Udupi: ಸರಕಾರಿ ಯೋಜನೆಗಳ ಸಮರ್ಪಕ ಅನುಷ್ಠಾನ: ರೆಜು ಸೂಚನೆ


Team Udayavani, Sep 8, 2023, 12:51 AM IST

m t reju

ಉಡುಪಿ: ಸರಕಾರ ಜನಪರ ಯೋಜನೆ, ಕಾರ್ಯಕ್ರಮ ಗಳನ್ನು ಸಮರ್ಪಕವಾಗಿ ಅನುಷ್ಠಾನ ಗೊಳಿಸಬೇಕು. ಶೇ. 100ರಷ್ಟು ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ| ಎಂ.ಟಿ. ರೆಜು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಗುರುವಾರ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆ ಅಡಿ 2,56,850 ಗುರಿ ಹೊಂದಿ 2,11,478 ಮಂದಿ ನೋಂದಣಿಯಾಗಿ ಶೇ. 82.34 ಪ್ರಗತಿಯಾಗಿದೆ. ರೇಷನ್‌ ಕಾರ್ಡ್‌ ಸಮಸ್ಯೆಗಳು ಅಥವಾ ಆನ್‌ಲೈನ್‌ ಪೋರ್ಟಲ್‌ನಲ್ಲಿ ಸಮಸ್ಯೆಗಳಿದ್ದಲ್ಲಿ ಜಿಲ್ಲಾಧಿಕಾರಿಯವರ ಗಮನಕ್ಕೆ ತರಬೇಕು. ಅಂಗನವಾಡಿಗಳಲ್ಲಿ ಮಕ್ಕಳಿಗೆ ನೀಡುವ ಆಹಾರ ಕಿಟ್‌ ಬಗ್ಗೆ ಮೇಲ್ವಿಚಾರಕರಿಗೆ ಸರಿಯಾಗಿ ಮಾಹಿತಿ ನೀಡಬೇಕು. ಕಿಟ್‌ ಸರಬರಾಜು, ಆಹಾರ ವಿತರಣೆ ಮಾಡುತ್ತಿರುವ ಬಗ್ಗೆ ಸಂಬಂಧಿಸಿದ ದಾಖಲೆ ಸರಿಯಾಗಿ ನಿರ್ವಹಣೆ ಮಾಡದಿರುವುದು ಕಂಡು ಬಂದಿದೆ. ಈ ಬಗ್ಗೆ ಪರಿಶೀಲಿಸಿ ಜಿಲ್ಲಾಧಿಕಾರಿಯವರಿಗೆ ವರದಿ ನೀಡಬೇಕು ಎಂದು ಸೂಚಿಸಿದರು.

ಶಿಶು ಅಭಿವೃದ್ಧಿ ಅಧಿಕಾರಿಗಳು ಹಾಗೂ ಉಪ ನಿರ್ದೇಶಕರು ಆಗಿಂದಾಗ್ಗೆ ಅಂಗನವಾಡಿಗೆ ಭೇಟಿ ನೀಡಬೇಕು. ಸರಕಾರದ ಯೋಜನೆಗಳು ಸುತ್ತೋಲೆಗಳ ಬಗ್ಗೆ ಕೆಳಸ್ತರದ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಅಂಗನವಾಡಿಯ ಸ್ವತ್ಛತೆಗೆ ಆದ್ಯತೆ ನೀಡಿ, ಮಕ್ಕಳಿಗೆ ಆಟಿಕೆಗಳನ್ನು ಆಟ ಆಡಲು ನೀಡಬೇಕು ಎಂದರು.

ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರ ಪದಾರ್ಥಗಳನ್ನು ಸರಕಾರದ ಸೂಚನೆಯ ಅನ್ವಯದಲ್ಲಿ ನೀಡಬೇಕು. ಖಾಸಗಿ ಕಟ್ಟಡಗಳಲ್ಲಿ ನಡೆಯುತ್ತಿರುವ ವಿದ್ಯಾರ್ಥಿ ನಿಲಯಗಳನ್ನು ಸ್ವಂತ ಕಟ್ಟಡವಾಗಿ ಪರಿವರ್ತಿಸಲು ಮುಂದಾಗಬೇಕು. ಅಗತ್ಯವಿದ್ದಲ್ಲಿ ಶಿಕ್ಷಣ ಇಲಾಖೆಯ ಜಾಗಗಳನ್ನು ಬಳಸಿಕೊಳ್ಳಲು ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಬೇಕು ಎಂದು ಸೂಚನೆ ನೀಡಿದರು.

ಖಾಸಗಿ ಬಸ್ಸಲ್ಲಿ “ಶಕ್ತಿ”: ಸರಕಾರದ ಗಮನಕ್ಕೆ
ಜಿಲ್ಲೆಗೆ ಹೆಚ್ಚುವರಿ 50 ಕೆಎಸ್ಸಾರ್ಟಿಸಿ ಬಸ್‌ ಬೇಕೆಂಬ ಬೇಡಿಕೆಯಿದೆ. ಜಿಲ್ಲೆಯಲ್ಲಿ ಖಾಸಗಿ ಬಸ್‌ನಲ್ಲಿಯೂ ಶಕ್ತಿ ಯೋಜನೆ ಜಾರಿಗೆ ತರಬೇಕು ಎಂಬ ಬೇಡಿಕೆ ಇದ್ದು ಸರಕಾರದ ಗಮನಕ್ಕೆ ತರಲಾಗುವುದು ಎಂದರು.

ಜಿಲ್ಲೆಯಲ್ಲಿ ತಾಯಿ ಮತ್ತು ಮಕ್ಕಳ ಮರಣ ಸಂಖ್ಯೆ ಹೆಚ್ಚಿರುವುದು ಕಂಡು ಬಂದಿದೆ. ಗರ್ಭಿಣಿಯರಿಗೆ ಸಕಾಲದಲ್ಲಿ ತಾಯಿ ಕಾರ್ಡನ್ನು ವಿತರಿಸಿ ಕಾಲಕಾಲಕ್ಕೆ ಅವರಿಗೆ ಆರೋಗ್ಯ ತಪಾಸಣೆ ಮಾಡಬೇಕು. ಗರ್ಭಿಣಿಯರ ಆರೋಗ್ಯ ಸುಧಾರಣೆ ಕುರಿತು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು, ಸಿಬಂದಿ ವರ್ಗಕ್ಕೆ ಕಾರ್ಯಾಗಾರ ಆಯೋಜಿಸಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾ ಕುಮಾರಿ, ಜಿಪಂ ಸಿಇಒ ಪ್ರಸನ್ನ ಎಚ್‌., ಅಪರ ಜಿಲ್ಲಾಧಿಕಾರಿ ಮಮತಾದೇವಿ, ಜಿಲ್ಲಾ ಮಟ್ಟದ ಅನುಷ್ಠಾನಾಧಿ ಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.