Dandeli; ದ್ವಿಚಕ್ರ ವಾಹನ ಮತ್ತು ಕಾರು ಢಿಕ್ಕಿ: ಓರ್ವ ಗಂಭೀರ
ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ದ್ವಿಚಕ್ರ ವಾಹನ ಢಿಕ್ಕಿ
Team Udayavani, Sep 9, 2023, 9:06 PM IST
ದಾಂಡೇಲಿ : ಬೆಳಗಾವಿಯಿಂದ ಬರುತ್ತಿದ್ದ ದ್ವಿಚಕ್ರ ವಾಹನ ಮತ್ತು ದಾಂಡೇಲಿಯಿಂದ ಬೆಳಗಾವಿ ಕಡೆಗೆ ಹೋಗುತ್ತಿದ್ದ ಕಾರೊಂದು ಪರಸ್ಪರ ಡಿಕ್ಕಿಯಾಗಿ ದ್ವಿಚಕ್ರ ವಾಹನದ ಸವಾರ ಗಂಭೀರ ಗಾಯಗೊಂಡ ಘಟನೆ ಶನಿವಾರ ಸಂಜೆ ನಡೆದಿದೆ.
ಬೆಳಗಾವಿಯಿಂದ ದಾಂಡೇಲಿಗೆ ಬರುತ್ತಿದ್ದ ದ್ವಿಚಕ್ರ ವಾಹನ ಹಾಗೂ ದಾಂಡೇಲಿ ಕಡೆಯಿಂದ ಬೆಳಗಾವಿಗೆ ಹೋಗುತ್ತಿದ್ದ ಕಾರೊಂದು ನಾನಾಕೆಸರೋಡಾ ಎಂಬಲ್ಲಿ ಪರಸ್ಪರ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಸವಾರ ಬೆಳಗಾವಿಯ ಶಕೀಲ್ ತೋರ್ಗಲ್ ಎಂಬಾತ ಗಂಭೀರ ಗಾಯವಾಗಿದ್ದು, ಕಾಲಿಗೆ ಬಲವಾದ ಹೊಡೆತ ಬಿದ್ದಿದ್ದು, ತತ್ ಕ್ಷಣವೆ ನಗರದ ಸಾರ್ವಜನಿಕ ಆಸ್ಪತ್ರೆಗೆ ಕರೆತಂದು ಪ್ರಾಥಮಿಕ ಚಿಕಿತ್ಸೆಯನ್ನು ನೀಡಿ ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಮತ್ತು ಸಾರ್ವಜನಿಕ ಆಸ್ಪತ್ರೆಗೆ ದಾಂಡೇಲಿ ಗ್ರಾಮೀಣ ಪೊಲೀಸರು ಭೇಟಿ ನೀಡಿದ್ದು, ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.
ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಗೆ ದ್ವಿಚಕ್ರ ವಾಹನ ಡಿಕ್ಕಿ
ಅಂಬೇವಾಡಿ ಗ್ರಾಮ ಪಂಚಾಯ್ತು ವ್ಯಾಪ್ತಿಯಲ್ಲಿ ಬರುವ ಅಂಬೇವಾಡಿ-ನವಗ್ರಾಮದ ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಯೋರ್ವರಿಗೆ ವೇಗವಾಗಿ ಬಂದ ದ್ವಿಚಕ್ರ ವಾಹನವೊಂದು ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಧಾರವಾಡದ ಎಸ್.ಡಿ.ಎಂ.ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದು, ಈ ಬಗ್ಗೆ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವಗ್ರಾಮದ ನಿವಾಸಿ ಚಂದ್ರಶೇಖರ ರಾಮಕೃಷ್ಣ ಭಟ್ ಎಂಬವರೇ ಗಾಯಗೊಂಡ ದುರ್ದೈವಿಯಾಗಿದ್ದಾರೆ. ಇವರು ಮನೆ ಮುಂಭಾಗದಲ್ಲಿರುವ ರಸ್ತೆಯ ಬದಿಯಲ್ಲಿ ನಿಂತಿದ್ದಾಗ ಅತೀಯಾದ ವೇಗವಾಗಿ ಬಂದ ದ್ವಿಚಕ್ರ ವಾಹನ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಚಂದ್ರಶೇಖರ ರಾಮಕೃಷ್ಣ ಭಟ್ ಅವರ ಬಲಗಾಲಿಗೆ ಗಂಭೀರ ಹೊಡೆತಬಿದ್ದಿದ್ದು, ಪಕ್ಕೆಲುಬು ಸೇರಿದಂತೆ ದೇಹದ ಇನ್ನಿತರ ಕಡೆಗಳಿಗೂ ಗಾಯವಾಗಿದೆ.
ಈ ಘಟನೆ ಸೆ 6 ರಂದು ನಡೆದಿದ್ದು, ಅಪಘಾತಕ್ಕೆ ಕಾರಣವಾದ ದ್ವಿಚಕ್ರ ವಾಹನವನ್ನು ದಾಂಡೇಲಿ ಗ್ರಾಮೀಣ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಗಾಯಗೊಂಡ ಚಂದ್ರಶೇಖರ ರಾಮಕೃಷ್ಣ ಭಟ್ ಅವರು ಇನ್ನೂ ಕೆಲವು ದಿನಗಳವರೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಬೇಕಾಗಿದ್ದು, ಈ ಘಟನೆಗೆ ಸಂಬಂಧಪಟ್ಟಂತೆ ತಡವಾಗಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಯಗೊಂಡ ಚಂದ್ರಶೇಖರ ರಾಮಕೃಷ್ಣ ಭಟ್ ಅವರು ನಗರದ ವೆಸ್ಟ್ ಕೊಸ್ಟ್ ಕಾಗದ ಕಾರ್ಖಾನೆಯಲ್ಲಿ ಗುತ್ತಿಗೆ ಕಾರ್ಮಿಕರಾಗಿದ್ದು, ಪೂರ್ಣ ಗುಣಮುಖರಾಗಲು ಇನ್ನೂ ಕನಿಷ್ಠ ಆರು ತಿಂಗಳು ಬೇಕಾಗಬಹುದೆಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.