G20 Summit: ಬಿಗಿ ಭದ್ರತೆಯೊಂದಿಗೆ ವಿವಿಧ ದೇಶಗಳ ಗಣ್ಯರ ಸ್ವಾಗತಕ್ಕೆ ಸಜ್ಜಾಗಿದೆ ದೆಹಲಿ
Team Udayavani, Sep 8, 2023, 9:49 AM IST
ನವದೆಹಲಿ: ಸೆಪ್ಟೆಂಬರ್ 9 ರಿಂದ ಆರಂಭವಾಗುವ ಜಿ-20 ಶೃಂಗಸಭೆಗೆ ನವದೆಹಲಿ ಸಜ್ಜುಗೊಂಡಿದ್ದು ಭಿತ್ತಿ ಚಿತ್ರಗಳು, ಬೀದಿ ದೀಪಗಳು, ಜಾಹಿರಾತು ಫಲಕಗಳು ಇಡೀ ನಗರಕ್ಕೆ ನಗರವೇ ಮದುವಣಗಿತ್ತಿಯಂತೆ ಶೃಂಗಾರಗೊಂಡು ಆಗಮಿಸುವ ವಿವಿಧ ರಾಷ್ಟ್ರಗಳ ನಾಯಕರ ಸ್ವಾಗತಕ್ಕೆ ಸಜ್ಜಾಗಿದೆ.
ಭಾರತದ ಅಧ್ಯಕ್ಷತೆಯಲ್ಲಿ ನಡೆಯುವ ಐತಿಹಾಸಿಕ ಜಿ20 ಶೃಂಗಸಭೆಯಲ್ಲಿ 29 ರಾಷ್ಟ್ರಗಳ ಮುಖ್ಯಸ್ಥರು ಮತ್ತು ಯುರೋಪಿಯನ್ ಒಕ್ಕೂಟದ ಉನ್ನತ ಅಧಿಕಾರಿಗಳು ಮತ್ತು ಆಹ್ವಾನಿತ ದೇಶಗಳು ಮತ್ತು 14 ಅಂತಾರಾಷ್ಟ್ರೀಯ ಸಂಸ್ಥೆಗಳ ಮುಖ್ಯಸ್ಥರು ಮಹತ್ವದ ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
G20 ಶೃಂಗಸಭೆಯ ಭಾಗವಾಗಲಿರುವ ವಿಶ್ವ ನಾಯಕರು
G20 ಶೃಂಗಸಭೆಯಲ್ಲಿ 19 ದೇಶಗಳನ್ನು ಒಳಗೊಂಡಿದೆ: ಅರ್ಜೆಂಟೀನಾ, ಆಸ್ಟ್ರೇಲಿಯಾ, ಬ್ರೆಜಿಲ್, ಕೆನಡಾ, ಚೀನಾ, ಫ್ರಾನ್ಸ್, ಜರ್ಮನಿ, ಭಾರತ, ಇಂಡೋನೇಷ್ಯಾ, ಇಟಲಿ, ಜಪಾನ್, ರಿಪಬ್ಲಿಕ್ ಆಫ್ ಕೊರಿಯಾ, ಮೆಕ್ಸಿಕೋ, ರಷ್ಯಾ, ಸೌದಿ ಅರೇಬಿಯಾ, ದಕ್ಷಿಣ ಆಫ್ರಿಕಾ, ಟರ್ಕಿ, ಯುನೈಟೆಡ್ ಕಿಂಗ್‌ಡಮ್, ಯುನೈಟೆಡ್ ಸ್ಟೇಟ್ಸ್– ಮತ್ತು ಯುರೋಪಿಯನ್ ಯೂನಿಯನ್.
ನವದೆಹಲಿಯಲ್ಲಿ ನಡೆಯುತ್ತಿರುವ ಜಿ 20 ಶೃಂಗಸಭೆಯಲ್ಲಿ ಉನ್ನತ ನಾಯಕರು ಭಾಗವಹಿಸಲಿದ್ದಾರೆ. ಮುಂದಿನ ಮೂರು ದಿನಗಳಲ್ಲಿ, ರಾಷ್ಟ್ರೀಯ ರಾಜಧಾನಿ ಯುಎಸ್ ಅಧ್ಯಕ್ಷ ಜೋ ಬಿಡೆನ್, ಬ್ರಿಟನ್‌ನ ಪ್ರಧಾನಿ ರಿಷಿ ಸುನಕ್ ಮತ್ತು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ, ಇತರರಿಗೆ ಆತಿಥ್ಯ ವಹಿಸಲಿದೆ.
ಅರ್ಜೆಂಟೀನಾದ ಅಧ್ಯಕ್ಷ ಆಲ್ಬರ್ಟೊ ಫೆರ್ನಾಂಡಿಸ್, ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್, ಬ್ರೆಜಿಲ್ ಅಧ್ಯಕ್ಷ ಲೂಯಿಸ್ ಇನಾಸಿಯೊ ಲುಲಾ ಡಾ ಸಿಲ್ವಾ, ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್, ಜರ್ಮನ್ ಚಾನ್ಸೆಲರ್ ಓಲಾಫ್ ಸ್ಕೋಲ್ಜ್, ಇಂಡೋನೇಷ್ಯಾ ಅಧ್ಯಕ್ಷ ಜೋಕೊ ವಿಡೋಡೊ, ಇಟಾಲಿಯನ್ ಪ್ರಧಾನಿ ಜಾರ್ಜಿಯಾ ಮೆಲೋನಿ, ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ, ದಕ್ಷಿಣ ಆಫ್ರಿಕಾದ ಅಧ್ಯಕ್ಷ ಫುಮಿಯೊ ಕಿಶಿಡಾ ರಮಾಫೋಸಾ, ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಮತ್ತು ಸೌದಿ ಅರೇಬಿಯಾ ಪ್ರಧಾನಿ ಮೊಹಮ್ಮದ್ ಬಿನ್ ಸಲ್ಮಾನ್ ಅಲ್ ಸೌದ್ ಅವರು ಎರಡು ದಿನಗಳ ಶೃಂಗಸಭೆಗೆ ಹಾಜರಾಗುವುದನ್ನು ದೃಢಪಡಿಸಿದ್ದಾರೆ.
ಎರಡು ದಿನಗಳ ಕಾರ್ಯಕ್ರಮದಲ್ಲಿ ನೈಜೀರಿಯಾದ ಅಧ್ಯಕ್ಷ ಬೋಲಾ ಅಹ್ಮದ್ ಟಿನುಬು, ಆಫ್ರಿಕನ್ ಯೂನಿಯನ್ ಅಧ್ಯಕ್ಷ ಅಜಾಲಿ ಅಸ್ಸೌಮಾನಿ, ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ದಕ್ಷಿಣ ಕೊರಿಯಾದ ಅಧ್ಯಕ್ಷ ಯುನ್ ಸುಕ್ ಯೋಲ್, ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ, ಚೀನಾದ ಪ್ರಧಾನಿ ಲಿ ಕಿಯಾಂಗ್ ಭಾಗವಹಿಸಲಿದ್ದಾರೆ.
ಯಾರೆಲ್ಲಾ ಗೈರಾಗಲಿದ್ದಾರೆ
ದೆಹಲಿಯಲ್ಲಿ ನಡೆಯಲಿರುವ ಶೃಂಗಸಭೆಯು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಅನುಪಸ್ಥಿತಿ ಎದ್ದು ಕಾಣುತ್ತಿದೆ, ಅದರಂತೆ ಸ್ಪ್ಯಾನಿಷ್ ಅಧ್ಯಕ್ಷ ಪೆಡ್ರೊ ಸ್ಯಾಂಚೆಝ್ ಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಜಿ 20 ಶೃಂಗಸಭೆಯಿಂದ ದೂರ ಉಳಿಯಲಿದ್ದಾರೆ ಎನ್ನಲಾಗಿದೆ.
ಎರಡು ದಿನಗಳ ಸಮಾವೇಶ:
ಸೆಪ್ಟೆಂಬರ್ 9-10 ರಂದು ಎರಡು ದಿನಗಳ ಶೃಂಗಸಭೆಯು ಪ್ರಗತಿ ಮೈದಾನದಲ್ಲಿ ಹೊಸದಾಗಿ ನಿರ್ಮಿಸಲಾದ ಅಂತರರಾಷ್ಟ್ರೀಯ ಸಮಾವೇಶ ಮತ್ತು ಪ್ರದರ್ಶನ ಕೇಂದ್ರ – ಭಾರತ್ ಮಂಟಪದಲ್ಲಿ ನಡೆಯಲಿದೆ.
ಭಾರತ ಮಂಟಪವನ್ನು ದೇಶದ ಶ್ರೀಮಂತ ಪರಂಪರೆ ಮತ್ತು ಸಾಂಸ್ಕೃತಿಕ ವೈವಿಧ್ಯತೆಯನ್ನು ಜಗತ್ತಿಗೆ ಪ್ರದರ್ಶಿಸುವಂತೆ ವಿನ್ಯಾಸಗೊಳಿಸಲಾಗಿದೆ. ಲುಟ್ಯೆನ್ಸ್ ದೆಹಲಿಯ ಪಕ್ಕದಲ್ಲಿರುವ ಭಾರತ್ ಮಂಟಪವು ಅತ್ಯುನ್ನತ ಮಟ್ಟದಲ್ಲಿ ‘ವಿಂಡೋ ಟು ದೆಹಲಿ’ ಅನ್ನು ಹೊಂದಿದೆ.
ಇದನ್ನೂ ಓದಿ: Bypoll Results: ಬಂಗಾಳ, ತ್ರಿಪುರ, ಯುಪಿ, ಉತ್ತರಾಖಂಡ ಕ್ಷೇತ್ರಗಳಲ್ಲಿ ಮತ ಎಣಿಕೆ ಆರಂಭ
ಹೆಚ್ಚಿನ ಭದ್ರತಾ ವ್ಯವಸ್ಥೆ:
100,000 ಕ್ಕೂ ಹೆಚ್ಚು ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಬೀದಿಗಳಲ್ಲಿ ಗಸ್ತು ತಿರುಗುವ ನಿರೀಕ್ಷೆಯಿದೆ, ಫೈಟರ್ ಜೆಟ್‌ಗಳು, ಸುಧಾರಿತ AI- ಆಧಾರಿತ ಕ್ಯಾಮೆರಾಗಳು, ಜ್ಯಾಮಿಂಗ್ ಸಾಧನಗಳು ಮತ್ತು ಸ್ನಿಫರ್ ಡಾಗ್‌ಗಳು ಇಲ್ಲಿ ಕಾರ್ಯ ನಿರ್ವಹಿಸಲಿದೆ.
ನಗರದಾದ್ಯಂತ ಅಳವಡಿಸಲಾಗಿರುವ 5,000 ಸಿಸಿಟಿವಿ ಕ್ಯಾಮೆರಾಗಳ ನೆಟ್‌ವರ್ಕ್‌ನ ಸಹಾಯದಿಂದ ದೆಹಲಿ ಪೊಲೀಸರು ಶೃಂಗಸಭೆಯ ಸಮಯದಲ್ಲಿ ಇಲ್ಲಿನ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
MUST WATCH
ಹೊಸ ಸೇರ್ಪಡೆ
Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.