Bantwal ಕಳವು ಪ್ರಕರಣ ಭೇದಿಸಿದ ಬಂಟ್ವಾಳ ಪೊಲೀಸರು: 15.56 ಲಕ್ಷ ರೂ. ಸೊತ್ತು ವಶ

Team Udayavani, Sep 18, 2023, 11:38 PM IST

Bantwal ಕಳವು ಪ್ರಕರಣ ಭೇದಿಸಿದ ಬಂಟ್ವಾಳ ಪೊಲೀಸರು: 15.56 ಲಕ್ಷ ರೂ. ಸೊತ್ತು ವಶ

ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ಸಜೀಪಮುನ್ನೂರಿನಲ್ಲಿ ಹಾಡಹಗಲಲ್ಲೇ ನಡೆದ ಕಳವು ಪ್ರಕರಣದ ಆರೋಪಿಗಳನ್ನು ಭೇಟೆಯಾಡಿರುವ ಪೊಲೀಸರು ಇಬ್ಬರ ಆರೋಪಿಗಳ ಸಹಿತ 15.56 ಲಕ್ಷ ರೂ. ಮೊತ್ತದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಮಂಗಳೂರು ಕಸಬಾ ಬೆಂಗ್ರೆ ನಿವಾಸಿ ಫರಾಜ್‌ (27) ಹಾಗೂ ಸುರತ್ಕಲ್‌ ಚೊಕ್ಕಬೆಟ್ಟು ನಿವಾಸಿ ತೌಸಿಫ್‌ ಅಹಮ್ಮದ್‌ (34) ಬಂಧಿತ ಆರೋಪಿಗಳು. ಈ ಕಳ್ಳರು ಸೆ. 1ರಂದು ಸಜೀಪಮುನ್ನೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮೈಕಲ್‌ ಡಿ’ಸೋಜಾ ಅವರ ಮನೆಯ ಮುಂಬಾಗಿಲನ್ನು ಮುರಿದು ಕೋಣೆಯ ಕಪಾಟಿನಲ್ಲಿದ್ದ ಸುಮಾರು 5.36 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಸುಮಾರು 3 ಸಾವಿರ ರೂ. ಮೌಲ್ಯದ ಬೆಳ್ಳಿಯ ಸಾಮಗ್ರಿಗಳನ್ನು ಕಳವು ಮಾಡಿದ್ದರು. ಈ ಕುರಿತು ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕಳವಿನ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಒಟ್ಟು 12.23 ಲಕ್ಷ ರೂ. ಮೌಲ್ಯದ 223 ಗ್ರಾಂ ಚಿನ್ನಾಭರಣ, 3 ಸಾವಿರ ರೂ. ಮೌಲ್ಯದ ಬೆಳ್ಳಿ ಸೊತ್ತುಗಳು, 3.30 ಲಕ್ಷ ರೂ. ಮೌಲ್ಯದ ಕೃತ್ಯಕ್ಕೆ ಬಳಸಿದ ಮಹೀಂದ್ರ ಝೈಲೋ ಕಾರು, ಬೈಕ್‌ ಸೇರಿದಂತೆ 15.56 ಲಕ್ಷ ರೂ. ಮೊತ್ತದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಸ್ತುತ ವಶಪಡಿಸಿಕೊಂಡ ಚಿನ್ನಾಭರಣಗಳ ಪೈಕಿ ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ಕಳವಾಗಿದ್ದ ಚಿನ್ನಾಭರಣಗಳು ಕೂಡ ಸೇರಿವೆ. ಆರೋಪಿ ಫರಾಜ್‌ನ ವಿರುದ್ಧ ಮಂಗಳೂರು ಉತ್ತರ ಪೊಲೀಸ್‌ ಠಾಣೆ ಹಾಗೂ ಪಣಂಬೂರು ಪೊಲೀಸ್‌ ಠಾಣೆಯಲ್ಲೂ ಮನೆ ಕಳ್ಳತನ ಪ್ರಕರಣ ದಾಖಲಾಗಿದೆ.

ಎಸ್ಪಿ ಸಿ.ಬಿ. ರಿಷ್ಯಂತ್‌ ಅವರ ನಿರ್ದೇಶನದಂತೆ ಎಎಸ್‌ಪಿ ಧರ್ಮಪ್ಪ ಎನ್‌.ಎಂ., ಬಂಟ್ವಾಳ ಡಿವೈಎಸ್‌ಪಿ ಪ್ರತಾಪ್‌ ಸಿಂಗ್‌ ಥೋರಾಟ್‌ ಮಾರ್ಗದರ್ಶನದಲ್ಲಿ ಇನ್‌ಸ್ಪೆಕ್ಟರ್‌ ನಾಗರಾಜ್‌ ಎಚ್‌.ಇ. ನೇತೃತ್ವದಲ್ಲಿ ಪಿಎಸ್‌ಐ ರಾಮಕೃಷ್ಣ, ಕಲೈಮಾರ್‌, ಎಎಸ್‌ಐ ನಾರಾಯಣ, ಹೆಡ್‌ ಕಾನ್‌ಸ್ಟೆಬಲ್‌ ಇರ್ಷಾದ್‌, ಪಿ. ರಾಜೇಶ್‌, ಮನೋಹರ, ಕಾನ್‌ಸ್ಟೆಬಲ್‌ ಉಮೇಶ್‌ ಹಿರೇಮಠ, ರಂಗನಾಥ್‌, ಜಿಲ್ಲಾ ಬೆರಳಚ್ಚು ಘಟಕದ ಸಚಿನ್‌, ಉದಯ, ಜಿಲ್ಲಾ ಗಣಕಯಂತ್ರ ಕೇಂದ್ರದ ದಿವಾಕರ, ಸಂಪತ್‌ ಅವರು ಆರೋಪಿಗಳ ಪತ್ತೆಗೆ ಶ್ರಮಿಸಿದ್ದರು.

ಟಾಪ್ ನ್ಯೂಸ್

lakshaman-savadi

Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ‌‌‌: ಲಕ್ಷ್ಮಣ ಸವದಿ

Khandre

Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ

firing

Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!

BBK11: ಬಿಗ್‌ಬಾಸ್‌ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ

BBK11: ಬಿಗ್‌ಬಾಸ್‌ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ

ARMY (2)

Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು

Tollywood: ಲೋಕೇಶ್‌, ಪ್ರಶಾಂತ್‌ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್‌ ಎಂಟ್ರಿ?

Tollywood: ಲೋಕೇಶ್‌, ಪ್ರಶಾಂತ್‌ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್‌ ಎಂಟ್ರಿ?

Sunday Market: ಶ್ರೀನಗರದ ಮಾರುಕಟ್ಟೆ ಬಳಿ ಉಗ್ರರಿಂದ ಗ್ರೆನೇಡ್ ದಾಳಿ… 10 ಮಂದಿಗೆ ಗಾಯ

Sunday Market: ಶ್ರೀನಗರದ ಮಾರುಕಟ್ಟೆ ಬಳಿ ಉಗ್ರರಿಂದ ಗ್ರೆನೇಡ್ ದಾಳಿ… 10 ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24-kadaba-interview

Kadaba: ಇಂಗ್ಲಿಷ್‌ ಮಾಧ್ಯಮದಲ್ಲಿ ಕಲಿತರಷ್ಟೇ ಸಾಧನೆ ಸಾಧ್ಯ ಎಂಬುದು ಭ್ರಮೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

23-balindra

Deepawali: ಸುಳ್ಯದಲ್ಲಿ ಗಮನ ಸೆಳೆದ ಬಲೀಂದ್ರ ಅಲಂಕಾರ ಸರ್ಧೆ

22-bantwala-5

Bantwala ತಾಲೂಕು ಮಟ್ಟದ ಚಿಣ್ಣರ ಬಣ್ಣ ಮಕ್ಕಳ ಚಿತ್ರಕಲಾ ಸ್ಪರ್ಧೆ

21-ptr

Puttur: ಮುಂಜಾನೆ 3 ಗಂಟೆಗೆ ನಡೆಯಿತು ಅಗಲಿದವರಿಗೆ ಅವಲಕ್ಕಿ ಸಮರ್ಪಣೆ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

lakshaman-savadi

Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ‌‌‌: ಲಕ್ಷ್ಮಣ ಸವದಿ

20

Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು

Khandre

Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ

firing

Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!

BBK11: ಬಿಗ್‌ಬಾಸ್‌ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ

BBK11: ಬಿಗ್‌ಬಾಸ್‌ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.