Constitution: ನಾಳೆ ಸಂವಿಧಾನ ಓದು ಕಾರ್ಯಕ್ರಮ
Team Udayavani, Sep 14, 2023, 12:52 AM IST
ಬೆಂಗಳೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವಾದ ಸೆ. 15ರಂದು ವಿಧಾನಸೌಧದ ಮುಂಭಾಗದಲ್ಲಿರುವ ಮೆಟ್ಟಿಲುಗಳ ಮೇಲೆ ಸಂವಿಧಾನದ ಓದು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ| ಎಚ್.ಸಿ. ಮಹದೇವಪ್ಪ ಹೇಳಿದರು.
ಶುಕ್ರವಾರ ಬೆಳಗ್ಗೆ 10 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಇದೇ ಸಂದರ್ಭ ಸಂವಿಧಾನ ಪೀಠಿಕೆಯ ಬೋಧನೆ ಮತ್ತು ವಾಚನ ನಡೆಯಲಿದೆ ಎಂದರು. ಸಂವಿಧಾನ ಓದು ಕಾರ್ಯಕ್ರಮಕ್ಕಾಗಿ ಪ್ರಪಂಚದಾದ್ಯಂತ 2,27,81,894 ಜನ ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಂಡಿದ್ದಾರೆ. ಎಲ್ಲರೂ ಅವರವರಿರುವ ಜಾಗದಿಂದಲೇ ಸಂವಿಧಾನದ ಪೀಠಿಕೆ ಓದುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಾರೆ ಎಂದು ಅವರು ಹೇಳಿದರು.
ಹಿಂದಿನ ಸರಕಾರ ಶಾಲೆಗಳಲ್ಲಿ ಸಂವಿಧಾನದ ಪೀಠಿಕೆ ಓದಬೇಕೆಂದು ಆದೇಶ ಮಾಡಿತ್ತು. ಕೇವಲ ಆದೇಶ ಮಾಡಿದರೆ ಸಾಲದು, ನಾವು ಅದನ್ನು ಕಡ್ಡಾಯಗೊಳಿಸಿದ್ದೇವೆ. ವ್ಯಾಪಕ ಆಂದೋಲನ ಮಾಡುತ್ತೇವೆ. ಸಿಎಂ ಕಚೇರಿಯಿಂದ ಹಿಡಿದು ಶಾಲೆ, ಕಾಲೇಜು, ಸರಕಾರಿ ಕಚೇರಿಗಳೆಲ್ಲೆ ಡೆ ಕಡ್ಡಾಯವಾಗಿ ಸಂವಿಧಾನದ ಪೀಠಿಕೆ ಓದಬೇಕು ಎಂದು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್
Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!
Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ
MUST WATCH
ಹೊಸ ಸೇರ್ಪಡೆ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Belagavi Session: ಬರಾಕ್ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.