Heavy Rain: ಉತ್ತರ ಪ್ರದೇಶದಲ್ಲಿ ಮುಂದುವರಿದ ಮಳೆ: 24 ಗಂಟೆಗಳಲ್ಲಿ 19 ಮಂದಿ ಮೃತ್ಯು
ಶಾಲೆಗಳಿಗೆ ರಜೆ
Team Udayavani, Sep 12, 2023, 9:10 AM IST
ಉತ್ತರಪ್ರದೇಶ: ಉತ್ತರಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಕಳೆದ 24 ಗಂಟೆಗಳಲ್ಲಿ ಕನಿಷ್ಠ 19 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಭಾರಿ ಮಳೆಯ ಪರಿಣಾಮ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಭಾರಿ ಮಳೆಗೆ ರಾಜ್ಯದ ಕೆಲವೆಡೆ ಅನಾಹುತಗಳು ಸಂಭವಿಸಿದ್ದು ಮೇಲ್ಛಾವಣಿ ಕುಸಿತ, ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಪ್ರಕರಣಗಳು ವರದಿಯಾಗಿವೆ.
ಲಖನೌ ಮತ್ತು ಬಾರಾಬಂಕಿ ಸೇರಿದಂತೆ ಹಲವು ಭಾಗಗಳು ಜಲಾವೃತಗೊಂಡಿದ್ದು, ಪ್ರಯಾಣಿಕರಿಗೆ ತೊಂದರೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ ದೇಶದ ಹಲವು ಭಾಗಗಳಲ್ಲಿ ಸೆಪ್ಟೆಂಬರ್ 14 ರವರೆಗೆ ಸಾಧಾರಣದಿಂದ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.
ಭಾರಿ ಮಳೆಯ ಮುನ್ಸೂಚನೆ:
“ಒಡಿಶಾದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ; ಉತ್ತರಾಖಂಡ, ಪೂರ್ವ ಉತ್ತರ ಪ್ರದೇಶ, ಪೂರ್ವ ಮಧ್ಯಪ್ರದೇಶ, ವಿದರ್ಭ, ಛತ್ತೀಸ್‌ಗಢ, ಜಾರ್ಖಂಡ್, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ” ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಮತ್ತು ಉತ್ತರ ಪ್ರದೇಶ, ಪೂರ್ವ ರಾಜಸ್ಥಾನ, ಮಧ್ಯಪ್ರದೇಶ, ವಿದರ್ಭ, ಛತ್ತೀಸ್‌ಗಢ, ಗಂಗಾ ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್, ಒಡಿಶಾ, ಆಂಧ್ರ ಕರಾವಳಿಯ ಪ್ರತ್ಯೇಕ ಸ್ಥಳಗಳಲ್ಲಿ ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: Daniel ಚಂಡಮಾರುತ ಅಬ್ಬರಕ್ಕೆ ನಲುಗಿದ ಲಿಬಿಯಾ: 2000 ಮಂದಿ ಮೃತ್ಯು, ಸಾವಿರ ಮಂದಿ ನಾಪತ್ತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.