DCM ಡಿ.ಕೆ. ಶಿವಕುಮಾರ್ ಜೈಪುರ ಪ್ರವಾಸ
Team Udayavani, Sep 11, 2023, 8:17 PM IST
ಬೆಂಗಳೂರು: ಜಲಾಶಯಗಳ ಭದ್ರತೆ ಕುರಿತು ರಾಜಸ್ಥಾನದ ಜೈಪುರದಲ್ಲಿ ಗುರುವಾರ ನಡೆಯಲಿರುವ ಅಂತಾರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣದಲ್ಲಿ ರಾಜ್ಯದ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪಾಲ್ಗೊಳ್ಳಲಿದ್ದಾರೆ.
ರಾಜ್ಯದಲ್ಲಿ ಅತಿವೃಷ್ಟಿ, ಅನಾವೃಷ್ಟಿ, ನೆರೆ ಪರಿಸ್ಥಿತಿಯ ನಿರ್ವಹಣೆ ಹಾಗೂ ಜಲಾಶಯಗಳ ಭದ್ರತೆ ಕುರಿತಂತೆ ಚರ್ಚೆಗಳು ನಡೆಯುತ್ತಲೇ ಇದ್ದು, ಮಂಗಳವಾರ ಮತ್ತು ಬುಧವಾರ ಸಿಎಂ ಸಹ ಬರಗಾಲದ ಕುರಿತಂತೆ ಡಿಸಿ, ಸಿಇಒಗಳ ಜತೆ ಸರಣಿ ಸಭೆಗಳನ್ನು ನಡೆಸಲಿದ್ದಾರೆ.
ಇದೇ ವೇಳೆಗೆ ಆಣೆಕಟ್ಟುಗಳ ಸುರಕ್ಷತೆ ಮತ್ತು ಭದ್ರತೆ ಕುರಿತಂತೆ ಅಂತಾರಾಷ್ಟ್ರೀಯ ಮಟ್ಟದ ವಿಚಾರ ಗೋಷ್ಠಿ ನಡೆಯುತ್ತಿದ್ದು, ಡಿಸಿಎಂ ಶಿವಕುಮಾರ್ ಅವರು ಬುಧವಾರ ಮಧ್ಯಾಹ್ನ ಬೆಂಗಳೂರಿನಿಂದ ಹೊರಟು ಸಂಜೆ ವೇಳೆಗೆ ರಾಜಸ್ಥಾನ ತಲುಪಲಿದ್ದಾರೆ. ಜೈಪುರದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಗುರುವಾರ ಬೆಳಗ್ಗೆ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡ ಬಳಿಕ ಜೈಪುರದಲ್ಲಿನ ಜಿಯಾವುದ್ದೀನ್ ಸಾಹೀಬ್ ದರ್ಗಾ ಹಾಗೂ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ಭೇಟಿ ಮಾಡಲಿದ್ದಾರೆ. ಸಂಜೆ ಜೈಪುರದಿಂದ ಹೊರಟು ರಾತ್ರಿ ವೇಳೆಗೆ ಬೆಂಗಳೂರಿಗೆ ವಾಪಸ್ ಬರಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ
MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ
BJP; ವಿಜಯೇಂದ್ರ ವಿರುದ್ಧ ಧ್ವನಿ ಎತ್ತಿದ್ದು ಬಿ.ಪಿ. ಹರೀಶ್ ಮಾತ್ರ!
High Court: ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ವಿಫಲ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
Kalaburagi: ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಆರೋಪಿಗೆ ಗುಂಡೇಟು