2024 Elections: ಬಿಹಾರದ ಎಲ್ಲಾ 40 ಲೋಕಸಭಾ ಸ್ಥಾನಗಳನ್ನು ಎನ್‌ಡಿಎ ಗೆಲ್ಲಲಿದೆ: ಅಮಿತ್ ಶಾ
2024ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೇ ಪ್ರಧಾನಿಯಾಗಲಿದ್ದಾರೆ
Team Udayavani, Sep 16, 2023, 7:24 PM IST
ಮಧುಬನಿ, (ಬಿಹಾರ): 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಹಾರದ ಎಲ್ಲಾ 40 ಲೋಕಸಭಾ ಸ್ಥಾನಗಳನ್ನು ಬಿಜೆಪಿ ನೇತೃತ್ವದ ಎನ್‌ಡಿಎ ಗೆಲ್ಲಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಹೇಳಿದ್ದಾರೆ.
ಬಿಹಾರದ ಮಧುಬನಿ ಜಿಲ್ಲೆಯ ಝಂಜರ್‌ಪುರದಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಗೃಹ ಸಚಿವರು, ಬಿಹಾರದಲ್ಲಿ 2019 ರ ಚುನಾವಣೆಯಲ್ಲಿ ಎನ್‌ಡಿಎ 39 ಲೋಕಸಭಾ ಸ್ಥಾನಗಳನ್ನು ಪಡೆದಿತ್ತು. ಮುಂದಿನ ವರ್ಷದ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಎಲ್ಲಾ 40 ಸ್ಥಾನಗಳನ್ನು ಗೆಲ್ಲುವ ಮೂಲಕ ದಾಖಲೆ ಬರೆಯಲಿದೆ ಎಂದು ಹೇಳಿದರು.
ಬಿಹಾರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ದಿನದಿಂದ ದಿನಕ್ಕೆ ಹದಗೆಡುತ್ತಿದೆ ಮತ್ತು “ಅವಕಾಶವಾದಿ ಮೈತ್ರಿಯಿಂದ ಮುಂದಿನ ದಿನಗಳಲ್ಲಿ ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಲಿದೆ ಎಂದರು.
“ಮೋದಿಜಿ ಮತ್ತೊಮ್ಮೆ ಪ್ರಧಾನಿಯಾಗದಿದ್ದರೆ, ಇಡೀ ಸೀಮಾಂಚಲ್ ಪ್ರದೇಶವು ಮತ್ತೆ ನುಸುಳುಕೋರರಿಂದ ತುಂಬಿರುತ್ತದೆ ಎಂದು ಹೇಳಿದರು.
ಜೆಡಿಯು-ಆರ್‌ಜೆಡಿ ಮೈತ್ರಿ ಕುರಿತು ಮಾತನಾಡಿದ ಅವರು , ಜೆಡಿಯು-ಆರ್‌ಜೆಡಿ ಮೈತ್ರಿಯು ಎಣ್ಣೆ ಹಾಗೂ ನೀರು ಇದ್ದಂತೆ. ಇದು ಎಂದಿಗೂ ಒಂದಲ್ಲ,ಹೆಚ್ಚು ಕಾಲ ಇರುವುದಿಲ್ಲ ಎಂದು ಹೇಳಿದರು.
#WATCH | Madhubani, Bihar: Union Home Minister Amit Shah says, “The JDU-RJD combination is like oil and water. They will never mix. I want to tell Nitish Babu that no matter how high the self-gain is, water and oil are never one. Oil has nothing to lose, it only maligns the… pic.twitter.com/vgTrpl33iX
— ANI (@ANI) September 16, 2023
ಬಿಹಾರದಲ್ಲಿ ಲಾಲು-ನಿತೀಶ್ ಸರ್ಕಾರವಿದೆ. ನಾನು ಬಿಹಾರದ ಪತ್ರಿಕೆಗಳನ್ನು ಓದುತ್ತಿದ್ದೇನೆ. ಪತ್ರಕರ್ತರು ಮತ್ತು ದಲಿತರ ಮೇಲೆ ಗುಂಡಿನ ದಾಳಿ, ಲೂಟಿ, ಅಪಹರಣ, ಹತ್ಯೆಗಳು ಹೆಚ್ಚಿವೆ. ಈ ಸ್ವಾರ್ಥ ಮೈತ್ರಿಯು ಬಿಹಾರವನ್ನು ಜಂಗಲ್ ರಾಜ್ ಕಡೆಗೆ ಕೊಂಡೊಯ್ಯುತ್ತಿದೆ. ಈಗ ಲಾಲು ಯಾದವ್ ಸಕ್ರಿಯರಾಗಿದ್ದಾರೆ ಮತ್ತು ನಿತೀಶ್ ಕುಮಾರ್ ನಿಷ್ಕ್ರಿಯರಾಗಿದ್ದಾರೆ. ಲಾಲು ಪ್ರಸಾದ್ ತಮ್ಮ ಮಗನನ್ನು ಮುಖ್ಯಮಂತ್ರಿ ಮಾಡಲು ಬಯಸಿದ್ದಾರೆ, ನಿತೀಶ್ ಪ್ರಧಾನಿಯಾಗುವ ಕನಸು ಕಾಣುತ್ತಿದ್ದಾರೆ. ಆದರೆ ಅವರ ಆಸೆಗಳು ಎಂದಿಗೂ ಈಡೇರುವುದಿಲ್ಲ.
2024ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೇ ಪ್ರಧಾನಿಯಾಗಲಿದ್ದಾರೆ ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್ ಫಿಕ್ಸ್
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.