Morocco Quake: 2,000 ದಾಟಿದ ಮೃತರ ಸಂಖ್ಯೆ… ಸಹಾಯಕ್ಕೆ ಧಾವಿಸಿದ ನೆರೆಯ ರಾಷ್ಟ್ರಗಳು
Team Udayavani, Sep 10, 2023, 9:16 AM IST
ರಬಾತ್: ಶುಕ್ರವಾರ ತಡರಾತ್ರಿ ಮಧ್ಯ ಮೊರಾಕ್ಕೋದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 2000 ಗಡಿ ದಾಟಿದ್ದು 2,059 ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಶುಕ್ರವಾರದಂದು 6.8 ತೀವ್ರತೆಯ ಪ್ರಬಲ ಭೂಕಂಪವು ಮಧ್ಯ ಮೊರಾಕೊದಲ್ಲಿ ಮರ್ರಾಕೇಶ್‌ನ ನೈಋತ್ಯಕ್ಕೆ 72 ಕಿಲೋಮೀಟರ್ ದೂರದಲ್ಲಿ ಸಂಭವಿಸಿದ್ದು, ಘಟನೆಯಲ್ಲಿ 2,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು ಮತ್ತು 2,059 ಮಂದಿ ಗಾಯಗೊಂಡರು. ಇದು ಆರು ದಶಕದಲ್ಲೇ ಸಂಭವಿಸಿದ ಅತೀ ದೊಡ್ಡ ದುರಂತ ಎನ್ನಲಾಗಿದೆ.
ಅವಶೇಷಗಳಡಿ ಸಿಲುಕಿದವರ ರಕ್ಷಣಾ ಕಾರ್ಯ ತ್ವರಿತಗತಿಯಿಂದ ನಡೆಯುತ್ತಿದ್ದು ರಕ್ಷಣಾ ಕಾರ್ಯಕ್ಕೆ ನೆರೆಯ ದೇಶವಾದ ಅಲ್ಜೀರಿಯಾ ಸೇರಿದಂತೆ ಹೆಚ್ಚಿನ ದೇಶಗಳು ಸಹಾಯಕ್ಕೆ ಮುಂದಾಗಿವೆ ಎಂದು ಹೇಳಲಾಗಿದೆ.
ಭೂಕಂಪದ ಕೇಂದ್ರಬಿಂದುವಿನ ಸಮೀಪವಿರುವ ಪರ್ವತ ಗ್ರಾಮವಾದ ತಫೆಘಗ್ಟೆಯಲ್ಲಿ ಇದ್ದ ಎಲ್ಲಾ ಕಟ್ಟಡಗಳು ಕುಸಿದು ಬಿದ್ದಿದ್ದು ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ, ಅಲ್ಲದೆ ಘಟನೆ ಮಧ್ಯ ರಾತ್ರಿ ಸಂಭವಿಸಿದ ಕಾರಣ ಎಲ್ಲರೂ ಗಾಢ ನಿದ್ರೆಗೆ ಜಾರಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘಟನೆಗೆ ಸಂಬಂಧಿಸಿ ಅಧಿಕಾರಿಗಳು ಮೂರು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದರು, ಆದರೆ ಹಾನಿಯನ್ನು ಸರಿಪಡಿಸಲು ವರ್ಷಗಳು ತೆಗೆದುಕೊಳ್ಳಬಹುದು ಎಂದು ರೆಡ್‌ಕ್ರಾಸ್ ಎಚ್ಚರಿಸಿದೆ.
ಕರಾವಳಿ ನಗರಗಳಾದ ರಬತ್, ಕಾಸಾಬ್ಲಾಂಕಾ ಮತ್ತು ಎಸ್ಸೌಯಿರಾದಲ್ಲಿಯೂ ಸಹ ಪ್ರಬಲವಾದ ಭೂಕಂಪನ ಸಂಭವಿಸಿತ್ತು, ಭೂಕಂಪದಿಂದ ವ್ಯಾಪಕ ಹಾನಿಯುಂಟಾಗಿದ್ದು ಕೂಡಲೇ ಕಾರ್ಯಪ್ರವೃತ್ತರಾದ ತಂಡ ನಿವಾಸಿಗಳನ್ನು ಹಾಗೂ ಪ್ರವಾಸಿಗರನ್ನು ಕೂಡಲೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡುವ ಕಾರ್ಯವನ್ನು ಮಾಡಿದರು ಎನ್ನಲಾಗಿದೆ.
ಇದನ್ನೂ ಓದಿ: Delhi: ಹಿಂದೂ ಎನ್ನಲು ಹೆಮ್ಮೆಯಾಗುತ್ತಿದೆ; ಅಕ್ಷರಧಾಮ ದೇವಾಲಯಕ್ಕೆ ಭೇಟಿ ನೀಡಿದ ರಿಷಿ ದಂಪತಿ
The death toll in Morocco is currently at 1,037. If that tragic news isn't bad enough, rescuers have not yet reached the remote mountain villages that were hit the hardest during the biggest quake in 120 years:pic.twitter.com/ek8lVTEHUU
— Steve Hanke (@steve_hanke) September 9, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.