Ramanagar; ಯೋಗೇಶ್ವರ್ ನಾಲಗೆ ಬಿಗಿ ಹಿಡಿದುಕೊಳ್ಳಲಿ: ಏಕವಚನದಲ್ಲಿ ಡಿ ಕೆ ಸುರೇಶ್ ವಾಗ್ದಾಳಿ
Team Udayavani, Sep 9, 2023, 3:49 PM IST
![Ramanagar; ಯೋಗೇಶ್ವರ್ ನಾಲಗೆ ಬಿಗಿ ಹಿಡಿದುಕೊಳ್ಳಲಿ: ಏಕವಚನದಲ್ಲಿ ಡಿ ಕೆ ಸುರೇಶ್ ವಾಗ್ದಾಳಿ](https://www.udayavani.com/wp-content/uploads/2023/09/cpy-dk-620x342.jpg)
![Ramanagar; ಯೋಗೇಶ್ವರ್ ನಾಲಗೆ ಬಿಗಿ ಹಿಡಿದುಕೊಳ್ಳಲಿ: ಏಕವಚನದಲ್ಲಿ ಡಿ ಕೆ ಸುರೇಶ್ ವಾಗ್ದಾಳಿ](https://www.udayavani.com/wp-content/uploads/2023/09/cpy-dk-620x342.jpg)
ರಾಮನಗರ: ಮೆಡಿಕಲ್ ಕಾಲೇಜು ಸ್ಥಳಾಂತರ ವಿಚಾರದಲ್ಲಿ ಸಿ.ಪಿ ಯೋಗೇಶ್ವರ್ ಮತ್ತು ಸಂಸದ ಡಿಕೆ ಸುರೇಶ್ ನಡುವಿನ ವಾಕ್ಸಮರ ಮುಂದುವರಿದಿದ್ದು, ಸಿಪಿವೈ ವಿರುದ್ಧ ಸುರೇಶ್ ಇಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.
ಅವನಿಗೆ ಮಾಡಲು ಬೇರೆ ಏನೂ ಕೆಲಸ ಇಲ್ಲ! ಅದಕ್ಕೆ ಹೀಗೆ ಮಾತನಾಡುತ್ತಿದ್ದಾನೆ. ಅವನು ಬಿಡದಿಯಲ್ಲಿ ರಿಯಲ್ ಎಸ್ಟೇಟ್ ಹೆಸರಲ್ಲಿ ಜನರಿಗೆ ಟೋಪಿ ಹಾಕಿದ್ದಾನೆ. ಅದನ್ನು ಮರೆತು ಹೋಗಿದ್ದಾನಾ ಕೇಳಿ. ರಿಯಲ್ ಎಸ್ಟೇಟ್ ದಂಧೆ ಮಾಡಬೇಕಾದ ಅನಿವಾರ್ಯ ನಮಗಿಲ್ಲ. ಮೆಡಿಕಲ್ ಕಾಲೇಜು ಕನಕಪುರದಲ್ಲೂ ಆಗುತ್ತದೆ, ರಾಮನಗರದಲ್ಲೂ ಆಗುತ್ತದೆ. ಇವರೆಲ್ಲ ಕೆಲಸ ಇಲ್ಲ ಎಂದು ಹೀಗೆ ಗೊಂದಲ ಮಾಡುತ್ತಿದ್ದಾರೆ. ಇಬ್ಬರನ್ನೂ ಜನ ಉಗಿದು ಆಚೆ ಇಟ್ಟಿದ್ದಾರೆ. 20 ವರ್ಷದಿಂದ ಮಾಡದಿದ್ದವರು ಈಗ ಬಂದ್ ಮಾಡುತ್ತೇವೆ, ಹೋರಾಟ ಮಾಡುತ್ತೇವೆ ಎನ್ನುತ್ತಿದ್ದಾರೆ. ಐದು ವರ್ಷ ಬಿಜೆಪಿ ಸರ್ಕಾರವಿದ್ದಾಗ ಮೆಡಿಕಲ್ ಕಾಲೇಜು ಮಾಡಲಿಲ್ಲ. ಅರಣ್ಯ ಮಂತ್ರಿ ಆಗಿದ್ದರು, ಪ್ರವಾಸೋದ್ಯಮ ಮಂತ್ರಿಯಾಗಿದ್ದರು. ಆಗ ಯಾಕೆ ಮೆಡಿಕಲ್ ಕಾಲೇಜು ಮಾಡಲಿಲ್ಲ. ಈಗ ಬಣ್ಣ ಹಾಕೊಂಡು ನಾಟಕ ಮಾಡಲು ಬಂದಿದ್ದಾನೆ ಎಂದರು.
ಯಡಿಯೂರಪ್ಪ ಅವರನ್ನು ಇವನು ಬ್ಲಾಕ್ ಮೇಲೆ ಮಾಡಿದ್ದ. ಅದ್ಯಾವುದೋ ಸಿಡಿ ಇಟ್ಕೊಂಡು ಸರ್ಕಾರ ಕಿತ್ತಿದ್ದಾಯ್ತು. ಈಗ ಕಾಂಗ್ರೆಸ್ ಸರ್ಕಾರ ತೆಗೆಯುತ್ತೇನೆಂದು ಹೇಳುತ್ತಿದ್ದಾನೆ. ಬರೀ ಸರ್ಕಾರ ಬೀಳಿಸುವ ಕೆಲಸ ಮಾತ್ರ ಮಾಡುವುದು. ಜನರಿಗೋಸ್ಕರ ಏನು ಮಾಡಿದ್ದಾನೆ. ಯೋಗೇಶ್ವರ್ ನಾಲಗೆ ಬಿಗಿ ಹಿಡಿದುಕೊಳ್ಳಲಿ ಎಂದು ಡಿಕೆ ಸುರೇಶ್ ಎಚ್ಚರಿಸಿದರು.
ನಾವು ಕೆಲಸ ಮಾಡುವುದಕ್ಕೆ ತಾಳ್ಮೆಯಿಂದ ಅವಕಾಶ ಕೊಡಿ. ವಿರೋಧ ಪಕ್ಷದ ಸಲಹೆಗಳನ್ನು ಸಕಾರಾತ್ಮಕವಾಗಿ ಸ್ವೀಕಾರ ಮಾಡುತ್ತೇವೆ. ಆದರೆ ಬಾಯಿಗೆ ಬಂದಹಾಗೆ ಮಾತನಾಡಿದರೆ ನಾವು ಕೇಳುವುದಿಲ್ಲ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ವಿರುದ್ಧ ಗುಡಿಗಿದರು.
ಇದನ್ನೂ ಓದಿ:Brahmastra ರಿಲೀಸ್ ಆಗಿ 1 ವರ್ಷ: ಪಾರ್ಟ್ 2 & 3 ಬಗ್ಗೆ ಅಪ್ಡೇಟ್ ಕೊಟ್ಟ ನಿರ್ದೇಶಕ
ಲೋಕಸಭಾ ಚುನಾವಣೆಗೆ ಜೆಡಿಎಸ್-ಬಿಜೆಪಿ ಮೈತ್ರಿ ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಅದು ಆ ಪಕ್ಷಗಳ ವೈಯಕ್ತಿಕ ವಿಚಾರ. ಅವರ ಏನೇ ತೀರ್ಮಾನ ಮಾಡಿ ಮೈತ್ರಿ ಮಾಡ್ಕೊಂಡರೂ ರಾಜ್ಯದ ಜನ ಗಮನಿಸುತ್ತಿದ್ದಾರೆ. ಕಾಂಗ್ರೆಸ್ ಜಾತ್ಯಾತೀತ ತತ್ವದ ಮೇಲೆ ಆಡಳಿತ ಮಾಡುತ್ತಿದೆ. ಯಾರು ಹೊಂದಾಣಿಕೆ ಮಾಡಿಕೊಂಡರೂ ನಮ್ಮ ಸಿದ್ದಾಂತದ ಮೇಲೆ ನಾವು ಹೋರಾಟ ಮಾಡುತ್ತೇವೆ. ನಮ್ಮ ಒಕ್ಕೂಟ ವ್ಯವಸ್ಥೆ ಬಲಪಡಿಸಲು ಹೋರಾಟ ಮಾಡುತ್ತೇವೆ ಎಂದರು.
ಬೆಂಗಳೂರು ಗ್ರಾಮಾಂತರ ಕ್ಷೇತ್ರ ಟಾರ್ಗೆಟ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಧಾರಾಳವಾಗಿ ಮಾಡಲಿ ಟಾರ್ಗೆಟ್ ಮಾಡಲಿ, ಯಾರು ಬೇಡ ಎನ್ನುತ್ತಾರೆ. ಬಿಜೆಪಿ ಅವರು ಮಾಡಲಿ, ಜೆಡಿಎಸ್ ಅವರೂ ಮಾಡಲಿ. ಎಲ್ಲವನ್ನೂ ಜನ ನೋಡುತ್ತಾರೆ. ಅವರೇ ಅಂತಿಮ ತೀರ್ಮಾನ ಮಾಡುತ್ತಾರೆ. ಇಂಡಿಯಾ ಒಕ್ಕೂಟ ದೇಶದಲ್ಲಿ ಒಗ್ಗಟ್ಟಾಗಿದೆ. ಇದರಿಂದ ಬಿಜೆಪಿ ಹಾಗೂ ಜೆಡಿಎಸ್ ಅಸ್ತಿತ್ವ ಕಳೆದುಕೊಳ್ಳುವ ಭಯ ಕಾಡುತ್ತಿದೆ. ಹಾಗಾಗಿ ಅಸ್ತಿತ್ವ ಉಳಿಸಿಕೊಳ್ಳಿಲು ಮೈತ್ರಿ ಮಾಡ್ಕೊತ್ತಿದ್ದಾರೆ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ](https://www.udayavani.com/wp-content/uploads/2025/02/car-3-150x82.jpg)
![Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ](https://www.udayavani.com/wp-content/uploads/2025/02/car-3-150x82.jpg)
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
![Instagram provides clues to finding suspect who had been on the run for 9 years](https://www.udayavani.com/wp-content/uploads/2025/02/inst-150x82.jpg)
![Instagram provides clues to finding suspect who had been on the run for 9 years](https://www.udayavani.com/wp-content/uploads/2025/02/inst-150x82.jpg)
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
![Devegowda](https://www.udayavani.com/wp-content/uploads/2025/02/Devegowda-150x90.jpg)
![Devegowda](https://www.udayavani.com/wp-content/uploads/2025/02/Devegowda-150x90.jpg)
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
![Sathish-rajanna-mahadevappa](https://www.udayavani.com/wp-content/uploads/2025/02/Sathish-rajanna-mahadevappa-150x90.jpg)
![Sathish-rajanna-mahadevappa](https://www.udayavani.com/wp-content/uploads/2025/02/Sathish-rajanna-mahadevappa-150x90.jpg)
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
![Jayalalittha-Golds](https://www.udayavani.com/wp-content/uploads/2025/02/Jayalalittha-Golds-150x90.jpg)
![Jayalalittha-Golds](https://www.udayavani.com/wp-content/uploads/2025/02/Jayalalittha-Golds-150x90.jpg)
Jayalalithaa Assets: ಮಾಜಿ ಸಿಎಂ ಜಯಲಲಿತಾ 27 ಕೆ.ಜಿ. ಚಿನ್ನಾಭರಣ ತಮಿಳುನಾಡು ವಶಕ್ಕೆ