Bhatkal:ನಾರಾಯಣಗುರು ನಿಗಮಕ್ಕೆ ಅನುದಾನ ಬಿಡುಗಡೆಗೆ ಆಗ್ರಹಿಸಿ ಬೃಹತ್ ಮೆರವಣಿಗೆ
Team Udayavani, Sep 10, 2023, 7:42 PM IST
ಭಟ್ಕಳ: ನಾರಾಯಣಗುರು ನಿಗಮಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಆಗ್ರಹಿಸಿ ಇಲ್ಲಿನ ಶ್ರೀ ನಾರಾಯಣಗುರು ಜಯಂತ್ಯೋತ್ಸವ ಸಮಿತಿಯ ವತಿಯಿಂದ ಬೃಹತ್ ಮೆರವಣಿಗೆ ನಡೆಸಿ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.
ಮನವಿಯಲ್ಲಿ ಈಡಿಗ, ನಾಮಧಾರಿ, ಬಿಲ್ಲವ ಸೇರಿದಂತೆ 26 ಪಂಗಡಗಳಿರುವ ಹಿಂದುಳಿದ ವರ್ಗ 2 ಎರಲ್ಲಿ ಬರುವ ನಮ್ಮ ಸಮಾಜವು ಕರ್ನಾಟಕದಲ್ಲಿ ಅತೀ ಹೆಚ್ಚು ಜನ ಸಂಖ್ಯೆ ಹೊಂದಿದೆ. ಆರ್ಥಿಕವಾಗಿ, ಶೈಕ್ಷಣಿಕವಾಗಿ ಅತೀ ಹಿಂದುಳಿದ ನಮ್ಮ ಸಮಾಜವನ್ನು ಮುಖ್ಯ ವಾಹಿನಿಗೆ ತರಲು ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಹಲವಾರು ವರ್ಷಗಳಿಂದ ಸರಕಾರಕ್ಕೆ ಮನವಿ ಸಲ್ಲಿಸುತ್ತಾ ಬರಲಾಗಿದ್ದು ಅಧಿಕಾರಾವಧಿಯ ಕೊನೆಯಲ್ಲಿ ಈ ಹಿಂದಿನ ಬಿಜೆಪಿ ಸರಕಾರ ನಾರಾಯಣಗುರುಗಳ ಅಭಿವೃದ್ಧಿ ನಿಗಮವನ್ನು ಘೋಷಣೆ ಮಾಡಿ ಆರ್ಥಿಕ ನೆರವು ಮಂಜೂರು ಮಾಡಿಲ್ಲ.ತಾವು ಮಂಡಿಸಿದ ಬಜೆಟ್‌ನಲ್ಲಿ ನಿಗಮಕ್ಕೆ ಆರ್ಥಿಕ ನೆರವು ಘೋಷಣೆ ಮಾಡುತ್ತೀರೆನ್ನುವ ನಿರೀಕ್ಷೆಯು ಕೈಗೂಡಿಲ್ಲ. ಹಿಂದುಳಿದ ಸಮುದಾಯದ ಕುರಿತು ಅಪಾರ ಕಳಕಳಿಯನ್ನು ಹೊಂದಿರುವ ತಾವು ನಮ್ಮ ಬೇಡಿಕೆಗೆ ಸ್ಪಂಧಿಸಿ ನಾರಾಯಣಗುರು ಅಭಿವೃದ್ಧಿ ನಿಗಮವನ್ನು ಪೂರ್ಣ ಪ್ರಮಾಣದಲ್ಲಿ ರಚಿಸಿ ಕನಿಷ್ಟ ಒಂದು ಸಾವಿರ ಕೋಟಿ ಅನುದಾನವನ್ನು ಬಿಡುಗಡೆಗೊಳಿಸಬೇಕು ಎಂದು ಕೋರಲಾಗಿದೆ.
ಮನವಿಯನ್ನು ಆಸರಕೇರಿ ನಿಚ್ಚಲಮಕ್ಕಿ ದೇವಸ್ಥಾನದಿಂದ ಸಾವಿರಾರು ಜನರು ಮೆರವಣಿಗೆಯಲ್ಲಿ ಬಂದು ಇಲ್ಲಿನ ಸರ್ಕಲ್‌ನಲ್ಲಿ ಬೃಹತ್ ಸಂಖ್ಯೆಯಲ್ಲಿ ಸೇರಿ ತಹಶೀಲ್ದಾರ್ ಅವರ ಮೂಲಕ ಮುಖ್ಯ ಮಂತ್ರಿಗಳಿಗೆ ಸಲ್ಲಿಸಲಾಯಿತು. ಮನವಿಯಲ್ಲಿ ಸ್ವೀಕರಿಸಿದ ತಹಶೀಲ್ದಾರ್ ತಿಪ್ಪೇಸ್ವಾಮಿ ಅವರು ಮನವಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯ ಮಂತ್ರಿಗಳಿಗೆ ಕಳುಹಿಸುವ ಭರವಸೆಯನ್ನು ನೀಡಿದರು.
ಮೆರವಣಿಗೆಯಲ್ಲಿ ಆಸರಕೇರಿ ದೇವಸ್ಥಾನದ ಅಧ್ಯಕ್ಷ ಕೃಷ್ಣಾ ನಾಯ್ಕ ಆಸರಕೇರಿ, ಸಾರದಹೊಳೆ ದೇವಸ್ಥಾನದ ಆಧ್ಯಕ್ಷ ಸುಬ್ರಾಯ ನಾಯ್ಕ, ಧರ್ಮದರ್ಶಿ ಸುಬ್ರಾಯ ಜೆ. ನಾಯ್ಕ, ಮಂಗಳೂರಿನ ಪದ್ಮರಾಜ್ ಆರ್., ಕುಮಟಾದ ಸೂರಜ್ ನಾಯ್ಕ ಸೋನಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೃಷ್ಣಾ ನಾಯ್ಕ, ನಾರಾಯಣಗುರು ಜಯತ್ಯೋತ್ಸವ ಸಮಿತಿ ಅಧ್ಯಕ್ಷ ಮನಮೋಹನ ನಾಯ್ಕ, ಪಶ್ಚಿಮಘಟ್ಟ ಕಾರ್ಯಪಡೆಯ ಮಾಜಿ ಅಧ್ಯಕ್ಷ ಗೋವಿಂದ ನಾಯ್ಕ, ಮೆರವಣಿಗೆ ನೇತೃತ್ವ ವಹಿಸಿದ್ದ ಶ್ರೀಕಾಂತ ನಾಯ್ಕ, ಮಾಜಿ ಶಾಸಕ ಸುನಿಲ್ ನಾಯ್ಕ, ಸುರೇಶ ನಾಯ್ಕ ಮಣ್ಕುಳಿ, ಭವಾನಿಶಂಕರ ನಾಯ್ಕ, ಈರಪ್ಪ ಗರ್ಡಿಕರ್, ರವಿ ನಾಯ್ಕ ಜಾಲಿ, ಡಿ.ಎಲ್.ನಾಯ್ಕ ಹಡೀನ, ನಿವೃತ್ತ ಜಿಲ್ಲಾ ನ್ಯಾಯಾಧೀಶ ರವಿ ಎಂ.ನಾಯ್ಕ, ಗಣಪತಿ ನಾಯ್ಕ ಮುಟ್ಟಳ್ಳಿ, ಗೋಪಾಲ ನಾಯ್ಕ ಬೈಲೂರು, ಎಂ.ಜೆ.ನಾಯ್ಕ, ರಾಜೇಶ ನಾಯ್ಕ, ವಿಠಲ ನಾಯ್ಕ ಸೇರಿದಂತೆ ಸಾವಿರಾರು ಸಮಾಜ ಬಾಂಧವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Dandeli: ವಿದ್ಯುತ್ ಕಂಬದ ಜಿಓಎಸ್ ಕಳವು ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು
Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ
Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ
Dandeli; ಆತ್ಮಹ*ತ್ಯೆಗೆ ಯತ್ನಿಸಿದ ವೃದ್ಧನ ರಕ್ಷಣೆ
MUST WATCH
ಹೊಸ ಸೇರ್ಪಡೆ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.