Kanyadi ಬೆಂಗಳೂರು, ತಿರುಪತಿಯಲ್ಲಿ ಶಾಖಾ ಮಠ: ಸಚಿವ ಮಂಕಾಳ ವೈದ್ಯ
ಕನ್ಯಾಡಿ ಶ್ರೀಗಳ ಪಟ್ಟಾಭಿಷೇಕದ 15ನೇ ವರ್ಧಂತ್ಯುತ್ಸವ
Team Udayavani, Sep 3, 2023, 11:02 PM IST
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಕನ್ಯಾಡಿಯಲ್ಲಿರುವ ಶ್ರೀರಾಮ ಕ್ಷೇತ್ರದ ಶಾಖಾ ಮಠಗಳನ್ನು ಬೆಂಗಳೂರು ಮತ್ತು ತಿರುಪತಿಯಲ್ಲಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ಆಶಯ ಮತ್ತು ಅಪೇಕ್ಷೆಯಂತೆ ಸದ್ಯದಲ್ಲಿಯೇ ಪ್ರಾರಂಭಿಸಲಾಗುವುದು ಎಂದು ರಾಜ್ಯ ಮೀನುಗಾರಿಕೆ ಮತ್ತು ಒಳನಾಡು, ಬಂದರು ಸಚಿವ ಮಂಕಾಳ ಎಸ್. ವೈದ್ಯ ಹೇಳಿದರು.
ದೇವರಗುಡ್ಡೆ ಗುರುದೇವ ಮಠದಲ್ಲಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನ ಜಗದ್ಗುರು ಪೀಠದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ಪಟ್ಟಾಭಿಷೇಕದ 15ನೇ ವರ್ಧಂತಿ ಸಮಾರಂಭದಲ್ಲಿ ಅವರು ಮಾತನಾಡಿದರು.
ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ದೇವರಗುಡ್ಡೆಯಲ್ಲಿ ಪ್ರಾರಂಭಿಸಿರುವ ಅನ್ನಛತ್ರ ಮತ್ತು ಬ್ರಹ್ಮಶ್ರೀ ನಾರಾಯಣಗುರು ಸಭಾಭವನವನ್ನು 10 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸಲಾಗುವುದು. ಇದಕ್ಕೆ ಸರಕಾರದಿಂದ ಹೆಚ್ಚಿನ ಅನುದಾನ ನೀಡಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.
ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಿ, ಧರ್ಮದ ಮರ್ಮವನ್ನರಿತು ಸಾತ್ವಿಕ ಜೀವನ ನಡೆಸಿದರೆ ಸುಖ-ಶಾಂತಿ, ನೆಮ್ಮದಿ ಪ್ರಾಪ್ತವಾಗುತ್ತದೆ. ಪಂಚೇಂದ್ರಿಯಗಳ ನಿಯಂತ್ರಣದೊಂದಿಗೆ ಅತಿಯಾಸೆ ಪಡದೆ ಎಲ್ಲರೂ ಪ್ರೀತಿ-ವಿಶ್ವಾಸದಿಂದ ಸೌಹಾರ್ದದ ಜೀವನ ನಡೆಸಬೇಕು ಎಂದರು.
ವಿಧಾನಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ಮಾತನಾಡಿ, ಯಾವುದೇ ಸಂಪತ್ತು, ಸಂಪನ್ಮೂಲ ಇಲ್ಲದ ಸಂದರ್ಭದಲ್ಲಿ ರಾಮಕ್ಷೇತ್ರದ ಸ್ಥಾಪಕ ಆತ್ಮಾನಂದ ಸರಸ್ವತಿ ಸ್ವಾಮೀಜಿ ಅವರು ಊರೂರು ಅಲೆದಾಡಿ ಭಕ್ತರಿಂದ ದೇಣಿಗೆ ಸಂಗ್ರಹಿಸಿ ಸದ್ವಿನಿಯೋಗ ಮಾಡಿ ರಾಮಕ್ಷೇತ್ರವನ್ನು ಮಾದರಿಯಾಗಿ ರೂಪಿಸಿದ್ದಾರೆ ಎಂದು ಸ್ಮರಿಸಿದರು.
ಶಾಸಕ ಹರೀಶ್ ಪೂಂಜ ಮಾತನಾಡಿ, ಮುಂದಿನ ವರ್ಷ ನೂತನ ಅನ್ನಛತ್ರ ಹಾಗೂ ಬ್ರಹ್ಮಶ್ರೀ ನಾರಾಯಣಗುರು ಸಭಾಭವನ ಉದ್ಘಾಟಿಸಲಾಗುವುದು ಎಂದರು.
ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಮಾತನಾಡಿ, ಹಿಂದೂ ಸಮಾಜದ ಸಂಘಟನೆ ಮತ್ತು ಬಲವರ್ಧನೆಗೆ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಸಕಾಲಿಕ ಮಾರ್ಗದರ್ಶನವನ್ನು ಸ್ಮರಿಸಿದರು.
ಮಠದ ಹಿರಿಯ ಟ್ರಸ್ಟಿ ಚಿತ್ತಾರಂಜನ್ ಗರೋಡಿ, ಶ್ರೀರಾಮ ಕ್ಷೇತ್ರ ಸಮಿತಿ ಸಂಚಾಲಕ ಜಯಂತ ಕೋಟ್ಯಾನ್, ಬಿಲ್ಲವರ ಮಹಾ ಮಂಡಲದ ಉಪಾಧ್ಯಕ್ಷ ನಿವೃತ್ತ ಎಸ್.ಪಿ. ಪೀತಾಂಬಾರ ಹೇರಾಜೆ, ಉತ್ತರ ಕನ್ನಡ ಜಿ.ಪಂ. ಮಾಜಿ ಉಪಾಧ್ಯಕ್ಷೆ ಪುಷ್ಪಾ ನಾಯ್ಕ, ಟ್ರಸ್ಟಿ ತುಕಾರಾಮ್ ಸಾಲಿಯಾನ್, ಶ್ರೀರಾಮ ಕ್ಷೇತ್ರ ಸಮಿತಿಯ ಜಿಲ್ಲಾ ಸಂಚಾಲಕ ಕೃಷ್ಣಪ್ಪ ಪೂಜಾರಿ ಕಲ್ಲಡ್ಕ, ಹೊನ್ನಾವರ ಶ್ರೀರಾಮ ಕ್ಷೇತ್ರ ಸಮಿತಿ ಸಂಚಾಲಕ ವಾಮನ ನಾಯ್ಕ, ಸಿದ್ದಾಪುರ ಶ್ರೀರಾಮ ಕ್ಷೇತ್ರ ಸಮಿತಿ ಸಂಚಾಲಕ ಆರ್.ಎನ್. ನಾಯ್ಕ, ಹೊನ್ನಾವರ ನಾಮಧಾರಿ ಸಂಘದ ಅಧ್ಯಕ್ಷ ಮಂಜುನಾಥ್ ನಾಯ್ಕ ಉಪಸ್ಥಿತರಿದ್ದರು.
ಮಂಗಳೂರಿನ ಗೋಕರ್ಣ ನಾಥೇಶ್ವರ ಕಾಲೇಜಿನ ಪ್ರಾಧ್ಯಾಪಕ ಪ್ರೊ| ಕೇಶವ ಬಂಗೇರ ಸ್ವಾಗತಿಸಿ, ಕೃಷ್ಣಪ್ಪ ಪೂಜಾರಿ ಕಲ್ಲಡ್ಕ ವಂದಿಸಿದರು. ಸೀತಾರಾಮ ಬಿ.ಎಸ್. ನಿರ್ವಹಿಸಿದರು.
ದೇವಸ್ಥಾನ ಹಾಗೂ ಮಠ- ಮಂದಿರಗಳಿಗೆ ನೀಡಿದ ಅನುದಾನ ಮತ್ತು ಸೇವೆ ಶಾಶ್ವತವಾಗಿ ಜನರ ಮನದಲ್ಲಿರುತ್ತದೆ. ಮುಂದಿನ ವರ್ಷ ಭಟ್ಕಳದಲ್ಲಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 16ನೇ ಚಾತುರ್ಮಾಸ ವ್ರತ ಆಚರಣೆ ನಡೆಯಲಿದ್ದು ಈ ಬಗ್ಗೆ ಪೂರ್ಣ ಸಹಕಾರ ನೀಡಲಾಗುವುದು.
– ಮಂಕಾಳ ಎಸ್. ವೈದ್ಯ, ಸಚಿವರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.