Koppal: ಕಾಲಮಿತಿಯಲ್ಲಿ ಸಕಾಲ ಅರ್ಜಿ ವಿಲೇವಾರಿ ಆಗಲಿ
ಸಮಸ್ಯೆ ಕಂಡುಬಂದಲ್ಲಿ ಯೋಜನೆ ತಾಂತ್ರಿಕ ಸಿಬ್ಬಂದಿ ಸಹಾಯದಿಂದ ಸರಿಪಡಿಸಿಕೊಳ್ಳಬೇಕು.
Team Udayavani, Sep 16, 2023, 11:32 AM IST
ಕೊಪ್ಪಳ: ಕಾಲಮಿತಿಯಲ್ಲಿ ಸಕಾಲ ಅರ್ಜಿಗಳು ವಿಲೇವಾರಿಯಾಗಲು ಅ ಧಿಕಾರಿಗಳು ನಿಗಾವಹಿಸಿ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಸಕಾಲ ಸೇವೆಗಳ ಅ ಧಿನಿಯಮ 2011ರ ಸಮರ್ಪಕ ಅನುಷ್ಠಾನ ಮತ್ತು ಐಪಿಜಿಆರ್‌ಎಸ್ ಪ್ರಗತಿ ಕುರಿತಂತೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಸಕಾಲ ಮತ್ತು ಐಪಿಜಿಆರ್‌ಎಸ್ ಯೋಜನೆಯಡಿ ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆ ನೀಡುವ ಜತೆಗೆ ಕಾಲಮಿತಿಯಲ್ಲಿ ಅರ್ಜಿಗಳ ವಿಲೇಗೆ ಕ್ರಮ ಕೈಗೊಳ್ಳಬೇಕು. ಸಕಾಲ ಹಾಗೂ ಐಪಿಜಿಆರ್‌ಎಸ್ ಯೋಜನೆಯಡಿ ವಿವಿಧ ಇಲಾಖೆಗಳಲ್ಲಿ ಬಾಕಿ ಇರುವ ಅರ್ಜಿ ಕಾಲಮಿತಿಯೊಳಗೆ ವಿಲೇವಾರಿ ಮಾಡಬೇಕು.
ನಿಯಮ ಸರಿಯಾಗಿ ಪಾಲಿಸಬೇಕು. ನಾಗರಿಕರಿಗೆ ಕಾಲಾವ ಧಿಯೊಳಗೆ ಸೇವೆ ನೀಡುವ ನಿಟ್ಟಿನಲ್ಲಿ ಈ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಅ ಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ಅನಗತ್ಯವಾಗಿ ಅರ್ಜಿ ತಿರಸ್ಕೃತ ಮಾಡಬಾರದು ಎಂದರು.
ಅಪೂರ್ಣ ಅರ್ಜಿ ತಿರಸ್ಕರಿಸಲೂ ಮೂರ್‍ನಾಲ್ಕು ವಿಧಗಳಿವೆ. ಅವುಗಳ ಆಧಾರದಲ್ಲಿ ಸ್ಪಷ್ಟ ಕಾರಣ ನೀಡಿ ಅರ್ಜಿ ತಿರಸ್ಕರಿಸಬಹುದು. ಪ್ರತಿ ದಿನವೂ ಅರ್ಜಿಗಳ ವಿಲೇವಾರಿಗೆ ಅಧಿಕಾರಿಗಳು ಒತ್ತು ನೀಡಬೇಕು. ಈ ಬಗ್ಗೆ ಯಾವುದೇ ತಾಂತ್ರಿಕ ಸಮಸ್ಯೆ ಕಂಡುಬಂದಲ್ಲಿ ಯೋಜನೆ ತಾಂತ್ರಿಕ ಸಿಬ್ಬಂದಿ ಸಹಾಯದಿಂದ ಸರಿಪಡಿಸಿಕೊಳ್ಳಬೇಕು.
ವಿಲೇವಾರಿ ಮಾಡದೇ ಹಾಗೂ ಅನಗತ್ಯ ವಿಳಂಬ ಮಾಡಿ ನಿರ್ಲಕ್ಷ್ಯ ತೋರುವ ಅ ಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.
ಎಸ್ಸಿಪಿ-ಟಿಎಸ್ಪಿ ಪ್ರಗತಿ ಪರಿಶೀಲನೆ: 2023-24ನೇ ಸಾಲಿನ ಆಗಸ್ಟ್-2023 ಅಂತ್ಯದವರೆಗಿನ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ ಪ್ರಗತಿ ಬಗ್ಗೆಯೂ ಡಿಸಿ ಪ್ರಗತಿ ಪರಿಶೀಲಿಸಿದರು. ಎಸ್ಸಿಪಿ-ಟಿಎಸ್ಪಿ ಯೋಜನೆಯ ಮೂಲ ಧ್ಯೇಯ ಮತ್ತು ಮಾನದಂಡಗಳಿಗೆ ಅನುಸಾರವಾಗಿ ಇಲಾಖೆಗಳು ಕಾರ್ಯ ನಿರ್ವಹಿಸಬೇಕು. ಈ ಯೋಜನೆ ಜಾಗರೂಕತೆಯಿಂದ ನಿರ್ವಹಿಸಬೇಕು. ಯೋಜನೆಯಡಿ ಬಿಡುಗಡೆಯಾದ ಅನುದಾನ ಯಾವ ಉದ್ದೇಶಕ್ಕೆ ಬಳಸಲಾಗಿದೆ?, ಯಾವ ಪ್ರದೇಶದಲ್ಲಿ ಕಾಮಗಾರಿ ಮಾಡಲಾಗಿದೆ ಎನ್ನುವ ಮಾಹಿತಿ ನೀಡಬೇಕು. ಅಲ್ಲದೇ ಇಲಾಖೆಗಳಿಗೆ ನಿಗದಿಪಡಿಸಿದ ಗುರಿ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ, ಎಡಿಸಿ ಸಾವಿತ್ರಿ ಕಡಿ, ಎಸಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಕಾವ್ಯರಾಣಿ, ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಕೃಷ್ಣ ಉಕ್ಕುಂದ, ಪ್ರಾದೇಶಿಕ ಸಾರಿಗೆ ಅಧಿಕಾರಿ ಎಲ್.ಬಿ.ನಾಲವರ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಚಿದಾನಂದ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.