G20; ಕಾಶ್ಮೀರಿ ಮುಸ್ಲಿಮರು ಶೃಂಗಸಭೆಯನ್ನು ಅಡ್ಡಿಪಡಿಸಿ: ಖಲಿಸ್ತಾನಿ ಪ್ರತ್ಯೇಕತಾವಾದಿ
Team Udayavani, Sep 4, 2023, 6:15 AM IST
ಹೊಸದಿಲ್ಲಿ: ಖಲಿಸ್ತಾನಿ ಪ್ರತ್ಯೇಕತಾವಾದಿ ಮತ್ತು ಸಿಖ್ಸ್ ಫಾರ್ ಜಸ್ಟಿಸ್ (SFJ) ಸಂಸ್ಥಾಪಕ ಗುರುಪತ್ವಂತ್ ಸಿಂಗ್ ಪನ್ನುನ್, ಕಣಿವೆಯಲ್ಲಿ ನೆಲೆಸಿರುವ ಕಾಶ್ಮೀರಿ ಮುಸ್ಲಿಮರು ದೆಹಲಿಗೆ ಹೋಗಿ ಜಿ20 ಶೃಂಗಸಭೆಗೆ ಅಡ್ಡಿಪಡಿಸುವಂತೆ ಆಡಿಯೋ ಸಂದೇಶವನ್ನು ಬಿಡುಗಡೆ ಮಾಡಿದ್ದಾನೆ. ಎರಡು ದಿನಗಳ ಶೃಂಗಸಭೆಯು ನವದೆಹಲಿಯಲ್ಲಿ ಸೆಪ್ಟೆಂಬರ್ 9 ಮತ್ತು 10 ರಂದು ನಡೆಯಲಿದೆ.
ಶುಕ್ರವಾರದ ಪ್ರಾರ್ಥನೆಯ ನಂತರ ಶೃಂಗಸಭೆ ನಡೆಯುವ ಪ್ರಗತಿ ಮೈದಾನಕ್ಕೆ ಮೆರವಣಿಗೆ ನಡೆಸುವಂತೆ ಪನ್ನುನ್ ಜನರನ್ನು ಕೇಳಿಕೊಂಡಿದ್ದಾನೆ ಅಲ್ಲದೆ ದೆಹಲಿಯ ಐಜಿಐ ವಿಮಾನ ನಿಲ್ದಾಣದಲ್ಲಿ ಖಲಿಸ್ತಾನಿ ಧ್ವಜ ಹಾರಿಸುವುದಾಗಿ ಬೆದರಿಕೆ ಹಾಕಿದ್ದಾನೆ.
ದೆಹಲಿಯಾದ್ಯಂತ ಹಲವಾರು ಮೆಟ್ರೋ ನಿಲ್ದಾಣಗಳನ್ನು ಖಲಿಸ್ತಾನ್ ಪರ ಗೀಚುಬರಹದಿಂದ ವಿರೂಪಗೊಳಿಸಿದ ಕೆಲವೇ ದಿನಗಳಲ್ಲಿ ಈ ಕರೆ ಬಂದಿದೆ. ಭಾರತ ವಿರೋಧಿ ಘೋಷಣೆಗಳ ಮೇಲೆ SFJಗೆ ಸಂಬಂಧಿಸಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಗುರುಪತ್ವಂತ್ ಸಿಂಗ್ ಪನ್ನು ಅವರ ಆದೇಶದ ಮೇರೆಗೆ ಈ ಘೋಷಣೆಗಳನ್ನು ಬರೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಂಜಾಬಿ ಬಾಗ್, ಶಿವಾಜಿ ಪಾರ್ಕ್, ಮಾದಿಪುರ್, ಪಶ್ಚಿಮ ವಿಹಾರ್, ಉದ್ಯೋಗ್ ನಗರ, ಮಹಾರಾಜ ಸೂರಜ್ಮಲ್ ಸ್ಟೇಡಿಯಂ ಮತ್ತು ನಂಗ್ಲೋಯ್ ಸೇರಿದಂತೆ ಮೆಟ್ರೋ ನಿಲ್ದಾಣಗಳ ಗೋಡೆಗಳ ಮೇಲೆ ‘ದೆಹಲಿ ಬನೇಗಾ ಖಲಿಸ್ತಾನ್’ ಮತ್ತು ‘ಖಾಲಿಸ್ತಾನ್ ರೆಫರೆಂಡಮ್ ಜಿಂದಾಬಾದ್’ ಎಂಬ ಘೋಷಣೆಗಳನ್ನು ಪಶ್ಚಿಮ ದೆಹಲಿಯಲ್ಲಿ. ಕಪ್ಪು ಬಣ್ಣದ ಮಸಿಯಲ್ಲಿ ಬರೆದಿರುವುದು ಕಂಡುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.