Kadda Chitra; ಹಲವು ಆಯಾಮಗಳ ಪಾತ್ರವಿದು… ‘ಕದ್ದ ಚಿತ್ರ’ ಬಗ್ಗೆ ವಿಜಯ ರಾಘವೇಂದ್ರ ಮಾತು


Team Udayavani, Sep 8, 2023, 10:28 AM IST

Kadda Chitra; ಹಲವು ಆಯಾಮಗಳ ಪಾತ್ರವಿದು… ‘ಕದ್ದ ಚಿತ್ರ’ ಬಗ್ಗೆ ವಿಜಯ ರಾಘವೇಂದ್ರ ಮಾತು

ಕನ್ನಡದಲ್ಲಿ ಈಗ ಒಂದಷ್ಟು ಹೊಸ ಪ್ರಯೋಗಗಳ ಸಿನಿಮಾಗಳು ಬರುತ್ತಿವೆ. ಅದರಲ್ಲೂ ಚಿತ್ರರಂಗಕ್ಕೆ ಹೊಸದಾಗಿ ಬರುವ ನಿರ್ದೇಶಕರು ಆ ತರಹದ ಒಂದು ಪ್ರಯತ್ನ ಮಾಡುತ್ತಿದ್ದಾರೆ. ಇಂತಹ ಪ್ರಯತ್ನಗಳಿಗೆ ಕನ್ನಡದ ಮುಂಚೂಣಿ ನಟರು ಕೂಡಾ ಸಾಥ್‌ ನೀಡುತ್ತಿದ್ದಾರೆ. ಇದೇ ರೀತಿ ಈ ವಾರ ಹೊಸ ಪ್ರಯೋಗದ, ಕಂಟೆಂಟ್‌ ನಂಬಿಕೊಂಡಿರುವ ಚಿತ್ರವೊಂದು ತೆರೆಕಾಣುತ್ತಿದೆ. ಅದು “ಕದ್ದ ಚಿತ್ರ’. ಹೀಗೊಂದು ವಿಭಿನ್ನ ಟೈಟಲ್‌ ಮೂಲಕ ಆರಂಭದಿಂದಲೇ ಕುತೂಹಲ ಕೆರಳಿಸಿದ್ದ ಈ ಸಿನಿಮಾ ಇಂದು ತೆರೆಗೆ ಬರುತ್ತಿದೆ.

ವಿಜಯ ರಾಘವೇಂದ್ರ ನಾಯಕರಾಗಿ ನಟಿಸಿರುವ ಈ ಸಿನಿಮಾವನ್ನು ಸುಹಾಸ್‌ ನಿರ್ದೇಶಿಸಿದ್ದಾರೆ. ಇದೊಂದು ಕೃತಿಚೌರ್ಯದ ಕಥಾಹಂದರ ಹೊಂದಿರುವ ಸಿನಿಮಾ. ಬರಹಗಾರನೊಬ್ಬನ ಬದುಕಿನ ಕೇಸ್‌ ಸ್ಟಡಿ ಈ ಸಿನಿಮಾದಲ್ಲಿದೆ. ಜೊತೆಗೆ ಒಂದು ಕ್ರೈಂ ಎಳೆಯನ್ನು ಇಟ್ಟುಕೊಂಡು ಸಿನಿಮಾವನ್ನು ಮಾಡಲಾಗಿದೆ. ಈಗಾಗಲೇ ಬಿಡುಗಡೆಯಾಗಿರುವ ಸಿನಿಮಾದ ಹಾಡು, ಟ್ರೇಲರ್‌ ಹಿಟ್‌ ಆಗುವ ಮೂಲಕ ಚಿತ್ರತಂಡ ಖುಷಿಯಾಗಿದೆ. ಜೊತೆಗೆ ಸಿನಿಮಾದ ಪ್ರೀಮಿಯರ್‌ ಶೋ ನೋಡಿದವರಿಂದಲೂ ಮೆಚ್ಚುಗೆ ವ್ಯಕ್ತವಾಗುವ ಮೂಲಕ ಚಿತ್ರತಂಡ ಖುಷಿಯಾಗಿದೆ.

ಇನ್ನು, ಚಿತ್ರದ ಬಗ್ಗೆ ಮಾತನಾಡುವ ನಾಯಕ ನಟ ವಿಜಯ ರಾಘವೇಂದ್ರ, “ಆರಂಭದಲ್ಲಿ ಈ ಥರದ ಪಾತ್ರ ಮಾಡಲು ಹಿಂದೇಟು ಹಾಕಿದ್ದೆ. ಆದರೆ ನಿರ್ದೇಶನ ಸುಹಾಸ್‌ ಕೃಷ್ಣ ಮತ್ತು ಚಿತ್ರತಂಡದ ಮೇಲಿನ ಭರವಸೆ ಇಟ್ಟುಕೊಂಡು ಈ ಪಾತ್ರ ಒಪ್ಪಿಕೊಂಡೆ. ನಿರ್ದೇಶಕರು ನನ್ನೊಂದಿಗೆ ಮಾತನಾಡುವಾಗ ಅವರಲ್ಲಿರುವ ಹಸಿವು, ಆತುರ ಕಾಣಿಸಿತು. ಪಾತ್ರಕ್ಕೆ ತಕ್ಕಂತೆ ಮೊದಲ ಬಾರಿ ಸಿಗರೇಟ್‌ ಸೇದಿದ್ದೇನೆ. ಒಮ್ಮೆ ಶಾಂತ ಸ್ವಭಾವ, ಮತ್ತೂಮ್ಮೆ ಕೋಪದಿಂದ ಒಮ್ಮೆಲೇ ಪ್ರೇರಿತನಾಗುವಂಥ ಪಾತ್ರ ನಿರ್ವಹಿಸಿದ್ದೇನೆ. ಅದೆಲ್ಲದಕ್ಕೂ ಬಲವಾದ ಕಾರ ವಿರುತ್ತದೆ. ಅದೇನು ಅನ್ನೋದನ್ನ ಸಿನಿಮಾದಲ್ಲೇ ನೋಡಬೇಕು. ಪತ್ನಿ ಸ್ಪಂದನಾಗೂ ಈ ಸಿನಿಮಾದ ಕಥೆ, ಪಾತ್ರ ಮತ್ತು ತಂಡದ ಮೇಲೆ ಸಾಕಷ್ಟು ಕಾನ್ಫಿಡೆನ್ಸ್‌ ಇತ್ತು. ಸಿನಿಮಾದ ಕಥೆ ಮತ್ತು ಪಾತ್ರ ಆಡಿಯನ್ಸ್‌ಗೆ ಇಷ್ಟವಾಗಲಿದೆ’ ಎಂಬ ವಿಶ್ವಾಸ ವ್ಯಕ್ತಪಡಿಸುತ್ತಾರೆ.

“ಶಾನ್ವಿ ಟಾಕೀಸ್‌’ ಮತ್ತು “ದ್ವಾರಕ ಪೊ›ಡಕ್ಷನ್ಸ್‌’ ಬ್ಯಾನರಿನಲ್ಲಿ ಸಂದೀಪ್‌ ಹೆಚ್‌. ಕೆ ನಿರ್ಮಿಸಿರುವ “ಕದ್ದ ಚಿತ್ರ’ ಸಿನಿಮಾಕ್ಕೆ ಸುಹಾಸ್‌ ಕೃಷ್ಣ ನಿರ್ದೇಶನವಿದೆ. “ಕದ್ದ ಚಿತ್ರ’ ಸಿನಿಮಾದಲ್ಲಿ ನಟ ವಿಜಯ ರಾಘವೇಂದ್ರ, ನಮ್ರತಾ ಸುರೇಂದ್ರನಾಥ್‌ ಅವರೊಂದಿಗೆ ಬೇಬಿ ಆರಾಧ್ಯ, ರಾಘು ಶಿವಮೊಗ್ಗ, ಬಾಲಾಜಿ ಮನೋಹರ್‌, ಸುಜಿತ್‌ ಸುಪ್ರಭ, ಸ್ಟೀಫ‌ನ್‌, ವಿನಯ್‌ ರೆಡ್ಡಿ ಮೊದಲಾದವರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

“ಕದ್ದ ಚಿತ್ರ’ ಸಿನಿಮಾದ ಹಾಡುಗಳಿಗೆ ಕೃಷ್ಣರಾಜ್‌ ಸಂಗೀತ ಸಂಯೋಜಿಸಿದ್ದಾರೆ. ಚಿತ್ರಕ್ಕೆ ಗೌತಮ್‌ ಮನು ಛಾಯಾಗ್ರಹಣ, ಶ್ರೀ ಕ್ರೇಜಿಮೈಂಡ್ಸ್‌ ಸಂಕಲನವಿದೆ.

ಟಾಪ್ ನ್ಯೂಸ್

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

Forest: ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

3

Mangaluru: ಅನಧಿಕೃತ ಫ್ಲೆಕ್ಸ್‌ , ಬ್ಯಾನರ್‌ ತೆರವು ಆರಂಭ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

2

Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ

4(1)

Lupus Nephritis: ಲೂಪಸ್‌ ನೆಫ್ರೈಟಿಸ್‌ ರೋಗಿಗಳಿಗೆ ಒಂದು ಮಾರ್ಗದರ್ಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.