Politics: ಹಿಂದಿನ ಸಿಎಂ ನಿವಾಸಕ್ಕೆ ಮುತ್ತಿಗೆ: ಸಿದ್ದು ವಿರುದ್ಧದ ಪ್ರಕರಣಕ್ಕೆ ತಡೆ
Team Udayavani, Sep 8, 2023, 8:58 PM IST
ಬೆಂಗಳೂರು: ಭ್ರಷ್ಟಾಚಾರದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಹಿಂದಿನ ಬಿಜೆಪಿ ಸರಕಾರದಲ್ಲಿ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಅಂದಿನ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಸಂಬಂಧ ಆಗ ವಿಪಕ್ಷ ನಾಯಕರಾಗಿದ್ದ ಹಾಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಾಂತರ ತಡೆ ನೀಡಿದೆ.
ಪ್ರಕರಣ ರದ್ದು ಕೋರಿ ಸಿದ್ದರಾಮಯ್ಯ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ಸಂಸದರು ಹಾಗೂ ಶಾಸಕರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ತ್ವರಿತ ವಿಚಾರಣೆಗೆ ನಿಗದಿತವಾಗಿರುವ ಹೈಕೋರ್ಟ್ ವಿಶೇಷ ನ್ಯಾಯಪೀಠದ ನ್ಯಾ| ಎಂ. ನಾಗಪ್ರಸನ್ನ ಅವರು ಹೈಕೋರ್ಟ್ ಧಾರವಾಡ ಪೀಠದಲ್ಲಿ ಶುಕ್ರವಾರ ವಿಚಾರಣೆ ನಡೆಸಿದರು.
ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಮುಂದಿನ ವಿಚಾರಣೆವರೆಗೆ ಪ್ರಕರಣಕ್ಕೆ ತಡೆ ನೀಡಿತು. ಅಲ್ಲದೇ ಸರಕಾರಿ ವಕೀಲರಿಗೆ ನೋಟಿಸ್ ಜಾರಿಗೊಳಿಸಿ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆಯನ್ನು ಸೆ.15ಕ್ಕೆ ಮುಂದೂಡಿತು. ಅರ್ಜಿದಾರರ ಪರ ಶತಾಭಿಷ್ ಶಿವಣ್ಣ ವಾದ ಮಂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ
MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್. ಶ್ರೀವತ್ಸ
Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ
Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್ “ಇಂಜೆಕ್ಷನ್’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.