Kota ಸ್ಕೂಟಿ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು
Team Udayavani, Sep 6, 2023, 12:08 AM IST
ಕೋಟ: ಯಡ್ತಾಡಿ ಗೋಳಿಮರ ಸಮೀಪ ಸೆ. 3ರಂದು ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾವಡಿ ಹವರಾಲು ನಿವಾಸಿ ಭುಜಂಗ ಶೆಟ್ಟಿ (83) ಅವರು ಚಿಕಿತ್ಸೆ ಫಲಕಾರಿಯಾಗದೆ ಸೆ. 4ರಂದು ನಿಧನ ಹೊಂದಿದ್ದಾರೆ.
ಅವರು ಡೇರಿಗೆ ಹಾಲು ನೀಡಲು ಸ್ಕೂಟಿಯಲ್ಲಿ ತೆರಳುತ್ತಿದ್ದ ಸಂದರ್ಭ ಸಾೖಬ್ರಕಟ್ಟೆಯಿಂದ-ಯಡ್ತಾಡಿ ಕಡೆಗೆ ಸಂಚರಿಸುತ್ತಿದ್ದ ಇನ್ನೊಂದು ಸ್ಕೂಟಿ ಢಿಕ್ಕಿ ಹೊಡೆದಿದ್ದು, ಅಪಘಾತದ ತೀವೃತೆಗೆ ಭುಜಂಗ ಶೆಟ್ಟಿಯವರು ಗಂಭೀರವಾಗಿ ಗಾಯಗೊಂಡಿದ್ದರು. ತತ್‌ಕ್ಷಣ ಅವರನ್ನು ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತರು ಪತ್ನಿ, ನಾಲ್ವರು ಪುತ್ರರನ್ನು ಅಗಲಿದ್ದಾರೆ. ಅವರು 36 ವರ್ಷಗಳ ಕಾಲ ಕೆ.ಎಸ್.ಆರ್.ಟಿ.ಸಿ. ಕಂಡಕ್ಟರ್ ಆಗಿ ಸೇವೆ ಸಲ್ಲಿಸಿದ್ದು, ಟ್ರಾಫಿಕ್ ಕಂಟ್ರೋಲರ್ ಆಗಿ ನಿವೃತ್ತಿ ಹೊಂದಿದ್ದರು ಹಾಗೂ 83ರ ವಯಸ್ಸಿನಲ್ಲೂ ಕೃಷಿ, ಹೈನುಗಾರಿಕೆ ಕೆಲಸದಲ್ಲಿ ತೊಡಗಿಕೊಂಡು ಕೃಷಿ ಕ್ಷೇತ್ರದಲ್ಲಿ ಆಳವಾದ ಮಾಹಿತಿ ಹೊಂದಿದ್ದರು.
ರೈತ ಶಕ್ತಿ ಸಂಘಟನೆ ಎಂಬ ಸಂಘವನ್ನು ಸ್ಥಾಪಿಸಿ ಅದರ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದು, ಸ್ಥಳೀಯ ಕೃಷಿಕರಿಗೆ ಬೇಸಾಯದ ಕುರಿತು ಮಾಹಿತಿ, ಸರಕಾರದಿಂದ ಸಿಗುವ ಸೌಲಭ್ಯಗಳ ಕುರಿತು ಮಾಹಿತಿ ನೀಡುತ್ತಿದ್ದರು. ಕೃಷಿ ಇಲಾಖೆಯಿಂದ ತಾಲೂಕು ಉತ್ತಮ ಕೃಷಿಕ ಪ್ರಶಸ್ತಿ, ಉತ್ತಮ ಇಳುವರಿ ಪ್ರಶಸ್ತಿಗೆ ಪಾತ್ರರಾಗಿದ್ದರು. ಭಜನ ಕ್ಷೇತ್ರದಲ್ಲಿ ಸುಮಾರು ಎಳು ದಶಕಗಳ ಕಾಲ ಸೇವೆ ಸಲ್ಲಿಸಿ ಸಂಘ-ಸಂಸ್ಥೆಗಳಿಂದ ಸಮ್ಮಾನಕ್ಕೆ ಪಾತ್ರರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
2025ಕ್ಕೆ 25 ಆಪ್ತ ಸಲಹೆಗಳು: ಸಣ್ಣ ಪುಟ್ಟ ಸಂಗತಿಗಳನ್ನು ಆಸ್ವಾದಿಸೋಣ…
Bengaluru: ಮಾಜಿ ಕಾರ್ಪೋರೇಟರ್ ರೇಖಾ ಹತ್ಯೆ; 8 ಮಂದಿಗೆ ಜೀವಾವಧಿ ಶಿಕ್ಷೆ
Gold Fraud Case: ಐಶ್ವರ್ಯ ಗೌಡ ದಂಪತಿಗೆ ಹೈಕೋರ್ಟ್‌ನಿಂದ ಜಾಮೀನು
Aishwarya Gowda Case: ಇನ್ನೊಂದು ಚಿನ್ನದಂಗಡಿಗೆ ವಂಚಿಸಿದ್ದ ಐಶ್ವರ್ಯ ಗ್ಯಾಂಗ್
Sabarimala; ಯಾತ್ರಿಗಳಿಗೆ ಅರಣ್ಯ ಮಾರ್ಗದ ವಿಶೇಷ ಪಾಸ್ ತಾತ್ಕಾಲಿಕ ಸ್ಥಗಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.