Karkala Taluk: ಇತಿಹಾಸದಲ್ಲಿಯೇ ಮೊದಲ ಬಾರಿಗೆ ತೀವ್ರ ಬರ


Team Udayavani, Sep 21, 2023, 7:00 AM IST

Karkala ತಾ|: ಇತಿಹಾಸದಲ್ಲಿಯೇ ಮೊದಲ ಬಾರಿಗೆ ತೀವ್ರ ಬರ

ಕಾರ್ಕಳ: ಪಶ್ಚಿಮ ಘಟ್ಟಗಳ ಸಾಲಿನ ತಳದಲ್ಲಿ, ರಾಜ್ಯದ ಚಿರಾಪುಂಜಿ ಖ್ಯಾತಿಯ ಆಗುಂಬೆಯ ಮಡಿಲಿನಲ್ಲಿ ಇರುವ ಕಾರ್ಕಳ ತಾಲೂಕು ತೀವ್ರ ಬರಪೀಡಿತ ತಾ|ಗಳ ಪಟ್ಟಿಯಲ್ಲಿ ಸೇರಿದ್ದು, ತಾಲೂಕಿನ ಇತಿಹಾಸದಲ್ಲೇ ಇಂತಹ ಮೊದಲ ಬಾರಿಗೆ ವಿಪ್ಲವ ಕಾಣಿಸಿಕೊಂಡಿದೆ.

ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣ ಪ್ರಾಧಿಕಾರದ ದತ್ತಾಂಶದ ಪ್ರಕಾರ 2015ರಿಂದ 2021ರ ಅವಧಿಯಲ್ಲಿ ಐದು ವರ್ಷ ಉಡುಪಿ ಜಿಲ್ಲೆಯಲ್ಲಿ ರಾಜ್ಯದಲ್ಲಿ ಅತೀ ಹೆಚ್ಚು ಮಳೆ ದಾಖಲಾಗಿತ್ತು. ಕರ್ನಾಟಕ ಚಿರಾಪುಂಜಿ ಖ್ಯಾತಿಯ ಆಗುಂಬೆಯ ಬಳಿಕ ರಾಜ್ಯದಲ್ಲಿ ಅತೀ ಹೆಚ್ಚು ಮಳೆ ಕಾರ್ಕಳ ತಾಲೂಕಿನಲ್ಲಿ ಸುರಿದ ಬಳಿಕವೇ ಇತರೆಡೆಗೆ ವಿಸ್ತರಣೆಗೊಳ್ಳುತ್ತಿತ್ತು. ಆದರೀಗ ಅದೇ ಕಾರ್ಕಳ ತಾಲೂಕು ತೀವ್ರ ಬರಗಾಲದ ಪಟ್ಟಿಗೆ ಸೇರಿದೆ!

ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಮಳೆ ಕೊರತೆ ತೀವ್ರವಾಗಿ ಕಂಡು ಬಂದಿದೆ. ಕಾರ್ಕಳದ ಜತೆಗೆ ಬ್ರಹ್ಮಾವರ ತಾಲೂಕು ಸಾಧಾರಣ ಬರ ಪೀಡಿತರ ಪಟ್ಟಿಗೆ ಸೇರಿದೆ.

ಅಧ್ಯಯನ
2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ತಾಲೂಕಿನಲ್ಲಿ ಜಿಲ್ಲಾಧಿಕಾರಿ, ಆಯಾ ಜಿಲ್ಲೆಯ ಕೃಷಿ, ತೋಟಗಾರಿಕೆ, ಮತ್ತು ಕಂದಾಯ ಅಧಿಕಾರಿಗಳು ಹಾಗೂ ಇತರ ಸಿಬಂದಿಗಳ ಒಳಗೊಂಡ ತಂಡವನ್ನು ರಚಿಸಿ ಮಾದರಿ ಬರ ಅಧ್ಯಯನ ನಡೆಸಲಾಗಿತ್ತು. ತಾಲೂಕಿನ ಮರ್ಣೆ, ನಿಂಜೂರು, ರೆಂಜಾಳ, ಬೋಳ ಗ್ರಾಮಗಳಲ್ಲಿ ಬರ ಪರಿಸ್ಥಿತಿ ಅಧ್ಯಯನ ನಡೆಸಲಾಗಿತ್ತು.ಮೊಬೈಲ್‌ ಆ್ಯಪ್‌ ಮೂಲಕ ಬೆಳೆ ಹಾನಿ ಕ್ಷೇತ್ರ ದೃಢೀಕರಣವನ್ನು ಕೈಗೊಂಡು ವರದಿ ಸಿದ್ಧಪಡಿಸಲಾಗಿತ್ತು.

ಬರ ಅಧ್ಯಯನ ಮಾನದಂಡವೇನು?
ಶುಷ್ಕ ಹವಾಮಾನ, ತೇವಾಂಶ ಕೊರತೆ, ಅಂತರ್ಜಲ ಸೂಚ್ಯಂಕ, ಅಣೆಕಟ್ಟು, ಜಲಾಶಯಗಳಲ್ಲಿ ನೀರಿನ ಸಂಗ್ರಹಣೆ ಮಟ್ಟ, ನದಿಗಳಲ್ಲಿನ ಒಳ ಹರಿವು ಆಧಾರದ ಮೇಲೆ ಮಳೆ ಪ್ರಮಾಣವನ್ನು ಕೂಡ ಬರ ಅಧ್ಯಯನದಲ್ಲಿ ಅಂದಾಜಿಸಲಾಗಿತ್ತು. ವಾಡಿಕೆ ಮಳೆ ಮತ್ತು ಸುರಿದ ಮಳೆಯನ್ನು ಆಯಾಮವಾಗಿ ರಿಸಿಕೊಂಡು ಬರಪೀಡಿತ ತಾಲೂಕಾಗಿ ಪರಿಗಣಿಸಲಾಗಿದೆ.

ಇನ್ನಷ್ಟು ಅಧ್ಯಯನ
ಮಾದರಿ ಅಧ್ಯಯನದ ಪ್ರಕಾರ ಸದ್ಯ ಸರಕಾರ ಬರ ಪೀಡಿತ ಪಟ್ಟಿಯಲ್ಲಿ ಉಡುಪಿ ಜಿಲ್ಲೆಯ ಎರಡು ತಾಲೂಕುಗಳನ್ನು ಘೋಷಿಸಿದೆ. ಮುಂದಿನ ದಿನಗಳಲ್ಲಿ ಕೃಷಿ, ತೋಟಗಾರಿಕೆ, ಕಂದಾಯ ವಿಭಾಗಗಳಲ್ಲಿ ಇನ್ನಷ್ಟು
ಅಧ್ಯಯನ ನಡೆಯಲಿದೆ.
– ಸತೀಶ್‌, ಕೃಷಿ ಇಲಾಖೆ ತಾಂತ್ರಿಕ ಅಧಿಕಾರಿ

– ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

puttige-5

Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ

13

Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್‌ಅಪ್‌

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Karkala: ಬೈಕ್‌ ಢಿಕ್ಕಿ; ಗಾಯ

Karkala: ಬೈಕ್‌ ಢಿಕ್ಕಿ; ಗಾಯ

ನ. 26 : ಕಾಪುವಿನಲ್ಲಿ ಸಂವಿಧಾನ ಉಳಿಸಿ ಬೃಹತ್ ಆಂದೋಲನ ಮತ್ತು ಜಾಗೃತಿ ಜಾಥಾ ಆಯೋಜನೆ

ನ. 26 : ಕಾಪುವಿನಲ್ಲಿ ಸಂವಿಧಾನ ಉಳಿಸಿ ಬೃಹತ್ ಆಂದೋಲನ ಮತ್ತು ಜಾಗೃತಿ ಜಾಥಾ ಆಯೋಜನೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.