ್ಞಾನ ಇಲಾಖೆಯ ನಿರ್ದೇಶಕ ಗಿರೀಶ್ ಹಾಗೂ ಇನ್ನಿತರ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ವೀಡಿಯೋ ಸಂವಾದದ ಮೂಲಕ ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ, ಜಿಲ್ಲಾ ರಕ್ಷಣಾಧಿಕಾರಿ ಇಶಾ ಪಂತ್ ಪಾಲ್ಗೊಂಡಿದ್ದರು.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.