FIR: ಧಾರ್ಮಿಕ ಭಾವನೆಗಳಿಗೆ ಧಕ್ಕೆ: ಸ್ಟಾಲಿನ್, ಪ್ರಿಯಾಂಕ್ ಖರ್ಗೆ ವಿರುದ್ಧ ಎಫ್ಐಆರ್
Team Udayavani, Sep 6, 2023, 10:50 AM IST
ನವದೆಹಲಿ: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಕುರಿತು ಉದಯನಿಧಿ ಸ್ಟಾಲಿನ್ ಕರೆ ನೀಡಿದ್ದಕ್ಕಾಗಿ ಜೊತೆಗೆ ಅವರ ಹೇಳಿಕೆಯನ್ನು ಬೆಂಬಲಿಸಿದ್ದಕ್ಕಾಗಿ ಖರ್ಗೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.
ಘಟನೆಗೆ ಸಂಬಂಧಿಸಿ ಉತ್ತರ ಪ್ರದೇಶದ ರಾಂಪುರದ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಐಪಿಸಿಯ ಸೆಕ್ಷನ್ 295 ಎ (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ಮತ್ತು 153 ಎ (ವಿವಿಧ ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ವಕೀಲರಾದ ಹರ್ಷಗುಪ್ತಾ ಮತ್ತು ರಾಮ್ ಸಿಂಗ್ ಲೋಧಿ ಅವರ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ, ಅವರ ಹೇಳಿಕೆಯಿಂದ ಧಾರ್ಮಿಕ ಭಾವನೆಗಳಿಕೆ ಧಕ್ಕೆಯುಂಟಾಗಿದೆ ಎಂದು ದೂರು ದಾಖಲಾಗಿತ್ತು.
ಕಳೆದ ಶನಿವಾರ ತಮಿಳುನಾಡಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸ್ಟಾಲಿನ್ ಅವರು ಸನಾತನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾದಂತಹ ಕಾಯಿಲೆಗಳಿಗೆ ಹೋಲಿಕೆ ಮಾಡಿ ಮಾತನಾಡಿದ್ದು ಅಲ್ಲದೆ ಸನಾತನ ಧರ್ಮವನ್ನು ಬೇರು ಸಮೇತ ಕಿತ್ತು ಹಾಕಬೇಕು ಎಂದು ಹೇಳಿಕೆ ನೀಡಿದ್ದರು.
ಇದನ್ನೂ ಓದಿ: Crime: ಸ್ಕೂಟಿಗೆ ಡಿಕ್ಕಿ ಹೊಡೆದು ಪರಾರಿಯಾದ ಕಾರು, ವಿವಾದದಲ್ಲಿ ಕಾಮಿಡಿ ಸ್ಟಾರ್ ಚಂದ್ರಪ್ರಭ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.