Delhi: ಇಂದು ಭಾರತ- ಸೌದಿ ಅರೇಬಿಯಾ ದ್ವಿಪಕ್ಷೀಯ ಮಾತುಕತೆ: ಒಪ್ಪಂದಗಳಿಗೆ ಸಹಿ ಸಾಧ್ಯತೆ
Team Udayavani, Sep 11, 2023, 10:28 AM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಸೌದಿ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಸೋಮವಾರ ದೆಹಲಿಯಲ್ಲಿ ಮಾತುಕತೆ ನಡೆಸಲಿದ್ದು, ಈ ಸಂದರ್ಭದಲ್ಲಿ ಇಂಧನ ಮತ್ತು ಕೃಷಿ ಸೇರಿದಂತೆ ಹಲವು ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕುವ ನಿರೀಕ್ಷೆಯಿದೆ.
ಫೆಬ್ರವರಿ 2019 ರಿಂದ ಭಾರತಕ್ಕೆ ಸೌದಿ ಕ್ರೌನ್ ಪ್ರಿನ್ಸ್ ಅವರ ಎರಡನೇ ಭೇಟಿ ಇದಾಗಿದೆ. ಅವರು G20 ಶೃಂಗಸಭೆಗಾಗಿ ಸೆಪ್ಟೆಂಬರ್ 8 ರಂದು ದೆಹಲಿಗೆ ಆಗಮಿಸಿದ್ದು ಪ್ರಧಾನಿ ಮೋದಿಯವರೊಂದಿಗಿನ ದ್ವಿಪಕ್ಷೀಯ ಮಾತುಕತೆಗಾಗಿ ತಮ್ಮ ವಾಸ್ತವ್ಯವನ್ನು ವಿಸ್ತರಿಸಿದರು.
ಐತಿಹಾಸಿಕ ರಾಷ್ಟ್ರಪತಿ ಭವನದಲ್ಲಿ ಔಪಚಾರಿಕ ಸ್ವಾಗತದೊಂದಿಗೆ ಆರಂಭಗೊಂಡು, ಆರ್ಥಿಕತೆ ಮತ್ತು ವ್ಯಾಪಾರದಿಂದ ಸಂಸ್ಕೃತಿ ಮತ್ತು ರಕ್ಷಣೆಯವರೆಗೆ ಅನೇಕ ರಂಗಗಳಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವಕುರಿತು ಉನ್ನತ ಮಟ್ಟದ ಮಾತುಕತೆಗಳು ನಡೆಯಲಿದೆ ಎನ್ನಲಾಗಿದೆ.
ಹೈದರಾಬಾದ್ ಹೌಸ್‌ನಲ್ಲಿ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದ ನಂತರ, ಸೌದಿ ಕ್ರೌನ್ ಪ್ರಿನ್ಸ್ ಅದೇ ಸ್ಥಳದಲ್ಲಿ ಮಧ್ಯಾಹ್ನ 12 ಗಂಟೆಗೆ ಭಾರತ – ಸೌದಿ ಸ್ಟ್ರಾಟೆಜಿಕ್ ಪಾಲುದಾರಿಕೆ ಮಂಡಳಿಯ ಮೊದಲ ಸಭೆಯ ನಡಾವಳಿಗಳಿಗೆ ಸಹಿ ಹಾಕುವ ನಿರೀಕ್ಷೆಯಿದೆ.
ಸ್ಟ್ರಾಟೆಜಿಕ್ ಪಾರ್ಟ್ನರ್ ಶಿಪ್ ಕೌನ್ಸಿಲ್ ನ ಅಸ್ತಿತ್ವದಲ್ಲಿರುವ ಸಹಕಾರವನ್ನು ಪರಿಶೀಲಿಸುವುದು ಮಾತ್ರವಲ್ಲದೆ ಎರಡು ಅಗತ್ಯ ಪಾಲುದಾರಿಕೆಯ ಭವಿಷ್ಯದ ಮಾರ್ಗಗಳನ್ನು ರೂಪಿಸುವ ಕಾರ್ಯವನ್ನು ಉಭಯ ನಾಯಕರು ನಿರ್ವಹಿಸುತ್ತಾರೆ.
ಇವೆಲ್ಲವನ್ನೂ ಮುಗಿಸಿದ ನಂತರ, ಸೌದಿ ಅರೇಬಿಯಾ ಪ್ರಧಾನಿಯವರು ರಾಷ್ಟ್ರಪತಿ ಭವನದಲ್ಲಿ ಸಂಜೆ 6:30 ರ ಸುಮಾರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲಿದ್ದಾರೆ. ಸಲ್ಮಾನ್ ರಾತ್ರಿ 8.30 ರ ಸುಮಾರಿಗೆ ನವದೆಹಲಿಯಿಂದ ಹೊರಡಲಿದ್ದಾರೆ.
ಭಾರತ ಮತ್ತು ಸೌದಿ ಅರೇಬಿಯಾವು ವ್ಯಾಪಕವಾದ ಜನರ ನಡುವಿನ ಸಂಬಂಧಗಳೊಂದಿಗೆ ಸೌಹಾರ್ದ ಮತ್ತು ಸಹಕಾರ ಸಂಬಂಧಗಳ ಸುದೀರ್ಘ ಇತಿಹಾಸವನ್ನು ಹೊಂದಿದೆ. ಸರ್ಕಾರದ ಅಂಕಿಅಂಶಗಳ ಪ್ರಕಾರ, ಎರಡು ದೇಶಗಳ ನಡುವಿನ ದ್ವಿಪಕ್ಷೀಯ ವ್ಯಾಪಾರವು 2022-23 ರ ಆರ್ಥಿಕ ವರ್ಷದಲ್ಲಿ ಗರಿಷ್ಠ ಮಟ್ಟ ತಲುಪಲಿದೆ ಎನ್ನಲಾಗಿದೆ.
ಇದನ್ನೂ ಓದಿ: Road Mishap: ಅಸ್ಸಾಂನಲ್ಲಿ ಭೀಕರ ಅಪಘಾತ: ಕಾರಿನಲ್ಲಿದ್ದ ಒಂದೇ ಕುಟುಂಬದ ಏಳು ಮಂದಿ ಮೃತ್ಯು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.