Rain ಕರಾವಳಿ: ವಿವಿಧೆಡೆ ಉತ್ತಮ ಮಳೆ: ಎಲ್ಲೊ ಅಲರ್ಟ್
Team Udayavani, Sep 17, 2023, 11:26 PM IST
ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಅಲ್ಲಲ್ಲಿ ರವಿವಾರ ಉತ್ತಮ ಮಳೆಯಾಗಿದೆ. ಮುಂಜಾನೆ, ಸಂಜೆ ಸೇರಿದಂತೆ ದಿನದ ಹಗಲು ವೇಳೆಯಲ್ಲಿ ಬಿಟ್ಟು ಬಿಟ್ಟು ಮಳೆ ಸುರಿದಿದೆ. ಮಂಗಳೂರು ನಗರದಲ್ಲಿ ಮೋಡ ಕವಿದ ಬಿಸಿಲು, ಒಂದೆರಡು ಬಾರಿ ಬಿರುಸಿನ ಮಳೆಯಾಗಿದೆ. ಗ್ರಾಮೀಣ ಭಾಗದಲ್ಲೂ ಆಗಾಗ್ಗೆ ಮಳೆ ಸುರಿದಿದೆ.
ಉಡುಪಿ ಜಿಲ್ಲೆಯಲ್ಲಿ ರವಿವಾರ ಬಿಸಿಲು-ಮೋಡ ವಾತಾವರಣದ ನಡುವೆ ಹಲವೆಡೆ ಸಾಧಾರಣದಿಂದ ಉತ್ತಮ ಮಳೆ ಸುರಿದಿದೆ. ಉಡುಪಿ, ಪರ್ಕಳ, ಮಲ್ಪೆ, ಮಣಿಪಾಲ ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೂ ಅಲ್ಲಲ್ಲಿ ಕೆಲಕಾಲ ಉತ್ತಮ ಮಳೆಯಾಗಿದೆ. ಬೆಳಗ್ಗೆ ಮತ್ತು ಮತ್ತು ಸಂಜೆ ಸಿಡಿಲು ಕೂಡ ಜೋರಾಗಿತ್ತು. ಕುಂದಾಪುರದಲ್ಲಿ ಸಂಜೆ ವೇಳೆ ಉತ್ತಮ ಮಳೆಯಾಗಿದೆ. ಶನಿವಾರ ತಡರಾತ್ರಿಯೂ ಸಣ್ಣದಾಗಿ ಮಳೆಯಾಗಿದೆ.
ಇಂದು ಎಲ್ಲೊ ಅಲರ್ಟ್
ಹವಾಮಾನ ಇಲಾಖೆ ಸೋಮವಾರ ಕರಾವಳಿಗೆ ಎಲ್ಲೊ ಅಲರ್ಟ್ ಘೊಷಿಸಿದೆ. ಕರಾವಳಿಯ ಬಹುತೇಕ ಕಡೆ ಹಗುರದಿಂದ ಸಾಧಾರಣ/ಗುಡುಗು ಸಹಿತ ಮಳೆ ಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸಮುದ್ರದಲ್ಲಿ ಗಂಟೆಗೆ 40-55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯ ದಂತೆ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಆಟೋ ವರ್ಕಶಾಪ್ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.