Udupi ನಕಲಿ ಚಿನ್ನ ಅಡವಿಟ್ಟು 20 ಲಕ್ಷ ರೂ. ವಂಚನೆ; ದೂರು
Team Udayavani, Sep 10, 2023, 11:31 PM IST
ಉಡುಪಿ: ಆದರ್ಶ ಗ್ರಾಹಕರ ವಿವಿಧ್ದೋದ್ದೇಶ ಸಹಕಾರ ಸಂಘದಲ್ಲಿ ನಕಲಿ ಚಿನ್ನ ಅಡವಿಟ್ಟು ಗ್ರಾಹಕನೋರ್ವ 20.62 ರೂ. ವಂಚಿಸಿ ರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಈ ಬಗ್ಗೆ ಸಂಘದ ಕಾರ್ಯದರ್ಶಿ ಜಲೇಂದ್ರ ಕೋಟ್ಯಾನ್ ಪೊಲೀಸರಿಗೆ ದೂರು ನೀಡಿದ್ದು, ಸಂಘದ ಸದಸ್ಯ ಆಪಾದಿತ ಮಹಮ್ಮದ್ ರಿಯಾಜ್ ಹಲವು ಬಾರಿ ಚಿನ್ನ ಅಡವಿರಿಸಿ ಸಾಲ ಪಡೆದಿದ್ದರು. ಆದರೆ ಸೆ. 5ರಂದು ಕಾರಿನಲ್ಲಿ ಸೊಸೈಟಿಗೆ ತನ್ನ ಹೆಂಡತಿ ಹಾಗೂ ದಾವೂದ್ ಅಬೂಬಕ್ಕರ್‌ಎಂಬವರೊಂದಿಗೆ ಬಂದು 2 ನಕ್ಲೇಸ್ ತಂದು ಸಾಲ ಕೇಳಿದ್ದರು. ಈ ವೇಳೆ ಅನುಮಾನಗೊಂಡ ಜಲೇಂದ್ರ ಅವರು ಸಂಘದ ಸರಾಫರಾದ ಅಶೋಕ್ ಆಚಾರ್ಯ ಅವರಿಂದ ಚಿನ್ನ ಪರಿಶೀಲಿಸಿದಾಗ ಅದು ನಕಲಿ ಚಿನ್ನವೆಂದು ತಿಳಿಯಿತು.
ಈ ವೇಳೆ ಆಪಾದಿತರು ತಾವು ಬಂದ ಕಾರನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಈ ನಡುವೆ ಈ ಹಿಂದೆ ಅಡವಿರಿಸಿದ ಎಲ್ಲ ಚಿನ್ನಗಳನ್ನು ಪರಿಶೀಲಿಸಿದಾಗ ಅವುಗಳೂ ಸಹ ನಕಲಿ ಎಂದು ತಿಳಿದು ಬಂದಿದ್ದು, ಜು. 17ರಿಂದ ಸೆ. 2ರ ವರೆಗೆ ಹಂತ ಹಂತವಾಗಿ ಒಟ್ಟು 527.8 ಗ್ರಾಂ ನಕಲಿ ಚಿನ್ನವನ್ನು ಅಡವಿರಿಸಿ ಒಟ್ಟು 20,62,000 ರೂ. ಹಣವನ್ನು ಸಾಲವಾಗಿ ಪಡೆದು ಸಂಘಕ್ಕೆ ವಂಚಿಸಿರುವುದಾಗಿ ನೀಡಿದ ದೂರಿನಂತೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.