Karnataka: ಬರ ಮಾನದಂಡ ಪರಿಷ್ಕರಿಸಿ- ಕೇಂದ್ರ ಸರಕಾರಕ್ಕೆ ಸಿಎಂ ಸಿದ್ದರಾಮಯ್ಯ ಮನವಿ
Team Udayavani, Sep 16, 2023, 11:36 PM IST
ಬೆಂಗಳೂರು: ಕೇಂದ್ರ ಸರಕಾರದ ಬರ ನಿರ್ವಹಣೆ ಕೈಪಿಡಿ-2020ರ ಮಾನದಂಡಗಳನ್ನು ಪರಿಷ್ಕರಿಸುವಂತೆ ಕೇಂದ್ರ ಸರಕಾರಕ್ಕೆ ಸಿಎಂ ಸಿದ್ದರಾಮಯ್ಯ ಮತ್ತೂಮ್ಮೆ ಮನವಿ ಮಾಡಿದ್ದಾರೆ.
ಮಾನದಂಡದಲ್ಲಿರುವ ಕೆಲವು ಸಮಸ್ಯೆಗಳ ಕಾರಣಗಳಿಂದಾಗಿ ಬರ ಘೋಷಣೆ ವಿಳಂಬ ವಾಗಿದೆ. ಇದನ್ನು ಪರಿಷ್ಕರಿಸ ದಿದ್ದರೆ ಬರಪೀಡಿತ ಪ್ರದೇಶದಲ್ಲಿ ಜನರಿಗೆ ನೆರವಾಗಲು ಸಾಧ್ಯವಾ ಗದು. ಈಗಾಗಲೇ ಇದರ ಅನಿವಾರ್ಯತೆಯನ್ನು ವಿವರಿಸಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರಿಗೆ ಪತ್ರ ಬರೆದಿದ್ದರೂ ಇದುವರೆಗೆ ಉತ್ತರ ಬಂದಿಲ್ಲ. ಮಾನದಂಡಗಳಲ್ಲಿನ ಬದಲಾವಣೆ ಕೇವಲ ಕರ್ನಾಟಕ ರಾಜ್ಯದ ದೃಷ್ಟಿಯಿಂದ ಮಾತ್ರವೇ ಅಲ್ಲ, ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಒಕ್ಕೂಟವಾದ ಭಾರತ ಗಣರಾಜ್ಯದ ಹಿತದೃಷ್ಟಿಯಿಂದಲೂ ಅತ್ಯಗತ್ಯವಾಗಿರುತ್ತದೆ ಎಂದಿದ್ದಾರೆ.
ಹವಾಮಾನ ಆಧಾರಿತ ಕೃಷಿ ವಲಯ
ಕರ್ನಾಟಕವು ವೈವಿಧ್ಯಮಯವಾದ 14 ಕೃಷಿ-ಹವಾಮಾನ ವಲಯಗಳನ್ನು ಹೊಂದಿದ್ದು, ಪ್ರತಿಯೊಂದು ವಲಯವೂ ತನ್ನದೇ ಆದ ಸವಾಲುಗಳನ್ನು ಹೊಂದಿದೆ. ಪ್ರಸಕ್ತ ಇರುವ ಮಾನದಂಡಗಳು ಎಲ್ಲ ವಲಯಗಳಿಗೂ ಏಕರೂಪವಾಗಿದ್ದು, ಇದು ಬರ ಘೋಷಣೆಗೆ ಅಗತ್ಯವಾದ ಸೂಕ್ಷ್ಮಗಳು ಮತ್ತು ಬದಲಾವಣೆಗಳನ್ನು ಒಳಗೊಳ್ಳುವುದಿಲ್ಲ. ಹಾಗಾಗಿ ವಲಯವಾರು ನಿರ್ದಿಷ್ಟವಾದ ಸೂಚ್ಯಂಕಗಳನ್ನು ಬರ ಘೋಷಣೆಗೆ ರೂಪಿಸುವುದು ಅಗತ್ಯವಾಗಿದೆ.
ಪ್ರಸಕ್ತ ಬರ ಘೋಷಣೆಯ ಮಾನದಂಡ ಗಳು ಹವಾಮಾನಶಾಸ್ತ್ರೀಯ, ಕೃಷಿ ಹಾಗೂ ಜಲಶಾಸ್ತ್ರೀಯ ಬರಗಳ ಸೂಚ್ಯಂಕಗಳನ್ನು ತನ್ನ ಮಾನದಂಡಗಳಲ್ಲಿ ಕ್ರೋಢೀಕರಿಸಿಕೊಂಡಿದೆ. ಆದರೆ ಸದಾಕಾಲವೂ ಇದು ಅನ್ವಯ ಯೋಗ್ಯವಾಗದು ಎಂದರು.
ಕೇಂದ್ರದ ಕಠಿನ ನಿಯಮಗಳಿಂದಾಗಿ ರಾಜ್ಯ ಸರಕಾರವು ಬರ ಘೋಷಣೆ ಮಾಡಿ ತತ್‌ಕ್ಷಣ ಪರಿಹಾರಕ್ಕೆ ಮುಂದಾಗಲು ಸಾಧ್ಯವಾಗುವುದಿಲ್ಲ ಎಂದು ಸಿದ್ದರಾಮಯ್ಯ ಅವರು ಗಮನ ಸೆಳೆದಿದ್ದಾರೆ.
ನಿಯಮಾವಳಿ ಸಮೀಕರಣ ಅಗತ್ಯ
ಬರನಿರ್ವಹಣೆ ಕೈಪಿಡಿ 2016ರ ನಿಯಮಗಳು ಹಾಗೂ ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ನಿಯಮಾವಳಿಯನ್ನು ಸಮೀಕರಿಸುವ ಅಗತ್ಯವಿದೆ. ಬರ ನಿರ್ವಹಣೆ ಕೈಪಿಡಿಯ ಮಾನದಂಡದಡಿ ಬೆಳೆಹಾನಿ ಸಹಾಯಧನಕ್ಕೆ ಅರ್ಹತೆ ಪಡೆಯಲು ಶೇ.50ರಷ್ಟು ಬೆಳೆಹಾನಿ ಪ್ರಮಾಣ ಅಗತ್ಯವಿರುತ್ತದೆ. ಈ ಪ್ರಮಾಣ ವಿಪತ್ತಿನ ಪರಿಹಾರಕ್ಕೆ ಸಂಬಂಧಿಸಿ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯವು ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ಮಾನದಂಡಗಳ ಅಡಿ ಸೂಚಿಸಿರುವ ಶೇ.33 ಬೆಳೆ ನಾಶಕ್ಕೆ ವ್ಯತಿರಿಕ್ತವಾಗಿದೆ. ಹಾಗಾಗಿ, ಕೈಪಿಡಿಯ ಮಾನದಂಡವನ್ನು ಇದಕ್ಕೆ ಹೊಂದಾಣಿಕೆ ಮಾಡುವುದು ಸೂಕ್ತವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.