BJP ಅಧಿಕೃತ ವಕ್ತಾರರಾಗಿ ಎಚ್ ಡಿಕೆ ಕೆಲಸ ಮಾಡುತ್ತಿದ್ದಾರೆ: ವೀರಪ್ಪ ಮೊಯ್ಲಿ
Team Udayavani, Sep 7, 2023, 8:23 PM IST
ಚಿಕ್ಕಬಳ್ಳಾಪುರ: ಬಿಜೆಪಿ ರಾಜ್ಯಾಧ್ಯಕ್ಷರು ಅತಂತ್ರರಾಗಿದ್ದು, ಪಕ್ಷದಲ್ಲಿ ನಾಯಕತ್ವದ ಕೊರತೆ ಇದೆ. ಜತೆಗೆ ವಿರೋಧ ಪಕ್ಷದ ನಾಯಕ ಇಲ್ಲದ ಬಿಜೆಪಿಗೆ ಮಾಜಿ ಸಿಎಂ ಎಚ್ .ಡಿ.ಕುಮಾರಸ್ವಾಮಿ ಬಿಜೆಪಿ ಅಧಿಕೃತ ವಕ್ತಾರರಂತೆ ಕೆಲಸ ಮಾಡುತ್ತಿದ್ದಾರೆಂದು ಮಾಜಿ ಸಿಎಂ ಎಂ.ವೀರಪ್ಪ ಮೊಯ್ಲಿ ವಾಗ್ದಾಳಿ ನಡೆಸಿದರು.
ನಗರದಲ್ಲಿ ಭಾರತ್ ಜೋಡೋ ಯಾತ್ರೆ ವಾರ್ಷಿಕೋತ್ಸವದ ಹಿನ್ನಲೆಯಲ್ಲಿ ಗುರುವಾರ ಸಂಜೆ ಪಕ್ಷದಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಇಂಡಿಯಾ ಒಕ್ಕೂಟದಿಂದ ದೂರ ಉಳಿದಿರುವ ಜೆಡಿಎಸ್ ಬಗ್ಗೆ ವಾಗ್ದಾಳಿ ನಡೆಸಿದರು.
ಜೆಡಿಎಸ್‌ನವರ ಡಿಕ್ಷನರಿಯಲ್ಲಿ ಸ್ವಾತಂತ್ರ್ಯ ಎಂಬ ಶಬ್ದವೇ ಇಲ್ಲ ಎಂದು ಗೇಲಿ ಮಾಡಿ, ಅವರು ಯಾವಾಗಲೂ ಕೂಡ ಕೈ ಕೊಡುತಾರೆ, ನಮ್ಮ ಜತೆ ಇದ್ದು ನಿಮ್ಮನ್ನು ಗೆಲ್ಲಿಸುತ್ತೇವೆಂದು ಹೇಳಿ ಕಾಂಗ್ರೆಸ್ ವಿರುದ್ದ ಮಾಡಿದರು. ಅವರೂ ಸೋತರು. ಒಂದು ಸೀಟು ಮಾತ್ರ ಗೆದ್ದು ನಾವು ಕೂಡ ಸೋತೆವು. ಕಳೆದ ಲೋಕಸಭಾ ಚುನಾವಣೆ ವೇಳೆ ಆಗಿದ್ದ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಒಂದು ರೀತಿ ಅವರಿಗೂ ಲಾಭ ಆಗದೇ, ನಮಗೂ ಲಾಭ ಆಗದೇ ಮಂಗ, ಮೇಕೆ ಕಥೆಯಂತೆ ಆಯಿತು ಎಂದು ಕಿಡಿಕಾರಿದರು.
ದೇವೇಗೌಡರನ್ನು ಪ್ರಧಾನಿ ಮಾಡಿದ್ದು ಕಾಂಗ್ರೆಸ್, ಕುಮಾರಸ್ವಾಮಿರನ್ನು ಸಿಎಂ ಮಾಡಿದ್ದು ಕಾಂಗ್ರೆಸ್, ಆದರೆ ಕುಮಾರಸ್ವಾಮಿಗೆ ಮೋದಿ ಮೇಲೆ ಆಸೆ. ಇಂಡಿಯಾ ಒಕ್ಕೂಟ ಗೆಲ್ಲುವುದಿಲ್ಲ ಅಂತ ಅವರ ಮನಸ್ಸು ಈಗ ಮೋದಿ ಕಡೆ ಇದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಮೈಕ್ರೋಫೈನಾನ್ಸ್ ಸಾಲ ಮೋಸ ಪ್ರಕರಣ ತನಿಖೆಗೆ ಮೂರು ತಂಡ ರಚನೆ: ಸತೀಶ ಜಾರಕಿಹೊಳಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ
Hubballi: ಬಂಧಿಸಲು ಹೋದ ಪೊಲೀಸರ ಮೇಲೆ ದಾಳಿ… ಆರೋಪಿ ಕಾಲಿಗೆ ಗುಂಡೇಟು
Hubballi: ಸಿಲಿಂಡರ್ ಸ್ಫೋಟ ಪ್ರಕರಣ… ಮತ್ತೋರ್ವ ಕೊನೆಯುಸಿರು, ಮೃತರ ಸಂಖ್ಯೆ 8ಕ್ಕೆ ಏರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
ಸಂಸ್ಕೃತ ಕಾಲೇಜಿನ 120ರ ಸಂಭ್ರಮದಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟಾಗಲಿ: ವಿ| ಪ್ರಸನ್ನಾಚಾರ್ಯ
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.