Bangalore-Chennai: 2 ಗಂಟೆ ಪ್ರಯಾಣ: ಡಿಸೆಂಬರ್‌ಗೆ ಎಕ್ಸ್‌ಪ್ರೆಸ್ ಹೆದ್ದಾರಿ ಲೋಕಾರ್ಪಣೆ
Team Udayavani, Sep 8, 2023, 8:44 PM IST
ನವದೆಹಲಿ: ಶೀಘ್ರದಲ್ಲೇ ರಸ್ತೆ ಮಾರ್ಗದಲ್ಲಿ ಬೆಂಗಳೂರು ಮತ್ತು ಚೆನ್ನೈ ನಡುವೆ ಕೇವಲ ಎರಡು ಗಂಟೆಗಳಲ್ಲಿ ಪ್ರಯಾಣಿಸಬಹುದಾಗಿದೆ. ಈ ಕುರಿತು ಮಾಹಿತಿ ನೀಡಿದ ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, “ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿ ಕಾಮಗಾರಿಯ ಪ್ರಗತಿ ಪರಿಶೀಲಿಸಲಾಯಿತು.
ಇದೇ ವರ್ಷ ಡಿಸೆಂಬರ್ ಅಥವಾ 2024ರ ಜನವರಿಯಲ್ಲಿ ಹೆದ್ದಾರಿ ಲೋಕಾರ್ಪಣೆಗೊಳಿಸಲಾಗುವುದು. ಇದರ ಮೂಲಕ ಬೆಂಗಳೂರು-ಚೆನ್ನೈ ನಡುವಿನ ಪ್ರಯಾಣ ಅವಧಿ ಕೇವಲ ಎರಡು ಗಂಟೆಗೆ ಇಳಿಯಲಿದೆ’ ಎಂದು ತಿಳಿಸಿದ್ದಾರೆ.
ಇನ್ನೊಂದೆಡೆ, “ಪ್ರವೇಶ ನಿಯಂತ್ರಿತ ಹೆದ್ದಾರಿ ಯೋಜನೆ ಮೂಲಕ ಶೀಘ್ರದಲ್ಲೇ ದೆಹಲಿಯೊಂದಿಗೆ ಚೆನ್ನೈ ಸಂಪರ್ಕ ಹೊಂದಲಿದೆ’ ಎಂದು ಮಾಹಿತಿ ನೀಡಿದ್ದಾರೆ.
ಚೆನ್ನೈನಲ್ಲಿ ನಡೆದ ಅಶೋಕ್ ಲೇಲ್ಯಾಂಡ್ ಕಂಪನಿಯ 75ನೇ ವರ್ಷದ ವಾರ್ಷಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಪ್ರವೇಶ ನಿಯಂತ್ರಿತ ಹೆದ್ದಾರಿ ಯೋಜನೆ ಮೂಲಕ ದೆಹಲಿ, ಸೂರತ್, ನಾಸಿಕ್, ಅಹ್ಮದ್‌ನಗರ್, ಕರ್ನೂಲ್, ಚೆನ್ನೈ, ಕನ್ಯಾಕುಮಾರಿ, ತಿರುವನಂತಪುರ, ಕೊಚ್ಚಿ, ಬೆಂಗಳೂರು ಮತ್ತು ಹೈದರಾಬಾದ್‌ಗೆ ಒಳ್ಳೆಯ ರಸ್ತೆಯನ್ನು ಒದಗಿಸುತ್ತಿದ್ದೇವೆ. ದೆಹಲಿ ಮತ್ತು ಜೈಪುರದ ನಡುವೆ ಎಲೆಕ್ಟ್ರಿಕ್ ಕೇಬಲ್ ಹೆದ್ದಾರಿ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ,’ ಎಂದರು.
“ದೇಶದಲ್ಲಿ ಎಲೆಕ್ಟ್ರಿಕ್ ಬಸ್‌ಗಳ ಅಗತ್ಯ ಹೆಚ್ಚಿದೆ. ಪರ್ಯಾಯ ಇಂಧನ ಬಳಕೆಗೆ ಹೆಚ್ಚಿನ ಉತ್ತೇಜನ ನೀಡಲಾಗುತ್ತಿದೆ. ಎಲೆಕ್ಟ್ರಿಕ್, ಬಯೊ-ಎಥನಾಲ್ ಮತ್ತು ಎಥನಾಲ್ ಚಾಲಿತ ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ರಸ್ತೆಗೆ ಇಳಿಯಬೇಕಿದೆ’ ಎಂದು ನಿತಿನ್ ಗಡ್ಕರಿ ಹೇಳಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Mangaluru: ಇ ರಿಕ್ಷಾಗಳಿಗೆ ಮಹಿಳಾ ಸಾರಥಿ ಪ್ರಯೋಗ ವಿಫಲ
Mangaluru: ಮುಂದಿನ ವರ್ಷ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಮುಲ್ಲೈ ಮುಗಿಲನ್
Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್ ಪರದಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.