BJP ಟಿಕೆಟ್ ಕೊಡಿಸುವುದಾಗಿ ಕೋಟಿ ಕೋಟಿ ವಂಚನೆ: ಒಡಿಶಾದಲ್ಲಿ ಹಾಲಶ್ರೀ ಸ್ವಾಮೀಜಿ ಬಂಧನ
Team Udayavani, Sep 19, 2023, 12:38 PM IST
ಬೆಂಗಳೂರು: ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರ ಕುಂದಾಪುರ ಗ್ಯಾಂಗ್ ನ ಪ್ರಮುಖ ಆರೋಪಿ ಹಾಲಶ್ರೀಯನ್ನು ಬಂಧಿಸುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ.
ಚೈತ್ರಾ ಕುಂದಾಪುರ ಬಂಧನವಾಗುತ್ತಿದ್ದಂತೆ ಹಾಲಶ್ರೀ ಸ್ವಾಮೀಜಿ ತಲೆಮರೆಸಿಕೊಂಡಿದ್ದು ಇವರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದರು.
ಪ್ರಕರಣದ ಮೂರನೇ ಆರೋಪಿಯಾಗಿರುವ ವಿಜಯನಗರ ಜಿಲ್ಲೆಯ ಹಿರೇಹಡಗಲಿ ತಾಲೂಕಿನ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಒಡಿಶಾದ ಕಟಕ್‌ನಲ್ಲಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಒಡಿಶಾ ಪೊಲೀಸರ ಸಹಕಾರದಿಂದ ಹಾಲಶ್ರೀಯನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದು, ಇಂದು (ಸೆ. 19) ರಾತ್ರಿ ಬೆಂಗಳೂರಿಗೆ ಕರೆತರಲಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಚೈತ್ರಾ ಕುಂದಾಪುರ ಹೇಳಿದಂತೆ ವಿಚಾರಣೆ ವೇಳೆ ಸ್ವಾಮೀಜಿ ದೊಡ್ಡ ದೊಡ್ಡವರ ಹೆಸರು ಬಾಯ್ಬಿಡುತ್ತರಾ ಎಂಬುದನ್ನು ಕಾದುನೋಡಬೇಕಾಗಿದೆ.
ಇದನ್ನೂ ಓದಿ: CCB Police: ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಚಿಕ್ಕಮಗಳೂರಿಗೆ ಸಿಸಿಬಿ ಪೊಲೀಸರ ತಂಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.