World Cup ; ಪಾಕಿಸ್ಥಾನ-ನ್ಯೂಜಿಲ್ಯಾಂಡ್‌ ಅಭ್ಯಾಸ ಪಂದ್ಯ ಖಾಲಿ ಸ್ಟೇಡಿಯಂನಲ್ಲಿ?

Team Udayavani, Sep 20, 2023, 11:54 PM IST

1-ssadsa

ಹೊಸದಿಲ್ಲಿ: ಭಾರತದ ಆತಿಥ್ಯದಲ್ಲಿ ನಡೆಯಲಿರುವ ಪ್ರತಿಷ್ಠಿತ ಏಕದಿನ ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಗೆ ಉಳಿದಿರುವುದು 15 ದಿನ ಮಾತ್ರ. ಅಕ್ಟೋಬರ್‌ ಐದರಂದು ಈ ಮುಖಾಮುಖಿ ಮೊದಲ್ಗೊಳ್ಳಲಿದೆ. ಇದಕ್ಕೂ ಮುನ್ನ ಅಭ್ಯಾಸ ಪಂದ್ಯಗಳನ್ನು ಆಡಲಾಗುವುದು. ಸೆ. 29ರಂದು ಹೈದರಾಬಾದ್‌ನ “ರಾಜೀವ್‌ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂ’ನಲ್ಲಿ ಪಾಕಿಸ್ಥಾನ- ನ್ಯೂಜಿಲ್ಯಾಂಡ್‌ ಮುಖಾಮುಖಿ ಆಗಲಿವೆ. ಈ ಪಂದ್ಯವನ್ನು ಖಾಲಿ ಸ್ಟೇಡಿಯಂನಲ್ಲಿ ಆಡುವ ಸಾಧ್ಯತೆಯೊಂದು ದಟ್ಟವಾಗಿದೆ.

ಅದೇ ದಿನ ಹೈದರಾಬಾದ್‌ನಲ್ಲಿ ಗಣೇಶ ವಿಸರ್ಜನೆ ನಡೆಯಲಿದೆ. ಜತೆಗೆ ಮಿಲಾದುನ್ನಭಿ ಮೆರವಣಿಗೆ ಕೂಡ ಸಾಗಲಿದೆ. ಇವೆರಡಕ್ಕೂ ಹೆಚ್ಚಿನ ಭದ್ರತೆ ಒದಗಿಸಬೇಕಾದ ಕಾರಣ ಕ್ರಿಕೆಟ್‌ ಪಂದ್ಯಕ್ಕೆ ಸೂಕ್ತ ಭದ್ರತೆ ನೀಡಲು ಸಾಧ್ಯವಿಲ್ಲ ಎಂದು ಹೈದರಾಬಾದ್‌ ಪೊಲೀಸ್‌ ಇಲಾಖೆ ತನ್ನ ಅಸಹಾಯಕತೆ ವ್ಯಕ್ತಪಡಿಸಿದೆ.

ಹೀಗಾಗಿ ಪಾಕಿಸ್ಥಾನ- ನ್ಯೂಜಿಲ್ಯಾಂಡ್‌ ನಡುವಿನ ಅಭ್ಯಾಸ ಪಂದ್ಯ ವನ್ನು ಖಾಲಿ ಸ್ಟೇಡಿಯಂನಲ್ಲಿ ಆಯೋಜಿಸುವುದೊಂದೇ ಮಾರ್ಗೋಪಾಯ ಎಂಬುದಾಗಿ ವರದಿಯಾಗಿದೆ. ಈಗಾಗಲೇ ಆನ್‌ಲೈನ್‌ನಲ್ಲಿ ಟಿಕೆಟ್‌ ಕಾದಿರಿಸಿದವರಿಗೆ ಇದರ ಹಣವನ್ನು ಮರಳಿಸಲು, ವಿಶ್ವಕಪ್‌ ಟಿಕೆಟ್‌ ಪಾಲುದಾರನಾಗಿರುವ “ಬುಕ್‌ ಮೈ ಶೋ’ಗೆ ಬಿಸಿಸಿಐ ಸೂಚಿಸಿದೆ ಎನ್ನಲಾಗಿದೆ.

ಈ ಪಂದ್ಯವನ್ನು ಮುಂದೂಡುವಂತೆ ಹೈದರಾ ಬಾದ್‌ ಪೊಲೀಸ್‌ ಇಲಾಖೆ ಸ್ಥಳೀಯ ಕ್ರಿಕೆಟ್‌ ಮಂಡಳಿ ಮನವಿ ಮಾಡಿತ್ತು. ಆದರೆ ಈಗಾ ಗಲೇ ಸಾಕಷ್ಟು ಪಂದ್ಯಗಳ ದಿನಾಂಕವನ್ನು ಬದಲಿ ಸಿರುವ ಕಾರಣ, ಮತ್ತು ಇದೊಂದು ಅಭ್ಯಾಸ ಪಂದ್ಯವಾಗಿರುವುದರಿಂದ ಪುನಃ ಇಲ್ಲಿ ಪರಿವರ್ತನೆ ಅಸಾಧ್ಯ ಎಂದು ಕೂಟದ ಸಂಘಟಕರು ಹೈದರಾ ಬಾದ್‌ ಕ್ರಿಕೆಟ್‌ ಮಂಡಳಿಯ ಮನವಿಯನ್ನು ತಿರಸ್ಕರಿಸಿದ್ದರು. ಹೀಗಾಗಿ ಉಳಿದಿರುವ ಒಂದೇ ಉಪಾಯವೆಂದರೆ, ಅಂದಿನ ಪಂದ್ಯಕ್ಕೆ ಪ್ರೇಕ್ಷಕರನ್ನು ನಿಷೇಧಿಸುವುದು.

ಸತತ 2 ದಿನವೂ ಪಂದ್ಯ
ಅ. 9 ಮತ್ತು 10ರಂದು ಸತತ 2 ದಿನ ಹೈದರಾಬಾದ್‌ನಲ್ಲಿ ಲೀಗ್‌ ಪಂದ್ಯಗಳನ್ನು ಆಯೋಜಿಸುವುದಕ್ಕೂ ಭದ್ರತಾ ಸಂಸ್ಥೆಗಳು ಆಕ್ಷೇಪವೆತ್ತಿದ್ದವು. ಅ. 9ರಂದು ನ್ಯೂಜಿಲ್ಯಾಂಡ್‌-ನೆದರ್ಲೆಂಡ್ಸ್‌, ಅ. 10ರಂದು ಪಾಕಿಸ್ಥಾನ-ಶ್ರೀಲಂಕಾ ನಡುವಿನ ಪಂದ್ಯಗಳನ್ನು ಇಲ್ಲಿ ಆಡಲಾಗುವುದು. ಆದರೆ ಇಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.

ಟಾಪ್ ನ್ಯೂಸ್

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್‌ ಹೇಳಿದ್ದೇನು?

Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್‌ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

prithvi shaw

Mumbai Cricket: ಸಚಿನ್‌ ತೆಂಡೂಲ್ಕರ್‌ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

8(1

Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.