Ankola: ಅಂಗಡಿಗೆ ಬೆಂಕಿ: ಲಕ್ಷಾಂತರ ಮೌಲ್ಯದ ಬಟ್ಟೆಗಳು ಬೆಂಕಿಗಾಹುತಿ
Ankola: Shop fire
Team Udayavani, Sep 11, 2023, 10:34 AM IST
ಅಂಕೋಲಾ: ಅಂಗಡಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಅಂಗಡಿಯಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಬಟ್ಟೆಗಳು ಬೆಂಕಿಗಾಹುತಿಯಾದ ಘಟನೆ ಪಟ್ಟಣದ ಅಂಬಾರಕೋಡ್ಲ ರಸ್ತೆಯಲ್ಲಿ ಸೆ.10ರ ಭಾನುವಾರ ರಾತ್ರಿ ನಡೆದಿದೆ. ಅಂಬಾರಕೋಡ್ಲ ರಸ್ತೆಯಲ್ಲಿನ ಬಟ್ಟೆ ಅಂಗಡಿ ಮತ್ತು ಮೊಬೈಲ್ ಅಂಗಡಿಗಳಿಗೆ ಬೆಂಕಿ ತಗುಲಿದೆ.ಅಂಗಡಿಯಲ್ಲಿ ಬಟ್ಟೆಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಮೊಬೈಲ್ ಅಂಗಡಿಗೂ ಬೆಂಕಿ ತಗುಲಿದ್ದು ಅಷ್ಟೊತ್ತಿಗಾಗಲೇ ಅಗ್ನಿಶಾಮಕ ದಳದವರು ಬೆಂಕಿ ನಂದಿಸಿದ್ದಾರೆ. ಮೊಬೈಲ್ ಅಂಗಡಿಗೆ ಸಂಪೂರ್ಣ ನೀರು ಸುರಿಸಿದ ಕಾರಣ ವಸ್ತುಗಳೆಲ್ಲವೂ ನೀರಿಗೆ ಹಾನಿಯಾಗಿದೆ. ಗಣೇಶ ಚತುರ್ಥಿ ಹಬ್ಬದ ಕಾರಣ ಭಾನುವಾರವಷ್ಟೆ ಮಾಲಕ ಲಕ್ಷಾಂತರ ರೂ. ಮೌಲ್ಯದ ಬಟ್ಟೆಗಳನ್ನು ತಂದಿದ್ದರು ಎಂದು ತಿಳಿದು ಬಂದಿದ್ದು, ಸುಮಾರು 12 ರಿಂದ 15 ಲಕ್ಷ ರೂ. ಮೌಲ್ಯದ ಬಟ್ಟೆ ಹಾನಿಯಾಗಿದೆ ಎನ್ನಲಾಗಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…