Nipah alert: ಕೇರಳದಲ್ಲಿ ಇಬ್ಬರ ಅಸಹಜ ಸಾವು: ನಿಫಾ ವೈರಸ್‌ ಶಂಕೆ

Team Udayavani, Sep 12, 2023, 8:55 AM IST

tdy-2

ತಿರುವನಂತಪುರಂ: ಕೇರಳದಲ್ಲಿ ಇಬ್ಬರ ಅಸಹಜ ಸಾವು ನಿಫಾ ವೈರಸ್‌ ಭೀತಿಯನ್ನು ಹೆಚ್ಚಿಸಿದೆ. ಜ್ವರದಿಂದ ಬಳಲುತ್ತಿದ್ದ ಇಬ್ಬರು ಸಾವನ್ನಪ್ಪಿದ್ದು, ನಿಫಾ ವೈರಸ್‌ ಕುರಿತ ಎಚ್ಚರಿಕೆಯನ್ನು ಆರೋಗ್ಯ ಇಲಾಖೆ ನೀಡಿದೆ.

ಜ್ವರದಿಂದ ಬಳಲುತ್ತಿದ್ದ ಕಾರಣ ಕೋಝಿಕ್ಕೋಡ್ ನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಸಾವನ್ನಪ್ಪಿದ್ದು, ಸಾವಿಗೆ ನಿಫಾ ವೈರಸ್‌ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಇದಲ್ಲದೇ ಮೃತರಲ್ಲಿ ಒಬ್ಬರ ಸಂಬಂಧಿಕರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ನಿಫಾ ವೈರಸ್‌ ಭೀತಿಯನ್ನು ಹೆಚ್ಚುವಂತೆ ಮಾಡಿದೆ. ಚಿಕಿತ್ಸೆ ಪಡೆಯುತ್ತಿರುವ ರೋಗಿಯ ವೈದ್ಯಕೀಯ ಪರೀಕ್ಷೆಯ ಫಲಿತಾಂಶ ಇನ್ನಷ್ಟೇ ಬರಬೇಕಿದೆ.

ಇಬ್ಬರ ಅಸಹಜ ಸಾವು ಉಂಟಾದ ಹಿನ್ನೆಲೆ ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ನೇತೃತ್ವದಲ್ಲಿ ಪರಿಸ್ಥಿತಿ ಬಗ್ಗೆ ತಿಳಿಯಲು ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಉನ್ನತಮಟ್ಟದ ಸಭೆಯನ್ನು ನಡೆಸಲಾಗಿದೆ.

ಕೇರಳದಲ್ಲಿ 2018 ಹಾಗೂ 2021 ರಲ್ಲಿ ಬಾವಲಿಗಳಿಂದ ಹರಡುವ ನಿಫಾ ವೈರಸ್‌ ಹತ್ತಾರು ಸಾವು ನೋವುಗಳಿಗೆ ಕಾರಣವಾಗಿತ್ತು. ಕೋಝಿಕ್ಕೋಡ್ ನಲ್ಲಿ ಈ ಹಿಂದೆ ಕೂಡ ನಿಫಾ ವೈರಸ್‌ ಪ್ರಕರಣಗಳು ಪತ್ತೆಯಾಗಿತ್ತು.

ಬಾವಲಿಗಳು ಕಚ್ಚಿದ ಹಣ್ಣನ್ನು ಸೇವಿಸಿದರೆ ಈ ವೈರಸ್‌ ಹರಡುತ್ತದೆ. ವ್ಯಕ್ತಿಯಿಂದ ವ್ಯಕ್ತಿಗೆ ಹಾಗೂ ಪ್ರಾಣಿಗಳಿಗೂ ವೇಗವಾಗಿ ನಿಫಾ ವೈರಸ್‌ ಹರಡುತ್ತದೆ. ಇದು ಉಸಿರಾಟದ ತೊಂದರೆ, ತಲೆನೋವು, ಸ್ನಾಯು ಸೆಳೆತದಂತಹ ಲಕ್ಷಣಗಳನ್ನು ಒಳಗೊಂಡಿರುತ್ತದೆ.

ಟಾಪ್ ನ್ಯೂಸ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

1-GGV

Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ

GDP

GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.