Chaitra kundapura: ಕೋಟಿ, ಕೋಟಿ ಡೀಲ್- ಚೈತ್ರಾಳಿಂದ 17 ಜನ ಮೋಸ ಹೋಗಿದ್ದಾರೆ: ಕಾಂಗ್ರೆಸ್
ಸಿಸಿಬಿ ಪೊಲೀಸರು ಇನ್ನು ಎರಡು ದಿನಗಳಲ್ಲಿ ಬಹಿರಂಗಪಡಿಸಲಿದ್ದಾರೆ ಎಂದು ದೂರಿದರು.
Team Udayavani, Sep 20, 2023, 10:34 AM IST
ಮೈಸೂರು: ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಐದು ಕೋಟಿ ರೂಪಾಯಿ ವಂಚಿಸಿರುವ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಹಲವಾರು ಮಂದಿಗೆ ವಂಚಿಸಿದ್ದು, ಸುಮಾರು 185 ಕೋಟಿ ರೂಪಾಯಿ ವ್ಯವಹಾರ ನಡೆದಿರುವುದಾಗಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಆರೋಪಿಸಿದ್ದಾರೆ.
ಇದನ್ನೂ ಓದಿ:Rohith Sharma: ರೋಹಿತ್ ಪಾಸ್ಪೋರ್ಟ್ ಮರೆತರೆ? ವಿಚಾರ ಬಹಿರಂಗಪಡಿಸಿದ ಕೊಹ್ಲಿ
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಂಚನೆ ಪ್ರಕರಣದಲ್ಲಿ ಒಟ್ಟು 17ಕ್ಕೂ ಹೆಚ್ಚು ಜನರು ಮೋಸ ಹೋಗಿದ್ದಾರೆ. 23 ಜನಕ್ಕೆ ಟಿಕೆಟ್ ಕೊಡಿಸುವುದಾಗಿ ಅವರಿಂದ ಹಣ ಪಡೆದಿದ್ದು, ಅಂದಾಜು 185 ಕೋಟಿ ರೂ. ವ್ಯವಹಾರ ನಡೆದಿದೆ. ಆಕೆ ಯಾರ ಬಳಿ ಹಣ ಪಡೆದಿದ್ದಾಳೆ, ಯಾರಿಗೆಲ್ಲಾ ಹಣ ಸಂದಾಯವಾಗಿದೆ ಎನ್ನುವುದನ್ನು ಸಿಸಿಬಿ ಪೊಲೀಸರು ಇನ್ನು ಎರಡು ದಿನಗಳಲ್ಲಿ ಬಹಿರಂಗಪಡಿಸಲಿದ್ದಾರೆ ಎಂದರು.
ಮೈಸೂರು ಭಾಗದಲ್ಲೂ ಇಬ್ಬರು ರಾಜಕಾರಣಿಗಳು ಹಣ ಕಳೆದುಕೊಂಡಿದ್ದಾರೆ. 9 ಜನರ ತಂಡದಿಂದ ಈ ವಂಚನೆ ಘಟನೆ ನಡೆದಿದ್ದು, ಇವರೆಲ್ಲಾ ಬಿಜೆಪಿ ಹಾಗೂ ಆರ್ ಎಸ್ ಎಸ್ ಕಾರ್ಯಕರ್ತರಾಗಿದ್ದಾರೆ ಎಂದು ಆರೋಪಿಸಿದ್ದಾರೆ.
ಬಿಜೆಪಿ ಮುಖಂಡ ಸಿ.ಟಿ.ರವಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ಜೊತೆ ಚೈತ್ರಾ ಕುಂದಾಪುರ ಸಂಬಂಧವೇನು ಎನ್ನುವುದನ್ನು ಸ್ಪಷ್ಟಪಡಿಸಬೇಕು ಎಂದು ಲಕ್ಷ್ಮಣ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.