Teacher’s election: ಶಿಕ್ಷಕರ ಚುನಾವಣೆಗೆ ಬಿಜೆಪಿ ತಾಲೀಮು ಶುರು!

Team Udayavani, Sep 6, 2023, 5:35 PM IST

tdy-19

ಚಿಕ್ಕಬಳ್ಳಾಪುರ: ಒಂದಡೆ ಲೋಕಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ ನಡೆಯುತ್ತಿರುವ ಬೆನ್ನಲೇ 2024 ರಲ್ಲಿ ಎದುರಾಗಲಿರುವ ಆಗ್ನೇಯ ಶಿಕ್ಷಕರ ಚುನಾವಣೆಗೆ ಬಿಜೆಪಿ ತನ್ನ ತಾಲೀಮು ಶುರು ಮಾಡಿದ್ದು, ಜಿಲ್ಲೆಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ದಾವಣಗೆರೆಯ ಹಲವು ತಾಲೂಕುಗಳನ್ನೊಳಗೊಂಡ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ 2024 ಮೇ ತಿಂಗಳ ಒಳಗೆ ಘೋಷಣೆ ಆಗಲಿರುವ ಹಿನ್ನಲೆಯಲ್ಲಿ ಜಿಲ್ಲೆಯ ಬಿಜೆಪಿ ನಾಯಕರು ಚುನಾವಣೆ ಕಾರ್ಯಕತಂತ್ರಗಳ ಬಗ್ಗೆ ಚರ್ಚೆ ನಡೆಸುವ ನಿಟ್ಟಿನಲ್ಲಿ ಸಭೆ ಸೇರಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಈಗಾಗಲೇ 2024ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌, ಬಿಜೆಪಿ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿದ್ದು ಟಿಕೆಟ್‌ ಆಕಾಂಕ್ಷಿಗಳು ಟಿಕೆಟ್‌ಗಾಗಿ ಈಗನಿಂದಲೇ ಲಾಭಿ ಶುರುವು ಮಾಡಿ ಮತದಾರರ ಮನ ಸೆಳೆಯಲು ವಿವಿಧ ಸೇವಾ ಕಾರ್ಯಗಳಿಗೆ ಚಾಲನೆ ನೀಡಿದ್ದಾರೆ. ಇದೀಗ ಆಗ್ನೇಯ ಶಿಕ್ಷಕರ ಚುನಾವಣೆಗೆ ಬಿಜೆಪಿ ಆಡಳಿತ ಕಾಂಗ್ರೆಸ್‌ ಪಕ್ಷಕ್ಕಿಂತ ಮುಂಚೆಯೆ ಎಚ್ಚೆತ್ತುಕೊಂಡು ಚುನಾವಣಾ ರಾಜಕೀಯ ತಂತ್ರಗಾರಿಕೆಗೆ ಮುಂದಾಗಿರುವುದು ಕುತೂಹಲ ಕೆರಳಿಸಿದೆ. ಆಗ್ನೇಯ ಶಿಕ್ಷಕರ ಕ್ಷೇತ್ರದ ಸದ್ಯ ಬಿಜೆಪಿ ವಶದಲ್ಲಿದ್ದು ವೈ.ಎ.ನಾರಾಯಣಸ್ವಾಮಿ ಪ್ರತಿನಿಧಿಸುತ್ತಿದ್ದಾರೆ.

ಹೀಗಾಗಿ ಕ್ಷೇತ್ರವನ್ನು ಮತ್ತೆ ತಮ್ಮ ವಶಕ್ಕೆ ಪಡೆಯುವುದು ಬಿಜೆಪಿಗೆ ದೊಡ್ಡ ಸವಾಲಾಲಾಗಿದೆ. ಈಗಾಗಿ ಈಗನಿಂದಲೇ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ತಯಾರಿ ನಡೆಸಿಕೊಳ್ಳುವ ನಿಟ್ಟಿನಲ್ಲಿ ಬಿಜೆಪಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡರನ್ನು ಉಸ್ತುವಾರಿಗಳಾಗಿ ನೇಮಕ ಮಾಡಿದ್ದು, ಅವರ ನೇತೃತ್ವದಲ್ಲಿ ಮಂಗಳವಾರ ಬೆಂಗಳೂರಿನಲ್ಲಿ ಮೊದಲ ಸಭೆ ನಡೆಸಿ ಅಭ್ಯರ್ಥಿ ಆಯ್ಕೆ, ಚುನಾವಣಾ ತಯಾರಿ ಬಗ್ಗೆ ಜಿಲ್ಲೆಯ ಬಿಜೆಪಿ ನಾಯಕರು ಮಹತ್ವದ ಚರ್ಚೆ ನಡೆಸಿದ್ದಾರೆ.

ಲೋಕಸಭಾ ಅಭ್ಯರ್ಥಿ ಬಗ್ಗೆಯು ಚರ್ಚೆ: ಆಗ್ನೇಯ ಶಿಕ್ಷಕರ ಚುನಾವಣೆ ವಿಚಾರವಾಗಿ ಸಭೆ ನಡೆದಿದ್ದರೂ ಅಲ್ಲಿ ಪ್ರಮುಖವಾಗಿ 2024 ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆ ಬಗ್ಗೆ ಅದರಲ್ಲೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕುರಿತಂತೆ ಹೆಚ್ಚಿನ ಚರ್ಚೆ ನಡೆದಿದೆಯೆಂದು ಬಲ್ಲಮೂಲಗಳು ಉದಯವಾಣಿಗೆ ತಿಳಿಸಿವೆ. ಕ್ಷೇತ್ರದ ಹಾಲಿ ಸಂಸದ ಬಿ.ಎನ್‌.ಬಚ್ಚೇಗೌಡ ಈಗಾಗಲೇ ಚುನಾವಣಾ ರಾಜಕಾರಣದಿಂದ ನಿವೃತ್ತಿ ಘೋಷಿಸಿರುವ ಹಿನ್ನಲೆಯಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಯಾರಗಬೇಕೆಂಬ ನಿಟ್ಟಿನಲ್ಲಿ ಸಭೆಯಲ್ಲಿ ಚರ್ಚೆ ನಡೆದಿದ್ದು, ಜಿಲ್ಲೆಯ ಬಹುತೇಕ ನಾಯಕರು ಮಾಜಿ ಸಚಿವರಾದ ಡಾ.ಕೆ.ಸುಧಾಕರ್‌ ಅಭ್ಯರ್ಥಿ ಆಗಬೇಕೆಂಬ ನಿಟ್ಟಿನಲ್ಲಿ ತಮ್ಮ ಅಭಿಪ್ರಾಯ ಮಂಡಿಸಿದ್ದಾರೆಂದು ತಿಳಿದು ಬಂದಿದೆ.

ಒಟ್ಟಿನಲ್ಲಿ 2024 ರಲ್ಲಿ ಎದುರಾಗಲಿರುವ ಸಾಲು ಸಾಲು ಚುನಾವಣೆಗಳನ್ನು ಎದುರಿಸುವ ನಿಟ್ಟಿನಲ್ಲಿ ಅದರಲ್ಲೂ ಲೋಕಸಭೆ, ಆಗ್ನೇಯ ಶಿಕ್ಷಕರ ಚುನಾವಣೆ, ಜಿಪಂ, ತಾಪಂ ಚುನಾವಣೆಗಳನ್ನು ಬಲವಾಗಿ ಎದುರಿಸುವ ನಿಟ್ಟಿನಲ್ಲಿ ಆಡಳಿತರೂಢ ಕಾಂಗ್ರೆಸ್‌ಗಿಂತ ಒಂದು ಹೆಜ್ಜೆ ಮುಂದಿರುವ ಬಿಜೆಪಿ ಈಗನಿಂದಲೇ ತಾಲೀಮು ಶುರು ಮಾಡಿರುವುದು ಜಿಲ್ಲೆಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ ಹಾಗೂ ಕುತೂಹಲಕ್ಕೆ ಎಡೆಮಾಡಿಕೊಟ್ಟಿರುವುದು ಅಂತೂ ನಿಜ.

ಬಿಜೆಪಿ ಪರಾಜಿತ ಅಭ್ಯರ್ಥಿಗಳು ಮುಖಾಮುಖಿ: ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಕಳೆದ ಚುನಾವಣೆಯಲ್ಲಿ ಸ್ಪರ್ಧಿಸಿ ಕಾಂಗ್ರೆಸ್‌, ಜೆಡಿಎಸ್‌ ವಿರುದ್ಧ ಸೋತಿರುವ ಚಿಕ್ಕಬಳ್ಳಾಪುರದ ಡಾ.ಕೆ.ಸುಧಾಕರ್‌, ಗೌರಿಬಿದನೂರಿನ ಅಭ್ಯರ್ಥಿ ಡಾ.ಶಶಿಧರ್‌, ಬಾಗೇಪಲ್ಲಿ ಕ್ಷೇತ್ರದ ಸಿ.ಮುನಿರಾಜು, ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಗಿದ್ದ ಸೀಕಲ್ಲು ರಾಮಚಂದ್ರಗೌಡ, ಚಿಂತಾಮಣಿ ವಿಧಾನಸಬಾ ಕ್ಷೇತ್ರದ ಜಿ.ಎನ್‌.ವೇಣುಗೋಪಾಲ್‌ ಸಭೆಯಲ್ಲಿ ಮುಖಾಮುಖಿ ಆಗಿ ಮುಂದಿನ ಲೋಕಸಭೆ, ಆಗ್ನೆಯ ಶಿಕ್ಷರ ಚುನಾವಣೆ ಬಗ್ಗೆ ಚರ್ಚೆ ನಡೆಸಿರುವುದು ತೀವ್ರ ಕುತೂಹಲ ಮೂಡಿಸಿದೆ.

ಮುಂದಿನ 2024 ಮೇ ತಿಂಗಳಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆಯಲಿದ್ದು ಈ ಸಂಬಂದ ಮಾಜಿ ಸಿಎಂ ಹಾಗೂ ಚುನಾವಣಾ ಉಸ್ತುವಾರಿಗಳಾದ ಡಿ.ವಿ.ಸದಾನಂದಗೌಡರ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಬಿಜೆಪಿ ನಾಯಕರು ಸಭೆ ಸೇರಿ ಚರ್ಚೆ ನಡೆಸಲಾಗಿದೆ. ಇದರ ಜತೆಗೆ ಮುಂದಿನ ಲೋಕಸಭಾ ಚುನಾವಣಾ ತಯಾರಿ ಬಗ್ಗೆ ಹಾಗೂ ಬೂತ್‌ ಮಟ್ಟದಲ್ಲಿ ಪಕ್ಷ ಸಂಘಟನೆ ನಡೆಸುವ ಬಗ್ಗೆ ಚರ್ಚೆ ಮಾಡಲಾಯಿತು. -ರಾಮಲಿಂಗಪ್ಪ, ಬಿಜೆಪಿ ಜಿಲ್ಲಾಧ್ಯಕ್ಷರು

-ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.