Karnataka: ಜಲಾಶಯ ಬರಿದು: ಕುಡಿಯುವ ನೀರಿಗೂ ತತ್ವಾರ
Team Udayavani, Sep 21, 2023, 10:58 PM IST
ಮುಂಗಾರು ಮಳೆ ಕೊರತೆ ನಡುವೆಯೂ ಜುಲೈ ತಿಂಗಳ ಮಧ್ಯೆ ಕೊಂಚ ಮಳೆ ಸುರಿದ ಪರಿಣಾಮ ಕೆಆರ್‌ಎಸ್, ಕಬಿನಿ ಹಾಗೂ ಹೇಮಾವತಿ ಜಲಾಶಯ ಗಳಲ್ಲಿ ನೀರಿನ ಸಂಗ್ರಹ ಏರಿತ್ತು. ಈ ನಡುವೆ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುವ ಅನಿವಾರ್ಯತೆಗೆ ರಾಜ್ಯ ಸರಕಾರ ಸಿಲುಕಿದ ಪರಿಣಾಮ ಜಲಾಶಯಗಳ ನೀರಿನ ಮಟ್ಟ ಭಾರೀ ಕುಸಿದಿದೆ. ಈಗ ರಾಜ್ಯ ಸರಕಾರ ಮತ್ತೆ ಸುಪ್ರೀಂಕೋರ್ಟ್ ಆದೇಶ ಪಾಲಿಸಿದರೆ ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ತತ್ವಾರ ಎದುರಾಗುವುದು ನಿಶ್ಚಿತ. ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಸ್ಥಿತಿಗತಿ ಕುರಿತ ಪಕ್ಷಿನೋಟ ಇಲ್ಲಿದೆ.
ಹೇಮಾವತಿ ಡ್ಯಾಂನಲ್ಲಿ 13 ಟಿಎಂಸಿ ಮಾತ್ರ ಲಭ್ಯ
ಹಾಸನ: ಹೇಮಾವತಿ ಜಲಾಶಯ ಈ ವರ್ಷ ಬಹುತೇಕ ಭರ್ತಿಯಾಗುವ ಹಂತ ತಲುಪಿದ್ದರೂ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಸಿಗಲೇ ಇಲ್ಲ. ಜಲಾಶಯಕ್ಕೆ ಆ.12ರ ವೇಳೆಗೆ 31.72 ಟಿಎಂಸಿ ನೀರು ಸಂಗ್ರಹವಾಗಿತ್ತು. ಆ.12ರಿಂದ ನಾಲೆಗಳಿಗೆ ನೀರು ಹರಿಸಲು ಆರಂಭಿಸಿದ್ದರಿಂದ ಜಲಾಶಯದ ನೀರಿನ ಸಂಗ್ರಹವು 32 ಟಿಎಂಸಿಗಿಂತ ಮೇಲೆ ಏರಲೇ ಇಲ್ಲ. ಈಗ ಜಲಾಶಯದಲ್ಲಿ ನೀರಿನ ಸಂಗ್ರಹ 17.74 ಟಿಎಂಸಿ ಇದೆ. ಅದ ರಲ್ಲಿ ಬಳಕೆಗೆ ಲಭ್ಯ ನೀರು 13.36 ಟಿಎಂಸಿ ಮಾತ್ರ.
ಈ ವರ್ಷ ಸಂಗ್ರಹವಾಗಿದ್ದ ನೀರಿನಲ್ಲಿ ತಮಿಳುನಾಡಿಗೂ ನೀರು ಹರಿದಿದ್ದು, ಯೋಜನೆ ವ್ಯಾಪ್ತಿಯ ಜಿಲ್ಲೆಗಳ ಪೈಕಿ ಅತಿ ಹೆಚ್ಚು ಪಾಲನ್ನು ಈ ವರ್ಷ ತುಮಕೂರು ಜಿಲ್ಲೆ ಪಡೆದುಕೊಂಡಿದೆ. ಆ.12ರಿಂದ ಸೆ.20ರ ವರೆಗೆ ನಾಲೆಗಳಲ್ಲಿ ಅಚ್ಚುಕಟ್ಟು ಪ್ರದೇಶದ ಕೆರೆ, ಕಟ್ಟೆಗಳನ್ನು ತುಂಬಿಸಲು ನೀರು ಹರಿಸಲಾಗಿದ್ದು, ಕುಡಿಯುವ ನೀರಿಗಾಗಿ 13.36 ಟಿಎಂಸಿ ಕಾದಿರಿಸಿದೆ. ಹಾಸನ ನಗರ, ಅರಸೀಕೆರೆ ನಗರ ಹಾಗೂ ಎಲ್ಲ 500ಕ್ಕೂ ಹೆಚ್ಚು ಹಳ್ಳಿಗಳು, ಅರಕಲಗೂಡು, ಹೊಳೆನರಸೀಪುರ, ಚನ್ನರಾಯ ಪಟ್ಟಣದ ನಾಗರಿಕರು ಕುಡಿಯುವ ನೀರಿಗಾಗಿ ಹೇಮಾವತಿ ಜಲಾಶಯವನ್ನೇ ಅವಲಂಬಿಸಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ, ಪಾಂಡವಪುರ, ನಾಗಮಂಗಲ ಪಟ್ಟಣಗಳು ಹಾಗೂ ತುಮಕೂರು ನಗರ, ತಿಪಟೂರು ನಗರ ಸಹಿತ ತುಮಕೂರು ಜಿಲ್ಲೆಯ ತಾಲೂಕು ಕೇಂದ್ರಗಳು ಹೇಮಾವತಿ ಜಲಾಶಯದ ನೀರನ್ನೇ ಅವಲಂಬಿಸಿವೆ.
ಬರಿದಾಗಲಿದೆ ಕೆಆರ್‌ಎಸ್
ಮಂಡ್ಯ: ಜೂ.1ರಿಂದ ಸೆ.19ರ ವರೆಗೆ ತಮಿಳುನಾಡಿಗೆ ಕೆಆರ್‌ಎಸ್ ಜಲಾಶಯದಿಂದ 38.367 ಟಿಎಂಸಿ ನೀರು ಹರಿದು ಹೋಗಿದೆ. ಆ.4ರಂದು ಜಲಾಶಯದಲ್ಲಿ 35.347 ಟಿಎಂಸಿ ನೀರು ಸಂಗ್ರಹವಾಗಿತ್ತು. ಬಳಿಕ ಬೆಳೆ ಹಾಗೂ ತಮಿಳುನಾಡಿಗೆ ನೀರು ಹರಿಸಿದ ಪರಿಣಾಮ ಸೆ.21ರ ರಾತ್ರಿ ವೇಳೆಗೆ ಜಲಾಶಯದಲ್ಲಿ 20.563 ಟಿಎಂಸಿ ನೀರು ಮಾತ್ರ ಉಳಿದಿದೆ.
ಈಗ ಸುಪ್ರೀಂಕೋರ್ಟ್ ಆದೇಶದಂತೆ ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 5 ಸಾವಿರ ಕ್ಯುಸೆಕ್ ನೀರು ಹರಿಸಿದರೆ 7 ಟಿಎಂಸಿ ನೀರು ಖಾಲಿಯಾಗಲಿದ್ದು, 13 ಟಿಎಂಸಿ ನೀರು ಉಳಿಯಲಿದೆ. ಇದರಲ್ಲಿ 5 ಟಿಎಂಸಿ ನೀರು ಡೆಡ್ ಸ್ಟೋರೇಜ್ ಇದ್ದು, ಉಳಿದ 8 ಟಿಎಂಸಿ ಕುಡಿಯಲು ಹಾಗೂ ಕೃಷಿ ಬಳಕೆಗೆ ಸಾಕಾಗದಂತಾಗಿದೆ.
ಬೆಂಗಳೂರಿಗೆ ಜಲಕ್ಷಾಮ ಕಂಟಕ ಖಚಿತ
ಬೆಂಗಳೂರು: ಕೆಆರ್‌ಎಸ್ ಒಡಲು ಖಾಲಿಯಾಗಿ ಡೆಡ್ ಸ್ಟೋರೇಜ್ ತಲುಪುವ ಹಂತದಲ್ಲಿದ್ದು, ಮಳೆ ಕೊರತೆ ಮುಂದವರಿದರೆ ರಾಜಧಾನಿಗೆ ಜಲಕ್ಷಾಮ ಕಂಟಕ ಖಚಿತ. ಬೆಂಗಳೂರಿನಲ್ಲಿ 10.50 ಲಕ್ಷ ಮನೆಗಳಿಗೆ ಕಾವೇರಿ ನೀರು ಪೂರೈಕೆಯಾಗುತ್ತಿದ್ದು, ಈಗಾಗಲೇ ನೀರಿನ ಸಮಸ್ಯೆ ಉಲ್ಬಣಿಸಿದೆ. ಮುಂದಿನ ದಿನಗಳಲ್ಲಿ ಇದು ಇನ್ನಷ್ಟು ಬಿಗಡಾಯಿಸಲಿದೆ ಎಂದು ಜಲಮಂಡಳಿ ಅಧಿಕಾರಿಗಳು ಮುನ್ಸೂಚನೆ ಕೊಟ್ಟಿದ್ದಾರೆ. ಕಾವೇರಿ ನೀರನ್ನೇ ಅವಲಂಬಿಸಿರುವ ಬೆಂಗಳೂರಿಗೆ ಪ್ರತಿ ತಿಂಗಳಿಗೆ ಒಂದೂವರೆ ಟಿಎಂಸಿ ನೀರು ಬೇಕಾಗುತ್ತದೆ. ನಿತ್ಯ 1,450 ಎಂಎಲ್‌ಡಿ ಪಂಪ್ ಮಾಡಲಾಗುತ್ತಿದ್ದರೂ ನೀರಿನ ಕೊರತೆ ಉಂಟಾಗಿದೆ. ಕೆಆರ್‌ಎಸ್‌ನಲ್ಲಿ ಲಭ್ಯವಿರುವ ನೀರು ಕೆಲವೇ ದಿನಗಳಿಗೆ ಖಾಲಿ ಆಗುವ ಲಕ್ಷಣ ಗೋಚರಿಸಿರುವುದು ಆತಂಕಕ್ಕೀಡು ಮಾಡಿದೆ.
ಕಬಿನಿ ಡ್ಯಾಂನಲ್ಲಿ ಕುಸಿದ ನೀರಿನ ಸಂಗ್ರಹ
ಎಚ್.ಡಿ.ಕೋಟೆ: ಒಟ್ಟು 19.52 ಟಿಎಂಸಿ ಸಾಮರ್ಥ್ಯದ ಕಬಿನಿ ಜಲಾಶಯವೂ ಜುಲೈ ಮಳೆಯಲ್ಲಿ ತುಂಬಿತ್ತು. ತಮಿಳುನಾಡಿಗೆ 15 ದಿನಗಳ ಕಾಲ 10 ಸಾವಿರ ಕ್ಯುಸೆಕ್ ನೀರನ್ನು ಕಬಿನಿ ಜಲಾಶಯದಿಂದಲೇ ಹರಿಸಿದ್ದರಿಂದ ತುಂಬಿದ್ದ ಜಲಾಶಯ ಸಂಗ್ರಹಮಟ್ಟ ಭಾರೀ ಕುಸಿದಿದೆ. ಈಗ ಕಬಿನಿ ಜಲಾಶಯದಲ್ಲಿ 75.70 (14.65) ಟಿಎಂಸಿ ನೀರಿನ ಸಂಗ್ರಹ ಮಟ್ಟ ಹೊಂದಿದೆ. ಜಲಾಶಯದ ಸಂಗ್ರಹ ಸಾಮರ್ಥ್ಯ 19.52 ಟಿಎಂಸಿಯಲ್ಲಿ ಬಳಕೆಗೆ ಸಿಗುವುದು 11.99 ಟಿಎಂಸಿ ಮಾತ್ರ. ಉಳಿದ 7.52 ಟಿಎಂಸಿಯಲ್ಲಿ 6 ಟಿಎಂಸಿ ಡೆಡ್ ಸ್ಟೋರೇಜ್, ಇನ್ನುಳಿದ 1.52 ಟಿಎಂಸಿ ನೀರನ್ನು ಹಿನ್ನೀರಿನಲ್ಲಿರುವ ಅಪಾರ ಪ್ರಮಾಣದ ವನ್ಯಜೀವಿಗಳು ಹಾಗೂ ಜಲಚರಗಳಿಗೆ ಕುಡಿಯುವ ನೀರಿಗೆ ತೊಂದರೆ ಆಗುವುದರಿಂದ ಬಳಸುವಂತಿಲ್ಲ. ತಮಿಳುನಾಡಿಗೆ ನೀರು ಹರಿಸಿದರೆ ಬೆಂಗಳೂರು ಸಹಿತ ಜಲಾಶಯ ಅವಲಂಬಿತ ನಗರ ಪಟ್ಟಣಗಳು, ನೂರಾರು ಗ್ರಾಮ ಗಳ ಕುಡಿಯುವ ನೀರಿಗೂ ತತ್ವಾರ ಉಂಟಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ
MUST WATCH
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹೊಸ ಸೇರ್ಪಡೆ
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.