ODI ; ಜಿದ್ದಿಗೆ ಬಿದ್ದು ಆಸೀಸ್ ಗೆ ಸೋಲುಣಿಸಿ ಸರಣಿ ಗೆದ್ದ ದಕ್ಷಿಣ ಆಫ್ರಿಕಾ
ವಿಶ್ವಕಪ್‌ಗೆ ಮುನ್ನ ನೈತಿಕ ಸ್ಥೈರ್ಯವನ್ನು ಹೆಚ್ಚಿಸಿಕೊಂಡ ಬವುಮ ಪಡೆ
Team Udayavani, Sep 17, 2023, 10:27 PM IST
ಜೋಹಾನ್ಸ್‌ಬರ್ಗ್ : ಇಲ್ಲಿನ ವಾಂಡರರ್ಸ್ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಪ್ರವಾಸಿ ಆಸ್ಟ್ರೇಲಿಯ ವಿರುದ್ಧದ ಐದನೇ ಮತ್ತು ಸರಣಿ ನಿರ್ಣಾಯಕ ಅಂತಿಮ ಏಕದಿನ ಅಂತಾರಾಷ್ಟ್ರೀಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವು 122 ರನ್‌ಗಳಿಂದ ಗೆದ್ದು ಸರಣಿಯನ್ನು 3-2 ಅಂತರದಿಂದ ಜಯಿಸಿತು.
ದಕ್ಷಿಣ ಆಫ್ರಿಕಾದ ಆಲ್‌ರೌಂಡರ್ ಮಾರ್ಕೊ ಜಾನ್ಸನ್ ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಮಿಂಚಿದರು, 23 ಎಸೆತಗಳಲ್ಲಿ 47 ರನ್ ಗಳಿಸಿದರು. ಮೊದಲು ಬ್ಯಾಟಿಂಗ್‌ಗೆ ಇಳಿಸಿಸಿದ ನಂತರ ದಕ್ಷಿಣ ಆಫ್ರಿಕಾವು ನಿಧಾನಗತಿಯ ಆರಂಭವನ್ನು ಜಯಿಸಿ 9 ವಿಕೆಟ್ ಕಳೆದು ಕೊಂಡು 315 ರ ಭರ್ಜರಿ ಗುರಿಯನ್ನು ನೀಡಿತು . ಮಾರ್ಕ್ರಾಮ್ 93, ಮಿಲ್ಲರ್ 63, ಫೆಹ್ಲುಕ್ವಾಯೊ ಔಟಾಗದೆ 39 ರನ್ ಗಳಿಸಿ ಉತ್ತಮ ಮೊತ್ತ ಕಲೆ ಹಾಕಲು ನೆರವಾದರು.
ಮಾರ್ಕೊ ಜಾನ್ಸನ್ ಎಂಟು ಓವರ್‌ಗಳಲ್ಲಿ 39 ರನ್ ನೀಡಿ 5 ವಿಕೆಟ್ ಕಬಳಿಸಿ ಏಕದಿನ ವೃತ್ತಿಜೀವನದ ಅತ್ಯುತ್ತಮ ಸಾಧನೆಯನ್ನು ಮಾಡಿದರು. ಆಸೀಸ್ 34.1 ಓವರ್‌ಗಳಲ್ಲಿ 193 ರನ್‌ಗಳಿಗೆ ಸರ್ವಪತನ ಕಂಡಿತು. ಐದು ಪಂದ್ಯಗಳ ಸರಣಿಯ ಮೊದಲ ಎರಡನ್ನು ಆಸೀಸ್ ಗೆದ್ದಿತ್ತು. ಮೂರನೇ ಪಂದ್ಯದಲ್ಲಿ ತಿರುಗಿ ಬಿದ್ದ ಬವುಮ ಪಡೆ ಮೂರು ಪಂದ್ಯಗಳನ್ನು ಗೆದ್ದು ಸರಣಿ ಜಯಿಸಿ ಮುಂದಿನ ತಿಂಗಳು ಭಾರತದಲ್ಲಿ ನಡೆಯಲಿರುವ ವಿಶ್ವಕಪ್‌ಗೆ ಮುನ್ನ ನೈತಿಕ ಸ್ಥೈರ್ಯವನ್ನು ಹೆಚ್ಚಿಸಿಕೊಂಡಿತು. 3 ಪಂದ್ಯಗಳ ಟಿ 20 ಸರಣಿಯ ಕ್ಲೀನ್ ಸ್ವೀಪ್ ಸೋಲಿನ ಸೇಡು ತೀರಿಸಿಕೊಂಡಿತು. ಕೇಶವ ಮಹಾರಾಜ್ ಕೂಡ 4 ವಿಕೆಟ್ ಪಡೆದು ಗಮನ ಸೆಳೆದರು.ಆಸೀಸ್ ಪರ ನಾಯಕ ಮಿಚೆಲ್ ಮಾರ್ಷ್ 71 ಹೊರತು ಪಡಿಸಿ ಉಳಿದ ಆಟಗಾರರು ನೆಲಕಚ್ಚಿ ಆಡಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.