Gadaga: ಲೋಕ ಅದಾಲತ್‌ನಲ್ಲಿ 10 ದಂಪತಿಗಳ ಪುನರ್ಮಿಲನ
Team Udayavani, Sep 12, 2023, 1:15 PM IST
ಗದಗ: ಸರ್ವೋಚ್ಛ ನ್ಯಾಯಾಲಯ, ಕರ್ನಾಟಕ ಉಚ್ಛ ನ್ಯಾಯಾಲಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ
ಆದೇಶದನ್ವಯ ಹಮ್ಮಿಕೊಂಡಿದ್ದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಜಿಲ್ಲೆಯಲ್ಲಿ ಒಟ್ಟು 16 ಬೆಂಚ್‌ಗಳನ್ನು ರಚಿಸುವ ಮೂಲಕ 2,067 ಚಾಲ್ತಿ ಪ್ರಕರಣಗಳು ಹಾಗೂ 4,710 ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿ ಒಟ್ಟು 6777 ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ ಹೇಳಿದರು.
ನಗರದ ಜಿಲ್ಲಾ ನ್ಯಾಯಾಯದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಇತ್ಯರ್ಥಗೊಂಡ ಪ್ರಕರಣಗಳಲ್ಲಿ 10 ಮೋಟಾರು ವಾಹನ ಅಪಘಾತ ಪ್ರಕರಣಗಳು, 118 ಚೆಕ್ ಬೌನ್ಸ್ ಪ್ರಕರಣಗಳು, 33 ಕ್ರಿಮಿನಲ್ ಕಂಪೌಂಡೆಬಲ್ ಪ್ರಕರಣಗಳು, 364 ಅಸಲುದಾವೆ ಪ್ರಕರಣಗಳು, 116 ಬ್ಯಾಂಕ್ ಹಾಗೂ ಹಣ ವಸೂಲಾತಿ ಪ್ರಕರಣಗಳು, 38 ವೈವಾಹಿಕ ಪ್ರಕರಣಗಳು, 13 ವಿದ್ಯುಚ್ಚಕ್ತಿ ಪ್ರಕರಣಗಳು ಸೇರಿದಂತೆ ಒಟ್ಟು 2,067 ಚಾಲ್ತಿ ಪ್ರಕರಣಗಳನ್ನು 13,99,66,852 ರೂ. ಗಳ ಪರಿಹಾರ ಒದಗಿಸುವುದರ ಮೂಲಕ ರಾಜೀ ಸಂಧಾನ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಅದೇ ರೀತಿ ವ್ಯಾಜ್ಯಪೂರ್ವ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿವಿಧ ಬ್ಯಾಂಕ್ ಪ್ರಕರಣಗಳು, ಬಿಎಸ್‌ಎನ್‌ಎಲ್ ಕಂದಾಯ
ಅದಾಲತ್ ಪ್ರಕರಣಗಳು ಸೇರಿದಂತೆ ಒಟ್ಟು 4,710 ವ್ಯಾಜ್ಯಪೂರ್ವ ಪ್ರಕರಣಗಳನ್ನು 6,07,88,407 ರೂ.ಗಳಿಗೆ ರಾಜೀ ಸಂಧಾನ
ಮಾಡಲಾಗಿದೆ.
ವಿಶೇಷವಾಗಿ ಗದುಗಿನ ಪ್ರಧಾನ ಕೌಟುಂಬಿಕ ನ್ಯಾಯಾಲಯದಲ್ಲಿ ಹಾಗೂ ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯದಲ್ಲಿ
8 ಪ್ರಕರಣಗಳಲ್ಲಿ ದಂಪತಿಗಳನ್ನು ಪುನಃ ಒಂದುಗೂಡಿಸಿ ಹಾರ ಬದಲಾಯಿಸಿ ಅವರಿಗೆ ಸಿಹಿ ಹಂಚಿ ಕಳುಹಿಸಿಕೊಡಲಾಯಿತು.
ಅದೇ ರೀತಿ ರೋಣದಲ್ಲಿ 1 ಜೋಡಿ, ಲಕ್ಷ್ಮೇಶ್ವರದಲ್ಲಿ 1 ಜೋಡಿ ದಂಪತಿಗಳನ್ನು ಪುನಃ ಒಂದುಗೂಡಿಸಲಾಯಿತು. ಒಟ್ಟು 10 ದಂಪತಿಗಳು ರಾಷ್ಟ್ರೀಯ ಲೋಕ ಅದಾಲತ್‌ದಲ್ಲಿ ಪುನಃ ಒಂದು ಗೂಡಿಸಿದ್ದು ವಿಶೇಷವಾಗಿದೆ ಎಂದು ತಿಳಿಸಿದ್ದಾರೆ.
ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಜೇಶ್ವರ ಶೆಟ್ಟಿ, 1ನೇ ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ಖಾದರಸಾಬ್ ಬೆನಕಟ್ಟಿ, ಪ್ರಧಾನ ಹಿರಿಯ ನ್ಯಾಯಾಧೀಶೆ ಸಿಜೆಎಂ ಪ್ರೀತಿ ಸದ್ಗುರು ಸದ್ಯ ಜೋಶಿ, ಅಪರ ಹಿರಿಯ ದಿವಾಣಿ ನ್ಯಾಯಾಧೀಶ ಪ್ರಕಾಶ ಕುರುಬೆಟ್, ಪ್ರಧಾನ ದಿವಾಣಿ ನ್ಯಾಯಾಧೀಶ ಅರುಣ ಚೌಗಲೆ, ಜೆಎಂಎಫ್‌ಸಿ 1ನೇ ನ್ಯಾಯಾಲಯದ ನ್ಯಾಯಾಧೀಶೆ ಪುಷ್ಪಾ ಜೋಗೋಜಿ, ಜೆಎಂಎಫ್‌ಸಿ 2ನೇ ನ್ಯಾಯಾಲಯದ
ನ್ಯಾಯಾಧೀಶ ಬೀರಪ್ಪ ಕಾಂಬಳೆ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಂ.ಐ. ಹಿರೇಮನಿಪಾಟೀಲ, ಉಪಾಧ್ಯಕ್ಷ ಎ.ಎಂ.
ಹದ್ಲಿ, ಪ್ರಧಾನ ಕಾರ್ಯದರ್ಶಿ ಬಿ.ಎಚ್. ಮಾಡಲಗೇರಿ, ಜಂಟಿ ಕಾರ್ಯದರ್ಶಿ ಪಿ.ಬಿ. ಕಣಗಿನಹಾಳ, ಖಜಾಂಚಿ ವಿ.ಎಚ್.
ಮೇರವಾಡೆ, ಸರ್ಕಾರಿ ಅಭಿಯೋಜಕಿ ಸವಿತಾ ಶಿಗ್ಲಿ, ಜಿಲ್ಲಾ ಸರ್ಕಾರಿ ವಕೀಲರಾದ ಬಿ.ಟಿ. ಪಾಟೀಲ, ಅಪರ ಜಿಲ್ಲಾ ಸರ್ಕಾರಿ ವಕೀಲ ಕೆ.ಎಸ್. ಹೂಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.