Rain: ಮಳೆಯಿಲ್ಲದೆ ಸೊರಗುತ್ತಿವೆ ಭತ್ತದ ಗದ್ದೆ

ವಿಜ್ಞಾನಿಗಳಿಂದ ಸರ್ವೇ, ತೇವಾಂಶ ಕಾಪಾಡಲು ರೈತರಿಗೆ ಸಲಹೆ

Team Udayavani, Sep 3, 2023, 11:38 PM IST

paddy farmers

ಉಡುಪಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾಡಿಕೆಯ ಮಳೆಯಾಗದೆ ಭತ್ತದ ಗದ್ದೆಗಳಲ್ಲಿ ತೇವಾಂಶದ ಕೊರತೆಯಾಗಿ ಸಸಿಗಳು ನಿಧಾನವಾಗಿ ಹಳದಿ ಬಣ್ಣಕ್ಕೆ ತಿರುಗುತ್ತಿವೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಇಳುವರಿಯ ಮೇಲೆ ಗಂಭೀರ ಪರಿಣಾಮ ಉಂಟಾಗಲಿದೆ.

ಭತ್ತದ ಬೆಳೆಯ ಸಂರಕ್ಷಣೆ ಹಾಗೂ ರೈತರಿಗೆ ಅಗತ್ಯ ಸಲಹೆ ಸೂಚನೆ ನೀಡಲು ಉಡುಪಿ ಜಿಲ್ಲೆಯಲ್ಲಿ ಕೃಷಿ ಇಲಾಖೆಯಿಂದ ವಿಜ್ಞಾನಿಗಳು ವಿವಿಧೆಡೆ ಗದ್ದೆಗೆ ಭೇಟಿ ನೀಡಿ ಪರಿಸ್ಥಿತಿ ಹೇಗಿದೆ ಎಂಬುದನ್ನು ಪರಿಶೀಲಿಸಿ, ಮಾದರಿ ಸಂಗ್ರಹಿಸುವರು.

ಬಿತ್ತನೆ ಪೂರ್ಣ
ಕರಾವಳಿಯಲ್ಲಿ ಬಿತ್ತನೆ ಪೂರ್ಣಗೊಂಡಿದೆ. ಉಡುಪಿ ಜಿಲ್ಲೆಯಲ್ಲಿ 38 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯ ಗುರಿ ಇತ್ತು.

ಆದರೆ 35,580 ಹೆಕ್ಟೇರ್‌ ಅಂದರೆ ಶೇ. 93.44ರಷ್ಟು ಬಿತ್ತನೆಯಾಗಿದೆ. ದ.ಕ. ಜಿಲ್ಲೆಯಲ್ಲಿ 9,390 ಹೆಕ್ಟೇರ್‌ ಪ್ರದೇಶ ಗುರಿ ಹೊಂದಿದ್ದು, ಶೇ. 100ರಷ್ಟು ಬಿತ್ತನೆ ಮಾಡಲಾಗಿದೆ.
ಮುಂಗಾರು ವಿಳಂಬವಾದದ್ದರಿಂದ ಉಡುಪಿಯಲ್ಲಿ ಜೂನ್‌ ಮತ್ತು ಜುಲೈ ಮೊದಲ ವಾರದಲ್ಲಿ ನಿರೀಕ್ಷೆಯಷ್ಟು ಬಿತ್ತನೆಯಾಗಿರಲಿಲ್ಲ. ಹೀಗಾಗಿ ಒಟ್ಟು ಬಿತ್ತನೆಯಲ್ಲಿ ಕುಸಿತವಾಗಿದೆ. ಕಳೆದ ವರ್ಷ 35,767 ಹೆಕ್ಟೇರ್‌ ಬಿತ್ತನೆಯಾಗಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ಸ್ವಲ್ಪ ಕಡಿಮೆಯಾಗಿದೆ ಎನ್ನುತ್ತಾರೆ ಅಧಿಕಾರಿಯೊಬ್ಬರು.

ತಾತ್ಕಾಲಿಕ ಪರಿಹಾರವೇನು?
ಮಳೆ ಕೊರತೆಯಿಂದ ಎರಡೂ ಜಿಲ್ಲೆಗಳಲ್ಲಿ ಭತ್ತದ ಗದ್ದೆಗಳಲ್ಲಿ ತೇವಾಂಶ ಕಡಿಮೆಯಾಗಿ ಸಮಸ್ಯೆ ಹೆಚ್ಚಿದೆ. ಇದನ್ನು ತಪ್ಪಿಸಲು ರೈತರು ಭತ್ತದ ಗದ್ದೆಗೆ ಕನಿಷ್ಠ ನೀರಿನ ವ್ಯವಸ್ಥೆಯನ್ನು ಮಾಡಬೇಕು ಮತ್ತು ಸಸಿಗಳ ಸಂರಕ್ಷಣೆ ದೃಷ್ಟಿಯಿಂದ ನೀರಿನಲ್ಲಿ ಪೊಟಾಷಿಯಂ ಬೆರೆಸಿ ಸಸಿಗಳಿಗೆ ಸಿಂಪಡಿಸಬೇಕು ಎನ್ನುತ್ತಾರೆ ಕೃಷಿ ಇಲಾಖೆಯ ತಾಂತ್ರಿಕ ಅಧಿಕಾರಿಗಳು.

ಭತ್ತಕ್ಕೆ ನೀರು ಯಾವಾಗ ಆವಶ್ಯಕ?
ಬಿತ್ತನೆಯಾದ ದಿನದಿಂದಲೇ ಗದ್ದೆಯಲ್ಲಿ ನೀರು ಇರಬೇಕು. ಹೂ ಬಿಡುವ ಸಂದರ್ಭದಲ್ಲೂ ನೀರು ಅತ್ಯಗತ್ಯ. ಕಾಳುಕಟ್ಟುವ ಅಥವಾ ತೆನೆ ಬಿಡುವ ಹಂತದಲ್ಲಿ ಗದ್ದೆಯಲ್ಲಿ ನೀರು ನಿಂತಿರಬೇಕು.
ಆಗ ಮಾತ್ರ ಉತ್ತಮ ಇಳುವರಿ ಪಡೆಯಲು ಸಾಧ್ಯ ಎನ್ನುತ್ತಾರೆ ವಿಜ್ಞಾನಿಗಳು. ಪ್ರಸ್ತುತ ನೀರಾವರಿ ಇದ್ದರೂ ಮಳೆಯ ರೂಪದಲ್ಲಿ ಬಂದರಷ್ಟೇ ಬೇಸಾಯಕ್ಕೆ ಉತ್ತಮ ಎನ್ನುತ್ತಾರೆ ರೈತರು. ಒಂದೆರಡು ದಿನಗಳಿಂದ ಕರಾವಳಿಯಲ್ಲಿ ಮೋಡ ಕವಿದ ವಾತಾವರಣ ಕಂಡುಬಂದರೂ ಅಲ್ಲಲ್ಲಿ ಮಳೆಯಾಗುತ್ತಿರು ವುದು ಬಿಟ್ಟರೆ ವ್ಯಾಪಕವಾಗಿ ಮಳೆಯಾಗಿಲ್ಲ.

ಈ ಬಾರಿ ಮಳೆಯ ಕೊರತೆಯಿಂದ ಭತ್ತದ ಗದ್ದೆಯಲ್ಲಿ ನೀರು ನಿಂತಿಲ್ಲ. ಬಹುತೇಕ ಕಡೆ ರೈತರು ಕೆರೆ, ನದಿಗಳಿಂದ ನೀರು ಹಾಯಿಸುವ ಪ್ರಕ್ರಿಯೆ ಆರಂಭಿಸಿದ್ದಾರೆ. ಭತ್ತದ ಗದ್ದೆಯಲ್ಲಿ ನೀರು ನಿಲ್ಲದೆ ಇದ್ದಾಗ ಕಳೆ ಜಾಸ್ತಿಯಾಗುತ್ತದೆ. ಈ ಬಗ್ಗೆ ಎಚ್ಚರ ವಹಿಸಬೇಕು ಮತ್ತು ಆಗಾಗ್ಗೆ ಕಳೆ ಕೀಳಬೇಕು. ಸಾಕಷ್ಟು ತೇವಾಂಶ ಇರುವಂತೆ ನೋಡಿಕೊಳ್ಳಬೇಕು. ತೇವಾಂಶ ಕಡಿಮೆಯಾದಂತೆ ಬಿಸಿಲಿನ ತಾಪಕ್ಕೆ ಸಸಿಗಳು ಹಳದಿ ಬಣ್ಣಕ್ಕೆ ತಿರುಗಲಾರಂಭಿಸುತ್ತವೆ. ಇದರಿಂದ ಮುಂದೆ ಇಳುವರಿ ಕಡಿಮೆಯಾಗುವ ಸಾಧ್ಯತೆಯಿದೆ.

ಮಳೆ ಕೊರತೆ ಇರುವುದರಿಂದ ಭತ್ತದ ಗದ್ದೆಯಲ್ಲಿ ನೀರು ಕಡಿಮೆಯಾಗುತ್ತಿದೆ. ಭತ್ತಕ್ಕೆ ಸಾಕಷ್ಟು ತೇವಾಂಶ ಇರಬೇಕು. ಇದೇ ಪರಿಸ್ಥಿತಿ ಮುಂದುವರಿದರೆ ಇಳುವರಿಯ ಮೇಲೆ ಪರಿಣಾಮ ಬೀರಲಿದೆ. ಹೀಗಾಗಿ ಬೆಳೆ ಸಂರಕ್ಷಣೆಗಾಗಿ ರೈತರಿಗೆ ಅಗತ್ಯ ಸಲಹೆ, ಸೂಚನೆಗಳನ್ನು ಇಲಾಖೆಯಿಂದ ನೀಡುತ್ತಿದ್ದೇವೆ.
– ಸೀತಾ ಎಂ.ಸಿ., ಡಾ| ಕೆಂಪೇಗೌಡ, ಜಂಟಿ ನಿರ್ದೇಶಕರು, ಕೃಷಿ ಇಲಾಖೆ, ಉಡುಪಿ, ದ.ಕ.

 ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Udupi: ಗೀತಾರ್ಥ ಚಿಂತನೆ-94: ದುಗುಡಗಳನ್ನು ಕೇಳುವುದೂ ಚಿಕಿತ್ಸೆ

Udupi: ಗೀತಾರ್ಥ ಚಿಂತನೆ-94: ದುಗುಡಗಳನ್ನು ಕೇಳುವುದೂ ಚಿಕಿತ್ಸೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.