Server Problem: ಸರ್ವರ್‌ ಕಿರಿಕಿರಿ: ತಿದ್ದುಪಡಿಗೆ 800 ಅರ್ಜಿ ಸಲ್ಲಿಕೆ

Team Udayavani, Sep 13, 2023, 1:57 PM IST

tdy-13

ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರ ಪಡಿತರ ಚೀಟಿಗಳ ತಿದ್ದಿಪಡಿ ಹಾಗೂ ಸೇರ್ಪಡೆಗೆ ಅವಕಾಶ ನೀಡಿದರೂ, ಸರ್ವರ್‌ ಸಮಸ್ಯೆಯಿಂದ ಜಿಲ್ಲೆಯಲ್ಲಿ ಎರಡು ದಿನದಲ್ಲಿ ಕೇವಲ 800 ಅರ್ಜಿ ಮಾತ್ರ ಸಲ್ಲಿಕೆ ಆಗಿದ್ದು ಸಾವಿರಾರು ಮಂದಿಗೆ ತಿದ್ದುಪಡಿ ಹಾಗೂ ಸೇರ್ಪಡೆಗೆ ಅವಕಾಶ ಗ್ಯಾರಂಟಿ ಯೋಜನೆಗಳು ಕೈ ತಪ್ಪುವ ಆತಂಕ ಎದುರಾಗಿದೆ.

ಹೌದು, ರಾಜ್ಯ ಸರ್ಕಾರ ಮಹತ್ವಕಾಂಕ್ಷಿ ಗೃಹಲಕ್ಷ್ಮೀ ಯೋಜನೆಗೆ ಪಡಿತರ ಚೀಟಿಯಲ್ಲಿ ಯಾಜಮಾನಿ ಎಂದು ನಮೂದಾಗಿರುವರನ್ನು ಮಾತ್ರ ಪರಿಗಣಿಸಿ ಅರ್ಜಿ ಸ್ಪೀಕರಿಸಿದ್ದು, ಇದರಿಂದ ಜಿಲ್ಲೆಯಲ್ಲಿ ಸಾವಿರಾರು ಮಂದಿ ಮಹಿಳೆಯರು ಗೃಹಲಕ್ಷ್ಮಿಯಿಂದ ವಂಚಿತರಾಗಿದ್ದಾರೆ. ಆದರೆ, ಸರ್ಕಾರ ಪಡಿತರ ಚೀಟಿ ತಿದ್ದುಪಡಿ ಹಾಗೂ ಕುಟುಂಬಸ್ಥರ ಹೆಚ್ಚುವರಿ ಸೇರ್ಪಡೆಗೆ ಅವಕಾಶ ಕಲ್ಪಿಸಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿಕೆ ಅವಕಾಶ ಕಲ್ಪಿಸಿದರೂ, ಅರ್ಜಿ ಸ್ಪೀಕಾರ ಆರಂಭಗೊಂಡ ದಿನದಿಂದಲೂ ಕೂಡ ತಾಂತ್ರಾಂಶದ ಸರ್ವರ್‌ ಕಿರಿಕಿರಿಯ ಪರಿಣಾಮ ಸೈಬರ್‌ ಕೇಂದ್ರಗಳಲ್ಲಿ ಸಾರ್ವಜನಿಕರು ಪಡಿತರ ಚೀಟಿ ತಿದ್ದುಪಡಿ ಹಾಗೂ ಸೇರ್ಪಡೆಗೆ ಅವಕಾಶ ಸಿಗದೇ ತೀವ್ರ ಸಮಸ್ಯೆ ಎದುರಾಗಿದೆ. ಜಿಲ್ಲೆಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ನೀಡಿದ್ದ ಗಡವು ಸೆ.8ಕ್ಕೆ ಕೊನೆಗೊಂಡಿದೆ. ಕೇವಲ ಎರಡು ದಿನದಲ್ಲಿ ಮಾತ್ರ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆಗೆ ಸರ್ಕಾರ ಅವಕಾಶ ನೀಡಿತ್ತು.

ಗುಡಿಬಂಡೆಯಲ್ಲಿ ಬರೀ 8 ಅರ್ಜಿ ಸಲ್ಲಿಕೆ: ಆನ್‌ ಲೈನ್‌ ತಿದ್ದುಪಡಿಗೆ ಸರ್ವರ್‌ ಸಮಸ್ಯೆ ಬಹುವಾಗಿ ಕಾಡಿದ ಪರಿಣಾಮ ಜಿಲ್ಲೆಯ ಗುಡಿಬಂಡೆ ತಾಲೂಕಿನಲ್ಲಿ ಬರೀ 8 ಅರ್ಜಿ ಸಲ್ಲಿಕೆ ಆಗಿದೆ. ನೂರಾರು ಫ‌ಲಾನುವಿಗಳು ಗಂಟೆಗಟ್ಟಲೇ ಸೈಬರ್‌ ಕೇಂದ್ರಗಳ ಮುಂದೆ ತಿದ್ದುಪಡಿ ಹಾಗೂ ಕುಟುಂಬಸ್ಥರ ಹೆಸರು ಸೇರ್ಪಡೆಗೆ ಕಾದು ಕೊನೆಗೂ ಸಾಧ್ಯವಾಗದೇ ವಾಪಸ್‌ ಹೋಗಿದ್ದಾರೆ. ಇದೇ ರೀತಿಯ ಪರಿಸ್ಥಿತಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕಂಡು ಬಂದಿದೆ.

ಜಿಲ್ಲೆಯಲ್ಲಿ ಗ್ಯಾರಂಟಿ ಸೌಲಭ್ಯಗಳು ಮರೀಚಿಕೆ: ಜಿಲ್ಲೆಯಲ್ಲಿ ಪಡಿತರ ಚೀಟಿಗೆ ಸೇರ್ಪಡೆ ಹಾಗೂ ತಿದ್ದುಪಡಿಗೆ ಸಾಕಷ್ಟು ಮಂದಿ ಹಲವು ದಿನಗಳಿಂದ ಚಾತಕ ಪಕ್ಷಿಗಳಂತೆ ಎದುರು ನೋಡುತ್ತಿದ್ದರು. ಆದರೆ ಸರ್ಕಾರ ಪಡಿತರ ಚೀಟಿಯಲ್ಲಿನ ಮಾಹಿತಿ ತಿದ್ದುಪಡಿ ಹಾಗೂ ಹೆಚ್ಚುವರಿ ಕುಟುಂಬದ ಸದಸ್ಯರ ಸೇರ್ಪಡೆಗೆ ಅವಕಾಶ ಕಲ್ಪಿಸಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಿದರೂ ಜಿಲ್ಲೆಯಲ್ಲಿ ಸರ್ವರ್‌ ಸಮಸ್ಯೆಯಿಂದ ಇನ್ನೂ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ ಸಿಗದೇ ಸರ್ಕಾರದ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಗಳಿಂದ ವಂಚಿತರಾಗುವಂತಾಗಿದೆ.

ಜಿಲ್ಲೆಯಲ್ಲಿ ಪಡಿತರ ಚೀಟಿ ತಿದ್ದುಪಡಿ ಹಾಗೂ ಹೆಸರು ಸೇರ್ಪಡೆಗೆ ಸೆ.6 ರಿಂದ ಸೆ.8ರ ವರೆಗೂ ಒಟ್ಟು 800 ಅರ್ಜಿಗಳು ಜಿಲ್ಲಾದ್ಯಂತ ಸಲ್ಲಿಕೆಯಾಗಿವೆ. ಜಿಲ್ಲೆಗೆ ಎರಡನೇ ಹಂತದಲ್ಲಿ ಅನ್‌ಲೈನ್‌ ಅರ್ಜಿ ಸಲ್ಲಿಕೆಗೆ ಅವಕಾಶ ಸಿಗಬಹುದು. -ಸವಿತಾ, ಉಪ ನಿರ್ದೇಶಕರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ

-ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.