Vishwakarma ಯೋಜನೆಗೆ 70 ಸಚಿವರಿಂದ 70 ಸ್ಥಳಗಳಲ್ಲಿ ಚಾಲನೆ
Team Udayavani, Sep 11, 2023, 9:11 PM IST
ನವದೆಹಲಿ: ಅಕ್ಕಸಾಲಿಗರು, ಕಮ್ಮಾರರು, ಬಡಗಿಗಳು, ಶಿಲ್ಪಕಲಾ ಕ್ಷೇತ್ರದವರು ಸೇರಿದಂತೆ ಹಲವು ಕ್ಷೇತ್ರದ ಕರಕುಶಲಗಾರರಿಗೆ ಅನುಕೂಲ ಕಲ್ಪಿಸಲು ಘೋಷಿಸಲಾಗಿರುವ “ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ’ಗೆ ಸೆ.17ರಂದು ಚಾಲನೆ ಸಿಗಲಿದೆ.
ವಿಶ್ವಕರ್ಮ ದಿನದಂದು ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಆಗಿ ಈ ಯೋಜನೆ ಉದ್ಘಾಟಿಸಲಿದ್ದಾರೆ. ಜತೆಗೆ ದೇಶದ 70 ಪ್ರಮುಖ ಸ್ಥಳಗಳಲ್ಲಿ ಕೇಂದ್ರದ 70 ಸಚಿವರು ಯೋಜನೆಗೆ ಚಾಲನೆ ನೀಡಲಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅಹಮದಾಬಾದ್‌ನಲ್ಲಿ, ಲಕ್ನೋದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ನಾಗ್ಪುರದಲ್ಲಿ, ವಿದೇಶಾಂಗ ಸಚಿವ ಎಸ್.ಜೈಶಂಕರ್ ತಿರುವನಂತಪುರದಲ್ಲಿ ಯೋಜನೆಗೆ ಚಾಲನೆ ನೀಡಲಿದ್ದಾರೆ.
ಯೋಜನೆಯ ಬಗ್ಗೆ ಪ್ರಧಾನಿ ಮೋದಿಯವರು ಸ್ವಾತಂತ್ರ್ಯ ದಿನ ಭಾಷಣದಲ್ಲಿ ಪ್ರಸ್ತಾಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
MUST WATCH
ಹೊಸ ಸೇರ್ಪಡೆ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.