Gadaga: ಹಬ್ಬಕ್ಕೆ ಸಿದ್ಧಗೊಳ್ಳುತ್ತಿದೆ ಆಕರ್ಷಕ ಗಣೇಶ ಮೂರ್ತಿ


Team Udayavani, Sep 13, 2023, 4:30 PM IST

Gadaga: ಹಬ್ಬಕ್ಕೆ ಸಿದ್ಧಗೊಳ್ಳುತ್ತಿದೆ ಆಕರ್ಷಕ ಗಣೇಶ ಮೂರ್ತಿ

ಗದಗ: ಗಣೇಶ ಚತುರ್ಥಿಗೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಗಣೇಶ ಮೂರ್ತಿ ತಯಾರಕರು ಈಗಾಗಲೇ ಕೆಲವು ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆಗೆ ಸಿದ್ಧಗೊಳಿಸಿದ್ದರೆ, ಇನ್ನೂ ಕೆಲವು ಗಣೇಶನ ಮೂರ್ತಿಗಳಿಗೆ ಅಂತಿಮ ರೂಪ ನೀಡುವಲ್ಲಿ ನಿರತರಾಗಿದ್ದಾರೆ.

ಜಿಲ್ಲೆಯ ಹಲವಾರು ಸಂಘಟನೆಗಳು ಪಿಓಪಿ ಗಣೇಶ ಮೂರ್ತಿಗಳ ಮಾರಾಟ, ತಯಾರಿಕೆಗೆ ನಿಷೇಧ ಹೇರುವಂತೆ ಸರ್ಕಾರ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದರಿಂದ ಜಿಲ್ಲೆಯಲ್ಲಿ ಸಂಪೂರ್ಣವಾಗಿ ಪಿಓಪಿ ಗಣೇಶ ಮೂರ್ತಿಗಳನ್ನು ನಿಷೇಧಿಸಲಾಗಿದೆ. ಇದರಿಂದ ಮಣ್ಣಿನ ಗಣೇಶ ಮೂರ್ತಿಗಳಿಗೆ ಎಲ್ಲಿಲ್ಲದ ಬೇಡಿಕೆ  ಬಂದಿದೆ. ತಿಂಗಳುಗಳ ಮುಂಚೆಯೇ ಗಣೇಶನ  ಮೂರ್ತಿಗಳು ಬುಕ್‌ ಆಗಿವೆ. ಕಳೆದ ಬಾರಿಗಿಂತ ಗಣೇಶನ ಮೂರ್ತಿ ಕೊಂಡುಕೊಳ್ಳುವವರಿಗೆ ಬೆಲೆ ಕೊಂಚ ದುಬಾರಿಯಾಗಿದೆ.

ಗದಗ-ಬೆಟಗೇರಿ ನಗರದಲ್ಲಿ ತಲೆಮಾರಿನಿಂದ ಗಣೇಶ ಮೂರ್ತಿ ತಯಾರಿಕೆಯಲ್ಲಿ ತೊಡಗಿರುವ ಚಕ್ರಸಾಲಿ, ಚಿತ್ರಗಾರ, ಕುಂಬಾರ ಹಾಗೂ ಇತರೆ ಕಲಾವಿದ ಕುಟುಂಬದವರು ಡಿಸೆಂಬರ್‌ ಹಾಗೂ ಯುಗಾದಿ ಹಬ್ಬದಿಂದಲೇ ಗಣೇಶನ ಮೂರ್ತಿ ತಯಾರಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಗಣೇಶನ ಮೂರ್ತಿಗಳ ಮಾರಾಟ ಪ್ರಕ್ರಿಯೆ ಚುರುಕುಗೊಂಡಿದ್ದು, ಗ್ರಾಹಕರು ಗಣೇಶನ ಮೂರ್ತಿಯನ್ನು ಗುರುತಿಸಿ ಬುಕ್‌ ಮಾಡುತ್ತಿದ್ದಾರೆ.

ವಿವಿಧ ರೀತಿಯ ಗಣಪತಿ ತಯಾರಿಕೆ: ತಲೆಮಾರಿನಿಂದ ಗಣೇಶನ ಮೂರ್ತಿ ತಯಾರಿಕೆಯಲ್ಲಿ ತೊಡಗಿದ ಕುಟುಂಬಗಳು
ಯುಗಾದಿ ಹಬ್ಬದಿಂದಲೇ ಗಣೇಶ ಮೂರ್ತಿ ತಯಾರಿಕೆಗೆ ಸಜ್ಜುಗೊಂಡು, ಜಿಗಿ ಜೇಡಿ ಮಣ್ಣಿನಿಂದ ಗಣೇಶನ ಮೂರ್ತಿ ತಯಾರಿಸುತ್ತಾರೆ. ಸಿಂಹಾಸನ ಗಣಪತಿ, ಬಲಮುರಿ ಗಣಪತಿ, ನಾಗರಹಾವು, ಇಲಿ, ತ್ರಿಶೂಲ, ಕಮಲ, ಕೈ ಹಾಗೂ ಡಮರುಗ
ಮೇಲೆ ಕುಳಿತ ಗಣಪತಿ, ನಿಂತ ಗಣಪತಿ, ಕೊಪ್ಪಳ ಗವಿಸಿದ್ಧೇಶ್ವರ ಸ್ವಾಮೀಜಿ, ಶ್ರೀಕೃಷ್ಣ, ಬಸವಣ್ಣನ ತಲೆ ಮೇಲೆ ಗಣೇಶ ಹಾಗೂ ವಿಶೇಷವಾಗಿ ಪುನೀತರಾಜ್‌ ಕುಮಾರ ಜೊತೆಗೆ ಗಣೇಶ ಮೂರ್ತಿ ಹೀಗೆ ವಿಶಿಷ್ಟ ರೀತಿಯ ಗಣಪತಿಗಳು ಸಿದ್ಧವಾಗಿವೆ.

ಮಣ್ಣಿನ ಗಣಪತಿ ಮೂರ್ತಿಗಳ ಬೆಲೆ ಏರಿಕೆ: ಗಣೇಶ ಮೂರ್ತಿಗಳ ತಯಾರಿಕೆಗೆ ಬೇಕಾಗುವ ಮಣ್ಣು ಹಾಗೂ ಅಲಂಕಾರಕ್ಕೆ ಬಳಸಲಾಗುವ ಬಣ್ಣದ ದರ ಏರಿಕೆಯ ಪರಿಣಾಮ ಗಣೇಶನ ಮೂರ್ತಿಗಳ ಬೆಲೆಯಲ್ಲೂ ಏರಿಕೆ ಕಂಡಿದೆ. ಸಾರ್ವಜನಿಕರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ಕಳೆದ ಬಾರಿ 320ರಿಂದ 350 ರೂ. ಗೆ ಮಾರಾಟವಾಗುತ್ತಿದ್ದ ಗಣೇಶನ ಮೂರ್ತಿಗಳ ಬೆಲೆ ದುಪ್ಪಟ್ಟಾಗಿದೆ. 500 ರೂ.ನಿಂದ ಆರಂಭವಾಗುವ ಗಣೇಶ ಮೂರ್ತಿಗಳು 14,000 ರೂ. ವರೆಗೆ ಬೆಲೆ ನಿಗದಿಯಾಗಿವೆ.

ಮಣ್ಣಿನ ಅಭಾವ-ದುಬಾರಿ: ತಾತ, ಮುತ್ತಜ್ಜನ ಕಾಲದಿಂದೂ ಗಣೇಶ ಮೂರ್ತಿ ತಯಾರಿಕೆಯಲ್ಲಿ ತೊಡಗಿಕೊಂಡ ಚಕ್ರಸಾಳಿ ಕುಟುಂಬ ಈ ಮೊದಲು ಗಣೇಶನ ಮೂರ್ತಿ ತಯಾರಿಕೆಗೆ ಬೇಕಾಗುವ ಮಣ್ಣನ್ನು ಹುಬ್ಬಳ್ಳಿ, ಚನ್ನಾಪುರ, ಅಂಚಟಗೇರಿ ಚವಡಗುಡ್ಡ, ಬೆಂಡಿಗೇರಿ ಭಾಗದಲ್ಲಿ ಖರೀದಿಸುತ್ತಿದ್ದರು. ಸದ್ಯ ಒಂದು ಟ್ರಾಕ್ಟರ್‌ ಜೇಡಿ ಮಣ್ಣಿನ ಬೆಲೆ 10,000 ರೂ. ಆಗಿದ್ದರಿಂದ ಬೆಳಗಾವಿ ಜಿಲ್ಲೆ ಗೋಕಾಕ್‌ ಭಾಗದಿಂದ 1 ಟನ್‌ ಜೇಡಿ ಮಣ್ಣಿಗೆ 6500 ರೂ. ನೀಡಿ ಖರೀದಿಸಿದ್ದಾರೆ. ಬಣ್ಣದ ಬೆಲೆ ದುಬಾರಿಯಾಗಿದೆ. ಜೊತೆಗೆ ಸಾಗಾಣಿಕೆ ವೆಚ್ಚ ದುಪ್ಪಟ್ಟಾಗಿರುವುದರಿಂದ ಗಣೇಶನ ಮೂರ್ತಿಗಳ ಬೆಲೆಯಲ್ಲಿ ವ್ಯತ್ಯಾಸವಾಗಿದೆ ಎನ್ನುತ್ತಾರೆ ಗಣೇಶ
ಮೂರ್ತಿ ತಯಾರಕ ಬಸವರಾಜ ಶಿವಪ್ಪ ಚಕ್ರಸಾಲಿ.

ಸರ್ಕಾರಿ ಸೌಲಭ್ಯಕ್ಕಾಗಿ ಮನವಿ: ಪೂರ್ವಿಕರ ಕಾಲದಿಂದಲೂ ಗಣೇಶ ಮೂರ್ತಿ ತಯಾರಿಕೆಯಲ್ಲಿ ತೊಡಗಿಕೊಂಡಿರುವ ಕುಟುಂಬ ಇದುವರೆಗೆ ಬಾಡಿಗೆ ಮನೆಯಲ್ಲೇ ವಾಸಿಸುತ್ತಿದ್ದೇವೆ. ಇದುವರೆಗೆ ಸರಕಾರದಿಂದ ಯಾವುದೇ ಸೌಲಭ್ಯ ದೊರೆತಿಲ್ಲ. ಮಕ್ಕಳ ವಿದ್ಯಾಭ್ಯಾಸಕ್ಕೂ ಸಂಕಷ್ಟ ಎದುರಾಗಿದೆ. ಕಲಾವಿದರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರಕಾರ ಹಾಗೂ ಜಿಲ್ಲಾಡಳಿತ ವಿಶೇಷ ಸೌಲಭ್ಯ ಒದಗಿಸಬೇಕೆಂದು ಚಕ್ರಸಾಳಿ ಕುಟುಂಬ ಒತ್ತಾಯಿಸಿದೆ.

ನಮ್ಮ ಕುಟುಂಬ ಕಳೆದ ನವೆಂಬರ್‌ ತಿಂಗಳಿನಿಂದ ಗಣೇಶ ಮೂರ್ತಿ ತಯಾರಿಕೆಯಲ್ಲಿ ತೊಡಗಿಕೊಳ್ಳುತ್ತದೆ. 8 ಇಂಚಿನ ಗಣೇಶ
ಮೂರ್ತಿಯಿಂದ 5 ಅಡಿ ಎತ್ತರದ ಗಣೇಶನನ್ನು ತಯಾರಿಸಲಾಗುತ್ತದೆ. ಗಣೇಶ ಚತುರ್ಥಿಗೆ ಸುಮಾರು 700, 800 ಗಣೇಶ ಮೂರ್ತಿಗಳನ್ನು ಸಿದ್ಧಪಡಿಸಲಾಗುತ್ತದೆ.
ಬಸವರಾಜ ಚಕ್ರಸಾಲಿ, ಗಣೇಶ ಮೂರ್ತಿ ತಯಾರಕರು, ಗದಗ

*ಅರುಣಕುಮಾರ ಹಿರೇಮಠ

ಟಾಪ್ ನ್ಯೂಸ್

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ಮಾನವ ಸರಪಳಿ ವೇಳೆ ಶಿಕ್ಷಕಿಯರ ಮೇಲೆ ಹೆಜ್ಜೇನು ದಾಳಿ

Gadag; ಮಾನವ ಸರಪಳಿ ವೇಳೆ ಶಿಕ್ಷಕಿಯರ ಮೇಲೆ ಹೆಜ್ಜೇನು ದಾಳಿ

7-mundaragi

ಜನರಿಗೆ ಪ್ರಜಾಪ್ರಭುತ್ವ ಅರಿವು ಮೂಡಿಸಿ, ಬಲ ತುಂಬುವ ಕಾರ್ಯಕ್ರಮ ಪ್ರಜಾಪ್ರಭುತ್ವ ದಿನಾಚರಣೆ

Sudden rise in cooking oil prices

Price Hike; ಅಡುಗೆ ಎಣ್ಣೆ ದರ ದಿಢೀರ್ ಏರಿಕೆ: ಹಬ್ಬದ ಸಂಭ್ರಮದಲ್ಲಿರುವ ಜನತೆಗೆ ಶಾಕ್

ಗದಗ: ಅತಿವೃಷ್ಟಿಯಿಂದ ಬತ್ತಿದ ಕೆರೆಗಳಿಗೆ ಆಸರೆಯಾದ ತುಂಗಭದ್ರೆ!

ಗದಗ: ಅತಿವೃಷ್ಟಿಯಿಂದ ಬತ್ತಿದ ಕೆರೆಗಳಿಗೆ ಆಸರೆಯಾದ ತುಂಗಭದ್ರೆ!

Gadaga: ಸಿಎಂ ಸ್ಥಾನ ಖಾಲಿ ಇಲ್ಲ, ಖಾಲಿಯಾಗುವ ಪ್ರಶ್ನೆಯೂ ಇಲ್ಲ: ಸಚಿವ ಎಚ್‌.ಕೆ.ಪಾಟೀಲ

Gadaga: ಸಿಎಂ ಸ್ಥಾನ ಖಾಲಿ ಇಲ್ಲ, ಖಾಲಿಯಾಗುವ ಪ್ರಶ್ನೆಯೂ ಇಲ್ಲ: ಸಚಿವ ಎಚ್‌.ಕೆ.ಪಾಟೀಲ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.