Floriculture: ಜಿಲ್ಲೆಯ ಪುಷ್ಪೋದ್ಯಮಕ್ಕೆ ಸಿಗದ ಮಾರುಕಟ್ಟೆ ಬಲ!


Team Udayavani, Sep 7, 2023, 12:56 PM IST

Floriculture: ಜಿಲ್ಲೆಯ ಪುಷ್ಪೋದ್ಯಮಕ್ಕೆ ಸಿಗದ ಮಾರುಕಟ್ಟೆ ಬಲ!

ಚಿಕ್ಕಬಳ್ಳಾಪುರ: ಕೋವಿಡ್‌ ಕಾರಣದಿಂದ 3 ವರ್ಷಗಳ ಹಿಂದೆ ಎಪಿಎಂಸಿ ಮಾರುಕಟ್ಟೆಯಿಂದ ನಗರದ ಹೊರ ವಲಯದ ಸಿವಿವಿ ಕ್ಯಾಂಪಸ್‌ ಸಮೀಪಕ್ಕೆ ಸ್ಥಳಾಂತರಗೊಂಡಿದ್ದ ಹೂ ಮಾರುಕಟ್ಟೆಯನ್ನು ಮತ್ತೆ ಎಪಿಎಂಸಿಗೆ ತರುವ ಪ್ರಯತ್ನ ನಡೆಯುತ್ತಿದ್ದು ಜಿಲ್ಲಾ ಕೇಂದ್ರದಲ್ಲಿ ಪುಷ್ಪೋದ್ಯಮಕ್ಕೆ ಶಾಶ್ವತವಾದ ಸುಸಜ್ಜಿತವಾದ ಮಾರುಕಟ್ಟೆ ಬಲ ಸಿಗದೇ ಹೂ ಬೆಳೆಗಾರರು ಒಂದು ರೀತಿ ಅಡಕತ್ತರಿಯಲ್ಲಿ ಸಿಲುಕಿ ಪರದಾಡುವಂತಾಗಿದೆ.

ಹೌದು, ಇಡೀ ಜಿಲ್ಲೆಯು ಹಾಲು, ರೇಷ್ಮೆ, ತರಕಾರಿ ಬೆಳೆಯುವುದರಲ್ಲಿ ಮುಂಚೂಣಿ ಯಲ್ಲಿರುವಂತೆ ಜಿಲ್ಲೆಯ ಚಿಕ್ಕಬಳ್ಳಾಪುರ ತಾಲೂಕು ಷ್ಪೋದ್ಯಮಕ್ಕೆ ಹೆಸರಾಗಿದ್ದು ದೇಶ, ವಿದೇಶಗಳಿಗೆ ರಫ್ತು ಮಾಡುವ ಹೂ ತಾಲೂಕಿನಲ್ಲಿ ಬೆಳೆಯಲಾಗುತ್ತಿದ್ದರೂ ಇಂದಿಗೂ ಮಾರುಕಟ್ಟೆ ಕಲ್ಪಿಸುವಲ್ಲಿ ಸಾಧ್ಯವಾಗಿಲ್ಲ.

ಕೋವಿಡ್‌ನಿಂದ ಸ್ಥಳಾಂತರ: ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಹೂ ವಹಿವಾಟು ನಡೆಯುತ್ತಿತ್ತು. ಆದರೆ ಕೋವಿಡ್‌ ಕಾರಣಕ್ಕೆ ಮಾರುಕಟ್ಟೆಯನ್ನು ತಾತ್ಕಲಿಕವಾಗಿ ಸಿವಿವಿ ಕ್ಯಾಂಪಸ್‌ ಬಳಿ ಇರುವ ಖಾಸಗಿ ಜಾಗಕ್ಕೆ ಸ್ಥಳಾಂತರ ಮಾಡಲಾಯಿತು. ಕೋವಿಡ್‌ ನಿಯಂತ್ರಣದ ಬಳಿಕ ಕೆಲ ಹೂ ವರ್ತಕರು ಮತ್ತೆ ಎಪಿಎಂಸಿಗೆ ಹೂ ವಹಿವಾಟು ಸ್ಥಳಾಂತರ ಮಾಡುವಂತೆ ಒತ್ತಾಯಿಸಿದ್ದರು. ಆದರೆ, ಅದು ಸಾಧ್ಯವಾಗದೇ ಅಲ್ಲಿಯೆ ಮುಂದುವರೆಯಿತು. ಈ ವಿಚಾರ ಹೈಕೋರ್ಟ್‌ ಮೆಟ್ಟಿಲು ಸಹ ಏರಿತ್ತು. ಆದರೆ ಎಪಿಎಂಸಿಗೆ ಹೂ ವಹಿವಾಟು ಸ್ಥಳಾಂತರ ಆಗಲೇ ಇಲ್ಲ.

ಒಟ್ಟಿನಲ್ಲಿ ಹೂ ಬೆಳೆಯುವುದರಲ್ಲಿ ರಾಜ್ಯದ ಗಮನ ಸೆಳೆದಿರುವ ಚಿಕ್ಕಬಳ್ಳಾಪುರ ವಾರ್ಷಿಕ ಕೋಟ್ಯಾಂತರ ರೂ. ವಹಿವಾಟನ್ನು ಬರೀ ಹೂನಿಂದ ಮಾಡುತ್ತದೆ. ಆದರೆ ಜಿಲ್ಲಾ ಕೇಂದ್ರದಲ್ಲಿ ಹೂ ಬೆಳೆಗಾರರಿಗೆ ಸೂಕ್ತ ಮಾರುಕಟ್ಟೆ ಒದಗಿಸುವಲ್ಲಿ ಇಂದಿಗೂ ಜಿಲ್ಲಾಡಳಿತಕ್ಕೆ, ಜಿಲ್ಲೆಯ ಚುನಾಯಿತ ಜನಪ್ರತಿನಿಧಿಗಳಿಗೆ ಸಾಧ್ಯವಾಗದೇ ಇರುವುದು ವಿಪರ್ಯಾಸವೇ ಸರಿ ಎನ್ನಬಹುದು.

ಹೈಟೆಕ್‌ ಹೂ ಮಾರುಕಟ್ಟೆ ನಿರ್ಮಾಣ ನನೆಗುದಿಗೆ: ಹಿಂದಿನ ಬಿಜೆಪಿ ಸರ್ಕಾರ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದ ಡಾ.ಕೆ.ಸುಧಾಕರ್‌ ಮಾರುಕಟ್ಟೆಗೆ ಅಗಲಗುರ್ಕಿ ಬಳಿ ಸ.ನಂ.122 ರಲ್ಲಿ 9.05 ಎಕರೆ ಜಾಗವನ್ನು ಮಂಜೂರು ಮಾಡಿಸಿ ಹೈಟೆಕ್‌ ಹೂ ಮಾರುಕಟ್ಟೆ ನಿರ್ಮಾಣಕ್ಕೆ 100 ಕೋಟಿ ಅನುದಾನ ಬಜೆಟ್‌ನಲ್ಲಿ ಘೋಷಣೆ ಮಾಡಿಸಿದ್ದರು. ಆದರೆ, ಎಪಿಎಂಸಿ ಹೆಸರಿಗೆ ಜಮೀನು ವರ್ಗಾವಣೆ ಆಗಿದ್ದು ಬಿಟ್ಟರೆ ಮಾರುಕಟ್ಟೆ ಅಭಿವೃದ್ಧಿಗೆ ಹಣಕಾಸಿನ ಸೌಲಭ್ಯ ಸರ್ಕಾರದಿಂದ ಸಿಗಲಿಲ್ಲ. ಹೀಗಾಗಿ ಹೈಟೆಕ್‌ ಹೂ ಮಾರುಕಟ್ಟೆ ನಿರ್ಮಾಣದ ಯೋಜನೆ ಈಗ ನೆನಗುದಿಗೆ ಬಿದ್ದಂತಾಗಿದೆ. ಈಗಿನ ಸರ್ಕಾರ, ಜಿಲ್ಲೆಯ ಜನಪ್ರತಿನಿಧಿಗಳು ಕೂಡ ಇದರ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳದಿರುವುದು ಎದ್ದು ಕಾಣುತ್ತಿದೆ.

ಕುತೂಹಲ ಕೆರಳಿಸಿರುವ ಎಪಿಎಂಸಿ ಹಿಂಬರಹ!:  ಸಿವಿವಿ ಕ್ಯಾಂಪಸ್‌ ಬಳಿ ನಡೆಯುತ್ತಿರುವ ಹೂ ಮಾರುಕಟ್ಟೆಗೆ ಮೂಲ ಸೌಕರ್ಯ ಕಲ್ಪಿಸಿ ಅದನ್ನೇ ಉಪ ಕೃಷಿ ಉತ್ಪನ್ನ ಮಾರುಕಟ್ಟೆ ಸ್ಥಾಪಿಸುವಂತೆ ಹೂ ಬೆಳೆಗಾರರು ಕೋರಿರುವ ಮನವಿಗೆ ಎಪಿಎಂಸಿ ಹಿಂಬರಹ ನೀಡಿದ್ದು, ಈಗಾಗಲೇ ಎಪಿಎಂಸಿ ಪ್ರಾಗಂಣದಲ್ಲಿ ನಿವೇಶನ ಹೊಂದಿ ಅಂಗಡಿ ನಿರ್ಮಿಸಿ ವರ್ತಕರು ಎಪಿಎಂಸಿಯಲ್ಲಿ ವಹಿವಾಟು ನಡೆಬೇಕು. ಇಲ್ಲದೇ ಹೋದರೆ ನಿಮಗೆ ವಿತರಿಸಿರುವ ಪರವಾನಿಗೆ ರದ್ದುಗೊಳಿಸುವುದಾಗಿ ವರ್ತಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡುವ ಮೂಲಕ ಸಿವಿವಿ ಕ್ಯಾಂಪಸ್‌ ಬಳಿ ತಾತ್ಕಲಿಕವಾಗಿ ನಡೆಯುತ್ತಿರುವ ಹೂ ಮಾರುಕಟ್ಟೆಯನ್ನು ಮತ್ತೆ ಎಪಿಎಂಸಿಗೆ ಸ್ಥಳಾಂತರ ಮಾಡುವ ಸುಳಿವು ಎಪಿಎಂಸಿ ನೀಡಿದ್ದು, ಇದಕ್ಕೆ ಹೂ ಮಂಡಿ ವರ್ತಕರು ಯಾವ ರೀತಿ ಸ್ಪಂದಿಸುತ್ತಾರೆ ಎಂಬುದು ಕೂಡ ಕುತೂಹಲ ಮೂಡಿಸಿದೆ.

ಜಿಲ್ಲಾ ಕೇಂದ್ರದಲ್ಲಿ ಹೂ ಮಾರುಕಟ್ಟೆಗೆ ಶಾಶ್ವತವಾದ ಪರಿಹಾರ ಕಲ್ಪಿಸಬೇಕಿದೆ. ಸದ್ಯ ತಾತ್ಕಲಿಕವಾಗಿ ನಡೆಯುತ್ತಿರುವ ಹೂ ಮಾರುಕಟ್ಟೆ ಹಾಗೂ ಎಪಿಎಂಸಿ ಮಾರುಕಟ್ಟೆಗೆ ತೆರಳಿ ಪರಿಸ್ಥಿತಿ ಅವಲೋಕಿಸಿದ ಬಳಿಕ ಹೂ ಮಾರುಕಟ್ಟೆಯನ್ನು ಸ್ಥಳಾಂತರಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ. ಡಾ.ಎಂ.ಸಿ.ಸುಧಾಕರ್‌, ಜಿಲ್ಲಾ ಉಸ್ತುವಾರಿ ಸಚಿವ

ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

1-sugama

Music; ಸುಗಮ ಸಂಗೀತಕ್ಕೆ ನವೋದಯ ಸಾಹಿತ್ಯ ಬುನಾದಿ

Ullala-ABVP

Mangalore: ಪರೀಕ್ಷಾ ಶುಲ್ಕ ಹೆಚ್ಚಳ ಖಂಡಿಸಿ ವಿವಿಯಲ್ಲಿ ಎಬಿವಿಪಿ ಪ್ರತಿಭಟನೆ

highcort dharwad

Minister K.J. George ಪುತ್ರನ ಅರ್ಜಿ: ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌

1-c-ss

IAS Transfer: ಅಧಿಕಾರಿ ಸಿ. ಶಿಖಾ ಕೇಂದ್ರ ಸೇವೆಗೆ ನಿಯುಕ್ತಿ

Darshan (2)

Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್‌

1-qaaa

T20; ಸಂಜು, ತಿಲಕ್‌ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

ಸಂಸದ ಡಾ. ಸುಧಾಕರ್‌ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್‌

MP ಡಾ. ಸುಧಾಕರ್‌ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್‌

13-bng

Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!

ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ: ಒಬ್ಬ ಮೃತ

Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

1-sugama

Music; ಸುಗಮ ಸಂಗೀತಕ್ಕೆ ನವೋದಯ ಸಾಹಿತ್ಯ ಬುನಾದಿ

Ullala-ABVP

Mangalore: ಪರೀಕ್ಷಾ ಶುಲ್ಕ ಹೆಚ್ಚಳ ಖಂಡಿಸಿ ವಿವಿಯಲ್ಲಿ ಎಬಿವಿಪಿ ಪ್ರತಿಭಟನೆ

highcort dharwad

Minister K.J. George ಪುತ್ರನ ಅರ್ಜಿ: ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌

1-saaaa

ಮಧ್ಯವರ್ತಿಗಳಿಂದ ಮಾತ್ರ ‘ಸಕಾಲ’ಕ್ಕೆ ಸೇವೆ!

Farmer

Bagar Hukum ಅರ್ಜಿ ವಿಲೇವಾರಿ ಬಡ ರೈತರಲ್ಲಿ ಆಶಾವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.