Human Rights ಸಂಘಟನೆ ಹೆಸರು ದುರ್ಬಳಕೆ; ಪ್ರಕರಣ ದಾಖಲು
Team Udayavani, Sep 22, 2023, 12:36 AM IST
ಉಡುಪಿ: ರಾಷ್ಟ್ರೀಯ ಹ್ಯೂಮನ್ ರೈಟ್ಸ್ ಕಮಿಷನ್ ಸಂಘಟನೆಯ ಹೆಸರು ಹಾಗೂ ಲೋಗೋವನ್ನು ದುರ್ಬಳಕೆ ಮಾಡಿ ಕೊಳ್ಳುತ್ತಿರುವ ಬಗ್ಗೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಟ ಪೊಲೀಸ್ ಠಾಣಾಧಿಕಾರಿ ಶಂಭುಲಿಂಗಯ್ಯ ಅವರಿಗೆ ಸಾರ್ವಜನಿಕರು, ಭಾತ್ಮೀದಾರರಿಂದ ಬಂದ ಖಚಿತ ಮಾಹಿತಿ ಮೇರೆಗೆ ವಿಚಾರಣೆ ನಡೆಸಿದಾಗ ದಿನೇಶ ಗಾಣಿಗ (45) ಎನ್ನುವಾತ ರಾಷ್ಟ್ರೀಯ ಹ್ಯೂಮನ್ ರೈಟ್ಸ್ ಕಮಿಟಿ ಆಫ್ ಇಂಡಿಯಾ ಎಂಬ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂದು ಹೇಳಿಕೊಂಡು ರಾಷ್ಟ್ರೀಯ ಹ್ಯೂಮನ್ ರೈಟ್ಸ್ ಕಮಿಷನ್ ಸಂಘಟನೆಯ ಹೆಸರು ಹಾಗೂ ಲೋಗೋವನ್ನು ಹೊಂದಾಣಿಕೆಯಾಗುವ ರೀತಿ ಯಲ್ಲಿ ತಯಾರಿಸಿ ದುರ್ಬಳಕೆ ಮಾಡಿಕೊಳ್ಳುತ್ತಿರುವುದು ತಿಳಿದು ಬಂದಿದೆ.
ಭಾರತದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸೂಚನೆಯಂತೆ ಅದರ ಹೆಸರನ್ನು, ಲೋಗೊಗಳನ್ನು ಯಾವುದೇ ಸಂಸ್ಥೆ, ವ್ಯಕ್ತಿಗಳು ತಿರುಚಿ ಬಳಸುವುದು ಅಥವಾ ಆಯೋಗದ ಹೆಸರನ್ನು ಪ್ರತ್ಯಕ್ಷ/ಪರೋಕ್ಷವಾಗಿ ಹಾಳು ಮಾಡುವುದು ಕಾನೂನಿನ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಹೀಗಾಗಿ ಈತನ ಕೃತ್ಯದ ಬಗ್ಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸ್ಥಳೀಯ ಪರಿಸರದಲ್ಲಿ ಈ ರೀತಿ ಕೃತ್ಯಗಳು ಕಂಡುಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡುವಂತೆ ಕೋಟ ಪೊಲೀಸರು ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Police Raid: ಮಾದಕವಸ್ತು, ಅಕ್ರಮ ಮದ್ಯಮಾರಾಟದ ವಿರುದ್ಧ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.