Karnataka ರಾಜ್ಯದ ಮೊದಲ “ಹೆಲ್ತ್‌ ಎಟಿಎಂ’ಗೆ ಚಾಲನೆ ;ಪ್ರಯೋಜನಗಳೇನು?

Team Udayavani, Sep 17, 2023, 11:45 PM IST

1-sadasd

ಕಲಬುರಗಿ: ರಾಜ್ಯದಲ್ಲೇ ಮೊತ್ತಮೊದಲ ಬಾರಿಗೆ ಸ್ಥಾಪಿಸಲಾದ “ಸ್ಮಾರ್ಟ್‌ ಹೆಲ್ತ್‌ ಕಿಯೋಸ್ಕ್'(ಹೆಲ್ತ್‌ ಎಟಿಎಂ)ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.

ನಗರದಲ್ಲಿ ರವಿವಾರ ನಡೆದ “ಕಲ್ಯಾಣ ಕರ್ನಾಟಕ ಉತ್ಸವ’ ಕಾರ್ಯಕ್ರಮದಲ್ಲಿ ಅವರು ಕಲಬುರಗಿ ಜಿಲ್ಲಾಡಳಿತ ಮತ್ತು ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಾರಿಗೊಳಿಸಲಾದ “ಈ ಆರೋಗ್ಯ ಮಿತ್ರ’ ಯೋಜನೆ ಯನ್ನು ಲೋಕಾರ್ಪಣೆ ಮಾಡಿದರು.

ಜನಸ್ನೇಹಿ ಎಟಿಎಂ ಸ್ಮಾರ್ಟ್‌ ಹೆಲ್ತ್‌ ಕಿಯೋಸ್ಕ್ ಗಳ ಮೂಲಕ ತಪಾಸಣೆ ಮಾಡಿ ಶೀಘ್ರರೋಗ ಪತ್ತೆ ಹಾಗೂ ನಿಯಂತ್ರಣಕ್ಕೆ ತರಲು ತಂತ್ರಜ್ಞಾನ ಬಳಸಿ ಈ ವಿಶಿಷ್ಟ ಹೆಲ್ತ್‌ ಎಟಿಎಂ ಸ್ಥಾಪಿಸಲಾಗುತ್ತಿದೆ. ಇದರಿಂದ ಜನರ ಆರೋಗ್ಯದ ಮಾಹಿತಿ ಕ್ಷಿಪ್ರ ವಾಗಿ ಗೊತ್ತಾಗುತ್ತದೆ. ಬಳಿಕ ಯಾವ ವಿಧಾನದ ಚಿಕಿತ್ಸೆ ಪಡೆಯಬೇಕು ಹಾಗೂ ಎಲ್ಲಿ ಪಡೆಯಬೇಕು ಎನ್ನುವ ಎಲ್ಲ ಮಾಹಿತಿ ಲಭ್ಯವಾಗಲಿದೆ.

ಆರೋಗ್ಯ ಎಟಿಎಂ ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಿ ತಂತ್ರಜ್ಞಾನವಾ ಗಿದ್ದು, ಪ್ರಾಥಮಿಕ ಮತ್ತು ತಡೆಗಟ್ಟಬಹು ದಾದ ಆರೋಗ್ಯ ಸೇವೆಗಳನ್ನು ಸುಲಭ ವಾಗಿ ಹಾಗೂ ಕೈಗಟಕುವ ದರದಲ್ಲಿ ಒದಗಿಸುತ್ತದೆ. ನಗರ ಪ್ರದೇಶಗಳಲ್ಲಿ ಜನರ ಜೀವನ ಶೈಲಿಗೆ ಅನುಗುಣವಾಗಿ, ಕಡಿಮೆ ಸಮಯದಲ್ಲಿ ಪರೀಕ್ಷೆಗಳನ್ನು ಮಾಡುವ ಮೂಲಕ ಸಮಯ ಮತ್ತು ಹಣ ಉಳಿಸಬಹುದು. ಗ್ರಾಮೀಣ ಪ್ರದೇಶಗಳಿಗೆ ಅಗತ್ಯವಿರುವ ಆರೋಗ್ಯ ಸಿಬಂದಿ ಅಂತರವನ್ನು ಕಡಿಮೆ ಮಾಡಿ ದುರ್ಗಮ ಪ್ರದೇಶಗಳಿಗೂ ಆರೋಗ್ಯ ಸೇವೆಗಳನ್ನು ತಲುಪಿಸಬಹುದು. ರೋಗವನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚಿ ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡುವ ಮೂಲಕ ಸಮಯದ ಹಿಂದುಳಿದ ವರ್ಗವನ್ನು ಸಬಲೀಕರಣಗೊಳಿಸುವುದು ಹೆಲ್ತ್‌ ಎಟಿಎಂ ಗುರಿಯಾಗಿದೆ.

ಪ್ರಯೋಜನಗಳು
ಜನಸಂದಣಿ ಪ್ರದೇಶಗಳಲ್ಲಿ ಲಭ್ಯವಿರುವ ಆರೋಗ್ಯ ಎಟಿಎಂಗಳ ಮೂಲಕ ಸರಳವಾದ ಆರೋಗ್ಯ ಸೇವೆಗಳ ಲಭ್ಯತೆ, ನಿಖರವಾದ ವೈದ್ಯಕೀಯ ಪರೀಕ್ಷೆ ಮತ್ತು ಹೆಚ್ಚಿನ ಆರೋಗ್ಯ ತಪಾಸಣೆಗಾಗಿ ಅರೋಗ್ಯ ಎಟಿಎಂಗಳನ್ನು ಬಳಸುವುದರಿಂದ ಸಮಯ ಮತ್ತು ಹಣ ಉಳಿತಾಯವಾಗಲಿದೆ. ಸಮಗ್ರ ಆರೋಗ್ಯ ಸೇವೆಗಳಿಂದ ತುರ್ತು ಸ್ಪಂದನೆ, ರೋಗಿಗಳಿಗೆ ಆತ್ಮಸ್ಥೈರ್ಯ ತುಂಬುವುದರ ಮೂಲಕ ಉತ್ತಮ ಆರೋಗ್ಯ ಮತ್ತು ಒಟ್ಟಾರೆ ಯೋಗಕ್ಷೇಮ ಲಭ್ಯವಾಗಲಿದೆ. ನಿರಂತರ ಆರೋಗ್ಯ ತಪಾಸಣೆ ಮತ್ತು ಮೇಲ್ವಿಚಾರಣೆ ಮೂಲಕ ರೋಗಗಳನ್ನು ಪತ್ತೆ ಹಚ್ಚಲು ಮತ್ತು ತಡೆಗಟ್ಟಲು ಸಹಕಾರಿಯಾಗಿದ್ದು, ರೋಗಿಯ ದಾಖಲೆಗಳನ್ನು ಗೌಪ್ಯವಾಗಿಡಲಾಗುತ್ತದೆ. ಹತ್ತು ನಿಮಿಷಗಳಲ್ಲಿ 50ಕ್ಕೂ ಹೆಚ್ಚು ಪರೀಕ್ಷೆಗಳನ್ನು ನಡೆಸಬಹುದು. ತ್ವರಿತವಾಗಿ ಆರೋಗ್ಯದ ವರದಿ ನೀಡಲಾಗುತ್ತದೆ. ಆರೋಗ್ಯಕ್ಕೆ ಅಗತ್ಯವಿರುವ ಆಹಾರದ ಮಾಹಿತಿ ನೀಡಲಾಗುತ್ತದೆ.
ಕÇಬುರಗಿ ಜಿಲ್ಲೆಯಲ್ಲಿ ಎಚ್‌.ಪಿ.ಎಂಟರ್‌ಪ್ರೈಸಸ್‌ ವತಿಯಿಂದ 25 ಹೆಲ್ತ್‌ ಎಟಿಎಂಗಳನ್ನು ಸಿಎಸ್‌ಆರ್‌ ಅನುದಾನದಡಿ ಪಡೆದು ಅಳವಡಿಸಲಾಗುತ್ತಿದೆ. ಸಚಿವ ಪ್ರಿಯಾಂಕ್‌ ಖರ್ಗೆ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ| ಅಜಯ್‌ ಸಿಂಗ್‌ ಸಹಿತ ಪ್ರಮುಖರು ಉಪಸ್ಥಿತರಿದ್ದರು.

ಬರ ನಿರ್ವಹಣೆಗೆ ಹಣಕಾಸಿನ ತೊಂದರೆ ಇಲ್ಲ
ಬರ ನಿರ್ವಹಣೆಗೆ ರಾಜ್ಯದಲ್ಲಿ ಸದ್ಯ ಹಣಕಾಸಿನ ತೊಂದರೆ ಇಲ್ಲ. 20 ಕೋ.ರೂ. ನೀಡಿದ್ದೇವೆ. ಭೀಕರವಾದ ದಿನಗಳು ಇನ್ನೂ ಎದುರಾಗಿಲ್ಲ. ಒಂದೊಮ್ಮೆ ಅಂಥ ಪರಿಸ್ಥಿತಿ ಎದುರಾದರೆ ಯುಧ್ದೋಪಾದಿಯಲ್ಲಿ ತುರ್ತು ಕ್ರಮ ಕೈಗೊಳ್ಳಲು ಸರಕಾರ ಸನ್ನದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರಗಾಲ ಹಿನ್ನೆಲೆಯಲ್ಲಿ ಕೂಲಿ ಕಾರ್ಮಿಕರಿಗೆ ಕೆಲಸ ಸಿಗುತ್ತಿಲ್ಲ. ಇದರಿಂದಾಗಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಗುಳೆ ಹೋಗುವ ಸಾಧ್ಯತೆಗಳಿವೆ. ಆದ್ದರಿಂದ ನರೇಗಾ ಕೂಲಿ ದಿನಗಳನ್ನು 150ಕ್ಕೆ ಹೆಚ್ಚಿಸುವ ಪ್ರಸ್ತಾವ ಇದೆ. ಕೇಂದ್ರ ಸರಕಾರ ಇದಕ್ಕೆ ಒಪ್ಪಿದರೆ ಗುಳೆ ತಪ್ಪಿಸಬಹುದು ಎಂದು ಹೇಳಿದರು.

ಟಾಪ್ ನ್ಯೂಸ್

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

FIR 6 to 6 Kannada movie

FIR 6to6 movie: ಆ್ಯಕ್ಷನ್‌ ಚಿತ್ರದಲ್ಲಿ ವಿಜಯ ರಾಘವೇಂದ್ರ

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.