Protest: ಸಂಸದರ ಕಚೇರಿ ಬಳಿ ಆಕ್ರೋಶ
Team Udayavani, Sep 5, 2023, 4:58 PM IST
ಮೈಸೂರು: ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ಕನ್ನಡ ಪರ ಸಂಘಟನೆಗಳು, ಕಬ್ಬು ಬೆಳೆಗಾರ ಸಂಘದಿಂದ ಜಲದರ್ಶಿನಿಯಲ್ಲಿರುವ ಸಂಸದ ಪ್ರತಾಪಸಿಂಹ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ರಾಜ್ಯದಲ್ಲಿ ಬರಗಾಲ ಸೃಷ್ಟಿಯಾಗಿದ್ದರೂ, ಕಾವೇರಿಕೊಳ್ಳದ ಜಲಾಶಯಗಳ ನೀರು ಖಾಲಿಯಾಗುತ್ತಿದ್ದರೂ, ಮಹದಾಯಿ ನದಿ ನೀರಿನ ವಿವಾದ ಕುರಿತು ಯಾವುದೇ ಗಂಭೀರ ಚಿಂತನೆ ನಡೆಯುತ್ತಿಲ್ಲ. ಈ ಬಗ್ಗೆ ರಾಜ್ಯ ಸಂಸದರು ಏನನ್ನೂ ಮಾತನಾಡದೆ ಮೂಕರಂತಿದ್ದಾರೆಂದು ದೂರಿದರು.
ರಕ್ಷಣಾತ್ಮಕ ಕ್ರಮ ಕೈಗೊಳ್ಳಿ: ಕಬ್ಬು ಬೆಳೆಗಾರರಿಗೆ ಬರಬೇಕಾದ ಹಿಂದಿನ ವರ್ಷದ ಬಾಕಿ ಹೆಚ್ಚುವರಿ 150 ರೂ., ಸಕ್ಕರೆ ಕಾರ್ಖಾನೆಗಳಿಂದ ಕೂಡಿಸ ಬೇಕು. 2023-24ನೇ ಸಾಲಿನಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ಕಬ್ಬಿನ ಇಳುವರಿ ಕಡಿಮೆಯಾಗಿದೆ. ಹೀಗಾಗಿ ಕಬ್ಬಿನ ದರವನ್ನು ಟನ್ ಗೆ ನಾಲ್ಕು ಸಾವಿರ ನಿಗದಿ ಮಾಡಬೇಕು. ಕೃಷಿ ಪಂಪ್‌ಸೆಟ್‌ಗಳಿಗೆ ಅಸಮರ್ಪಕ ವಿದ್ಯುತ್ ಪೂರೈಕೆ ತಪ್ಪಿಸಿ ಹಗಲು ಹೊತ್ತಿನಲ್ಲಿ 12 ಗಂಟೆ ವಿದ್ಯುತ್ ಪೂರೈಕೆ ಮಾಡಬೇಕು. ಜತೆಗೆ ಪಂಪ್‌ಸೆಟ್‌ಗಳಿಗೆ ಆಧಾರ್ ಕಾರ್ಡ್ ಲಿಂಕ್ ಕೈ ಬಿಡಬೇಕು. ಮಳೆ ಅಭಾವದಿಂದ ರೈತ ಬಿತ್ತಿದ ಬೀಜ ಸತ್ತಿದೆ. ಅಂತರ್ಜಲ ಕುಸಿದಿದೆ. ರಾಜ್ಯದಲ್ಲಿ ಬರಪೀಡಿತ ಪ್ರದೇಶಗಳ ಜನ ಜಾನುವಾರುಗಳ ರಕ್ಷಣಾತ್ಮಕ ಕ್ರಮ ಮಾಡದೆ ನಿರ್ಲಕ್ಷ್ಯ ತೋರಿಸುತ್ತಿರುವ ರಾಜ್ಯ ಸರ್ಕಾರ ಕೂಡಲೇ ಬರ ಪೀಡಿತ ಪ್ರದೇಶಗಳ ಬರ ಘೋಷಣೆ ಮಾಡಿ ರಕ್ಷಣಾ ತ್ಮಕ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸಾಗುವಳಿ ಪತ್ರ ವಿತರಿಸಿ: ಕೇಂದ್ರ ಸರ್ಕಾರ ಅಕ್ಕಿ, ಸಕ್ಕರೆ, ಈರುಳ್ಳಿ, ರಫ್ತು ನಿಷೇಧ ಸರಿಯಲ್ಲ. ತಕ್ಷಣವೇ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಖಾತರಿ ಕಾನೂನು ಜಾರಿಗೆ ತರಬೇಕು. ಹತ್ತಾರು ವರ್ಷಗಳಿಂದ ಕೃಷಿ ಚಟುವಟಿಕೆ ನಡೆಸುತ್ತಿರುವ ಬಗರಹುಕುಂ ಸಾಗುವಳಿ ರೈತರಿಗೆ ಸಾಗುವಳಿ ಪತ್ರ ವಿತರಿಸಬೇಕು ಎಂದು ಒತ್ತಾಯಿಸಿದರು.
ರೈತ ಮುಖಂಡರಾದ ಹತ್ತಳ್ಳಿ ದೇವರಾಜ್, ಬರಡನಪುರ ನಾಗರಾಜ್, ಬಸವರಾಜ್ ಪಾಟೀಲ್, ಗುರುಸಿದ್ದಪ್ಪ, ರಮೇಶ್ ಉಗಾರ್, ಹಳ್ಳಿಕೆರೆಹುಂಡಿ ಭಾಗ್ಯರಾಜ್, ಜೈ ಕರ್ನಾಟಕ ಜನಪರ ವೇದಿಕೆಯ ಕುಮಾರಸ್ವಾಮಿ, ಉಳುವಪ್ಪ ಬಳಗೇರ, ಪರಶುರಾಮ್, ಕಮಲಮ್ಮ ಮತ್ತಿತರರು ಭಾಗವಹಿಸಿದ್ದರು.
ಸಂಸದರು ಕೇಂದ್ರದ ಮೇಲೆ ಒತ್ತಡ ತರಲಿ: ಕಬಿನಿ, ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿ ರಾಜ್ಯದ ರೈತರನ್ನು ಬಲಿಕೊಟ್ಟಿರುವ ರಾಜ್ಯ ಸರ್ಕಾರ ಕೂಡಲೇ ನೀರು ನಿಲ್ಲಿಸಬೇಕು. ಕಾವೇರಿಕೊಳ್ಳದ ಹೆಚ್ಚುವರಿ ನೀರನ್ನು ಸಂಕಷ್ಟ ಕಾಲದಲ್ಲಿ ಬಳಸಿಕೊಳ್ಳಲು ಸಮುದ್ರಕ್ಕೆ ಹರಿಯುವ ಹೆಚ್ಚುವರಿ ಸಂಗ್ರಹಿಸಿಟ್ಟಿಕೊಳ್ಳಲು ಮೇಕೆದಾಟು ಜಲಾಶಯ ಯೋಜನೆಯನ್ನು ಕೂಡಲೇ ಕೈಗೆತ್ತಿಕೊಳ್ಳಬೇಕು. ಮಹದಾಯಿ ನದಿ ನೀರಿನ ವಿವಾದವನ್ನು ಕೂಡಲೇ ಬಗೆಹರಿಸಿ ಯೋಜನೆ ಪೂರ್ಣಗೊಳಿಸಿ ಅಚ್ಚುಕಟ್ಟು ಭಾಗದ ನೀರಿನ ಸಮಸ್ಯೆ ಬಗೆಹರಿಸಬೇಕು. ಸಂಸದರು ಕೇಂದ್ರದ ಮೇಲೆ ಒತ್ತಡ ತಂದು ರಾಜ್ಯಕ್ಕೆ ನ್ಯಾಯ ಒಗದಿಸಬೇಕೆಂದು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ
Mysuru: ಕೆಆರ್‌ಎಸ್ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್
Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ
Hunsur: ಹುತಾತ್ಮ ಧಿವಿನ್ ಅಂತಿಮ ದರ್ಶನ ಪಡೆದ ಗ್ರಾಮಸ್ಥರು
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.