Crime News: ಪ್ರತ್ಯೇಕ ಪ್ರಕರಣಗಳಲಿ 7 ಮಂದಿ ಸೆರೆ


Team Udayavani, Sep 7, 2023, 12:06 PM IST

tdy-6

ಬೆಂಗಳೂರು: ಪಶ್ಚಿಮ ಮತ್ತು ಉತ್ತರ ವಿಭಾಗ ಪೊಲೀಸರ ಕಾರ್ಯಾಚರಣೆ ಯಲ್ಲಿ ಸುಲಿಗೆ, ಮನೆ ಕಳವು ಮಾಡುತ್ತಿದ್ದ ನಾಲ್ಕು ಪ್ರತ್ಯೇಕ ಪ್ರಕರಣಗಳಲ್ಲಿ ಏಳು ಮಂದಿಯನ್ನು ಬಂಧಿಸಲಾಗಿದೆ.

ರಾತ್ರಿ ವೇಳೆ ಪಾದಚಾರಿಗಳನ್ನು ಅಡ್ಡಗಟ್ಟಿ ಮಾರಕಾಸ್ತ್ರ ತೋರಿಸಿ ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಜಗಜೀವನರಾಮನಗರ ಪೊಲೀಸರು ಬಂಧಿದ್ದಾರೆ.

ತಿಲಕನಗರದ ಮೊಹಮ್ಮದ್‌ ಯೂನೀಸ್‌(29) ಮತ್ತು ವಿನಾಯಕ ನಗರದ ಮೊಹಮ್ಮದ್‌ ಇರ್ಫಾನ್‌(22) ಬಂಧಿತರು.

ಆರೋಪಿಗಳಿಂದ 2 ದ್ವಿಚಕ್ರ ವಾಹನ ಹಾಗೂ 7 ಸಾವಿರ ರೂ. ನಗದು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಇತ್ತೀಚೆಗೆ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊ ಬ್ಬರು ನಡೆದುಕೊಂಡು ಹೋಗುವಾಗ ಬೈಕ್‌ನಲ್ಲಿ ಬಂದ ಇಬ್ಬರು ಆರೋಪಿಗಳು ಅವರನ್ನು ಅಡ್ಡಗಟ್ಟಿ ಮಾರಕಾಸ್ತ್ರ ತೋರಿಸಿ 30 ಸಾವಿರ ರೂ. ಕಸಿದು ಪರಾರಿಯಾಗಿ ದ್ದರೆಂದು ಪೊಲೀಸರು ಹೇಳಿದರು. ಅಪರಾಧ ಹಿನ್ನೆಲೆವುಳ್ಳ ಆರೋಪಿಗಳು ಸಂಬಂಧಿಕರಾಗಿದ್ದು, ಮೋಜಿಗಾಗಿ ಕೃತ್ಯ ವೆಸಗುತ್ತಿದ್ದರು. ಆರೋಪಿಗಳ ಪೈಕಿ ಮೊಹಮ್ಮದ್‌ ಯೂನೀಸ್‌ ವಿರುದ್ಧ ವಿವಿಧ ಠಾಣೆಗಳಲ್ಲಿ ಸುಲಿಗೆ, ದರೋಡೆ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ಹೇಳಿದರು.

ಮನೆ ಕಳ್ಳ ಬಂಧನ: ರಾತ್ರಿ ವೇಳೆ ಮನೆ ಬೀಗ ಮುರಿದು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಗರದ ಮೊಹಮ್ಮದ್‌ ಅಶ್ವಾಕ್‌, ಮೋಯಿನುದ್ದೀನ್‌ ಬಂಧಿತರು. ಆರೋಪಿ ಗಳಿಂದ 18 ಲಕ್ಷ ರೂ. ಮೌಲ್ಯದ 230 ಗ್ರಾಂ ಚಿನ್ನಾಭರಣ, 72 ಗ್ರಾಂ ಬೆಳ್ಳಿ ವಸ್ತುಗಳು, 4 ಲಕ್ಷ ರೂ. ನಗದು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಇತ್ತೀ ಚೆಗೆ ಠಾಣೆ ವ್ಯಾಪ್ತಿ ಮನೆಯೊಂದರ ಬೀಗ ಮುರಿದು ಕಳವು ಮಾಡಿದ್ದರು. ಈ ಸಂಬಂಧ ಜ್ಞಾನಭಾರತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಗಳನ್ನು ಬಂಧಿಸಲಾಗಿದೆ.

ಪಶ್ಚಿಮ ಬಂಗಾಳದವನ ಬಂಧನ: ಮನೆ ಬಾಗಿಲು ಮೀಟಿ ಚಿನ್ನಾಭರಣ ಕಳವು ಮಾಡಿದ್ದ ಪಶ್ಚಿಮ ಬಂಗಾಳ ಮೂಲದ ಆರೋಪಿಯನ್ನು ಸಂಜಯ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸುಬ್ರೋತೋ ಮಂಡಲ್‌(27) ಬಂಧಿತ. ಆರೋಪಿಯಿಂದ 10.5 ಲಕ್ಷ ರೂ. ಮೌಲ್ಯದ 211 ಗ್ರಾಂ ತೂಕದ ಚಿನ್ನಾ ಭರಣ, 75 ಸಾವಿರ ರೂ. ನಗದು ವಶಕ್ಕೆ ಪಡೆಯಲಾಗಿದೆ.

ಆರೋಪಿ ಇತ್ತೀಚೆಗೆ ಠಾಣೆ ವ್ಯಾಪ್ತಿ ಪಟೇಲಪ್ಪ ಲೇಔಟ್‌ ನಿವಾಸಿಯೊಬ್ಬರ ಮನೆಯ ಹಿಂಬಾಗಿಲು ಮೀಟಿ ಚಿನ್ನಾಭರಣ ದೋಚಿದ್ದ. ಘಟನಾ ಸ್ಥಳ ಸಮೀಪದ ಸಿಸಿ ಕ್ಯಾಮೆರಾ ಗಳು ಪರಿಶೀಲಿಸಿ ಆರೋಪಿಯನ್ನು ಬಂಧಿಸಲಾಗಿದೆ. ಕೆಲ ತಿಂಗಳ ಹಿಂದಷ್ಟೇ ಈತನನ್ನು ಯಶವಂತಪುರ ಪೊಲೀಸರು ಬಂಧಿಸಿದ್ದರು. ಜೈಲಿನಿಂದ ಬಿಡುಗಡೆ ಯಾಗಿ ಬಂದು ಮತ್ತೆ ಅದೇ ಕೃತ್ಯ ಮುಂದುವರಿಸಿದ್ದಾನೆ. ಜೆ.ಸಿ.ನಗರ ಉಪ ವಿಭಾಗದ ಎಸಿಪಿ ಮನೋಜ್‌ ಕುಮಾರ್‌, ಠಾಣಾಧಿಕಾರಿ ಎ.ಗುರು ಪ್ರಸಾದ್‌ ಮತ್ತು ತಂಡ ಕಾರ್ಯಾಚರಣೆ ನಡೆಸಿದೆ. ಸಂಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂವರ ಬಂಧನ: ಮನೆಯ ಡೋರ್‌ ಲಾಕ್‌ ಮುರಿದು ಚಿನ್ನಾಭರಣ ಮತ್ತು ನಗದು ದೋಚಿ ಪರಾರಿಯಾಗಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳ್ಳೆಕಳ್ಳಿ ನಿವಾಸಿ ರವಿಕುಮಾರ್‌, ಮೈಸೂ ರು ಮೂಲದ ಇಮ್ರಾನ್‌, ಕೆಂಗೇರಿ ನಿವಾಸಿ ಜಯಕುಮಾರ್‌ ಬಂಧಿತರು.

ಆರೋಪಿಗಳಿಂದ 6.45 ಲಕ್ಷ ರೂ. ಮೌಲ್ಯದ 129 ಗ್ರಾಂ ಚಿನ್ನಾಭರಣ, 1.08 ರೂ. ನಗದು ಹಾಗೂ 2 ಬೈಕ್‌ ವಶಕ್ಕೆಪಡೆಯಲಾಗಿದೆ. ಶೆಟ್ಟಿಹಳ್ಳಿ ಯಲ್ಲಿರುವ ಮನೆಯೊಂದರ ಬಾಗಿಲು ಡೋರ್‌ ಲಾಕ್‌ ಮುರಿದು ಕೃತ್ಯ ಎಸಗಿ ದ್ದರು ಎಂದು ಪೊಲೀಸರು ಹೇಳಿದರು.

ಪೀಣ್ಯ ಎಸಿಪಿ ಸದಾನಂದ ಎ.ತಿಪ್ಪಣ್ಣ ನವರ್‌, ಠಾಣಾಧಿಕಾರಿ ಎಂ.ಹನುಮಂತ ರಾಜು ಕಾರ್ಯಚರಣೆ ನೇತೃತ್ವ ವಹಿಸಿದ್ದರು.

ಟಾಪ್ ನ್ಯೂಸ್

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.